ವಿಮಾ ಸೌಲಭ್ಯ ಪಡೆದುಕೊಳ್ಳಿ
Team Udayavani, Feb 9, 2022, 12:45 PM IST
ಬಸವಕಲ್ಯಾಣ: ಕಷ್ಟ ಕಾಲದಲ್ಲಿ ವಿಮಾ ಯೋಜನೆ ಸಹಾಯಕ್ಕೆ ಬರುತ್ತವೆ. ಹೀಗಾಗಿ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರು ವಿಮಾ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಟಿಐಇಸಿ ಸಂಯೋಜಕ ವೀರಾರೆಡ್ಡಿ ಹೇಳಿದರು.
ಹಾರಕೂಡ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ವಿಮಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ (ವಿಮಾ) ಯೋಜನೆ ವಾರ್ಷಿಕ 330 ರೂ. ಕಂತು ಪಾವತಿಸಿದರೆ, 2 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು. ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ ವರ್ಷಕ್ಕೆ 12 ರೂ. ಕಂತು ಪಾವತಿಸುವ ಮೂಲಕ 2 ಲಕ್ಷ ರೂ. ವಿಮಾ ಸೌಲಭ್ಯ ದೊರಯಲಿದೆ ಎಂದರು.
ಹಾರಕೂಡ ಬ್ಯಾಂಕ್ ವ್ಯವಸ್ಥಾಪಕ ಯೋಗೇಶ ಪಾಂಡೆ ವಿಮಾ ಯೋಜನೆಗಳಿಗೆ ಬೇಕಾದ ದಾಖಲೆಗಳ ಕುರಿತು ಮಾಹಿತಿ ನೀಡಿದರು. ನಂತರ ಕೂಲಿ ಕಾರ್ಮಿಕರಿಗೆ ವಿಮಾ ಯೋಜನೆಗಳ ನಮೂನೆಗಳು ತುಂಬಿಸಲಾಯಿತು. ಈ ವೇಳೆ ಪಿಡಿಒ ವಿಷ್ಣುಕಾಂತರೆಡ್ಡಿ, ಟಿಎಇ ಜಲೀಲ್ ಸಾಬ್, ವೆಂಕಟರಾವ್, ಮಲ್ಲಿಕಾರ್ಜುನ, ಡಿಇಒ ಶರಣು ಬಾಲಕಿಲೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.