ಗಡಿ ಜಿಲ್ಲೆಯೊಂದಿಗಿತ್ತು ಉತ್ತಮ ಬಾಂಧವ್ಯ


Team Udayavani, Nov 13, 2018, 1:03 PM IST

vij-1.jpg

ಬೀದರ: ಕೇಂದ್ರ ಸಚಿವ ಅನಂತಕುಮಾರ್‌ ರಾಜ್ಯ ಕಂಡ ಅಪರೂಪದ ನಾಯಕ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಶ್ರಮಿಸಿದ ನಾಯಕರಲ್ಲಿ ಇವರು ಕೂಡ ಒಬ್ಬರಾಗಿದ್ದು, ಗಡಿ ಜಿಲ್ಲೆ ಬೀದರನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

1980ರಿಂದ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಅನಂತಕುಮಾರ್‌ ಕೂಡ ನಿರಂತರ ಸಾಥ್‌ ನೀಡಿ ಪಕ್ಷ ಬೆಳೆಸುವ ಕೆಲಸ ಮಾಡಿದ್ದಾರೆ. ಈ ಭಾಗದಲ್ಲಿ ಸೈಕಲ್‌ ಹಿಡಿದುಕೊಂಡು ಊರೂರು ಸುತ್ತಿ ಪಕ್ಷ ಸಂಘಟಿಸಿದ ಅವರು, ನೂರಕ್ಕು ಅಧಿಕ ಬಾರಿ ಈ ಭಾಗಕ್ಕೆ ಭೇಟಿ ನೀಡಿದ್ದಾರೆ.

ಹುಮನಾಬಾದ ಮಾಜಿ ಶಾಸಕ ಸುಭಾಷ ಕಲ್ಲೂರ್‌ ಅವರೊಂದಿಗೆ ಉತ್ತಮ ಸಂಪರ್ಕವಿತ್ತು. ಜಿಲ್ಲೆಯಲ್ಲಿ ಅತೀ ಹೆಚ್ಚು ಬಾರಿ ಹುಮನಾಬಾದ ತಾಲೂಕಿಗೆ ಅನಂತಕುಮಾರ್‌ ಅವರು ಭೇಟಿ ನೀಡಿದ್ದಾರೆ. ಅಲ್ಲದೆ, ಕಳೆದ ವಿಧಾನ ಸಭೆ ಚುನಾವಣೆಗೂ ಮುನ್ನ ನಡೆದ ಪರಿವರ್ತನಾ ಯಾತ್ರೆಯಲ್ಲಿ ಅವರು ಭಾಗವಹಿಸಿ ಭಾಷಣ ಮಾಡಿದ್ದರು.

ವಿಧಾನ ಸಭೆ ಚುನಾವಣೆ ಸಂದರ್ಭಲ್ಲಿ ಜಿಲ್ಲೆಯ ಪೈಕಿ ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ರೋಡ್‌ ಶೋ ನಡೆಸಿ ಚುನಾವಣೆ ಪ್ರಚಾರ ಮಾಡಿರುವುದನ್ನು ಸನ್ಮರಿಸಬಹುದಾಗಿದೆ. 

ಈ ಭಾಗದ ಅನೇಕ ವಿಧಾನ ಸಭೆ ಹಾಗೂ ಲೋಕ ಸಭೆ ಚುನಾವಣೆಯಲ್ಲಿ ಅನಂತಕುಮಾರ್‌ ಅವರು ಪ್ರಚಾರ ಮಾಡಿದ್ದಾರೆ. ಕೆಲಸ ಮಾಡಲಾಗದ ರಾಜಕಾರಣಿಗಳು ಜನಪ್ರತಿನಿಧಿಗಳಾಗಲು ನಾಲಾಯಕರು ಎಂಬ ಹರಿತವಾದ ಮಾತುಗಳ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ, ಬಿಜೆಪಿಯ ಅನೇಕ ಮುಖಂಡರನ್ನು ಒಂದು ಕಡೆ ಸೇರಿಸಿ ಪಕ್ಷ ಸಂಘಟನೆಯ ಸಲಹೆಗಳನ್ನು ನೀಡಿ ಪಕ್ಷ ಬೆಳೆಸುವ ಕಾರ್ಯವನ್ನು ಮಾಡಿದ್ದಾರೆ. 

ಸಿಪೆಟ್‌ ಸಂಸ್ಥೆ ಮಂಜೂರು: ಇದೇ ವರ್ಷದ ಫೆಬ್ರವರಿ 20ರಂದು ಭಾಲ್ಕಿ ಪಟ್ಟಣದಲ್ಲಿ ಹೆದ್ದಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ನಿತಿನ್‌ ಗಡ್ಕರಿ ಅವರೊಂದಿಗೆ ಆಗಮಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್‌ ಜಿಲ್ಲೆಯಲ್ಲಿ ಕೇಂದ್ರಿಯ ಪ್ಲಾಸ್ಟಿಕ್‌ ಇಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್‌) ಆರಂಭಿಸುವುದಾಗಿ ಘೋಷಣೆ ಮಾಡಿದ್ದರು. ನೂರು ಎಕರೆ ಭೂಮಿಯ ಪೈಕಿ ಕೇವಲ ಹತ್ತು ಎಕರೆ ಭೂಮಿ ರಾಜ್ಯ ಸರ್ಕಾರ ನೀಡಿದರೆ ಪ್ರಸಕ್ತ ವರ್ಷವೇ ಸಂಸ್ಥೆ ಪ್ರಾರಂಭಿಸುವ ಭರವಸೆ
ನೀಡಿದ್ದರು. ಇಲ್ಲಿ ತರಬೇತಿ ಪಡೆದವರು ವಿದೇಶದಲ್ಲೂ ಕೆಲ ಮಾಡಬಹುದಾದ ಯೋಜನೆ ಅವರದಾಗಿತ್ತು. ಈ ಭಾಗದ ಯುವಕರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಈ ಸಂಸ್ಥೆ ಬೀದರ ಜಿಲ್ಲೆಯಲ್ಲಿ ಪ್ರಾರಂಭಿಸುವ ಕುರಿತು ಅಂದು ಅವರ ಭಾಷಣದಲ್ಲಿ ಹೇಳಿದ್ದರು.

ಕೇಂದ್ರ ಸಚಿವ ಅನಂತಕುಮಾರ್‌ ಅವರು ನನ್ನನ್ನು ತಮ್ಮನಂತೆ ಗುರುತಿಸಿದರು. ನಾನು ಮೊದಲನೇ ಸಲ ಸಂಸತ್ತಿಗೆ ಪ್ರವೇಶಿಸಿದ ಸಂದರ್ಭದಲ್ಲಿ ಸಂಸತ್ತಿನ ಪ್ರತಿ ಸಚಿವಾಲಯದ ಸಚಿವರಿಗೆ ಪರಿಚಯ ಮಾಡಿಸಿ, ಇವನು ನನ್ನ ತಮ್ಮ ಎಂದು ಪರಿಚಯ ಮಾಡಿಸಿದ್ದರು. ಅನೇಕ ಯೋಜನೆಗಳ ಕುರಿತು ಚರ್ಚೆಗಳನ್ನು ನಡೆಸಿದ ಸಂದರ್ಭಲ್ಲಿ ಅನಂತಕುಮಾರ ಅವರು ಉತ್ತಮ ಸ್ಪಂದನೆ ನೀಡುತ್ತಿದ್ದರು. ಗಡಿ ಜಿಲ್ಲೆಯ ಅಭಿವೃದ್ಧಿಗಾಗಿ ಅನೇಕ ರೀತಿಯ ಸಹಕಾರವನ್ನು ಅವರು ನೀಡಿದ್ದಾರೆ. ಬೀದರ ಜಿಲ್ಲೆಯ ಬಗ್ಗೆ ಅವರು ಹೆಚ್ಚು ಪ್ರೀತಿ ಹೊಂದಿದ್ದರು. ಕಾರಣ ಇಲ್ಲಿಯೇ ಸಿಪೆಟ್‌ ಸಂಸ್ಥೆ ಸ್ಥಾಪಿಸುವ ಕುರಿತು ಘೋಷಣೆ ಮಾಡಿದ್ದರು. ಇಂದು ಅವರ ನಿಧನದಿಂದ ಬಿಜೆಪಿಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
 ಭಗವಂತ ಖೂಬಾ, ಸಂಸದರು, ಬೀದರ

ಕೇಂದ್ರ ಸಚಿವ ಅನಂತಕುಮಾರ್‌ ನಿಧನ ಸುದ್ದಿ ನೋವುಂಟು ಮಾಡಿದೆ. ಬೆಂಗಳೂರು ದಕ್ಷಿಣದಿಂದ ಸತತವಾಗಿ ಲೋಕಸಭೆಗೆ ಆಯ್ಕೆ ಆಗುತ್ತಿರುವ ಪ್ರಭಾವಿ ಹಾಗೂ ಜನಪ್ರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ಹಠಾತ್‌ ನಿಧನದಿಂದ ಉತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ದೇವಿ ತುಳಜಾ ಭವಾನಿ ದುಃಖ ಭರಿಸುವ ಶಕ್ತಿ ನೀಡಲಿ.
 ಬಂಡೆಪ್ಪ ಖಾಶೆಂಪೂರ, ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವರು

ಕೇಂದ್ರ ಸಚಿವ ಅನಂತಕುಮಾರ್‌ ಸರಳ, ಸಜ್ಜನಿಕೆಯ ವ್ಯಕ್ತಿ. ಬೀದರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರೊಂದಿಗೆ ಸಾಥ್‌ ನೀಡುತ್ತಿದ್ದರು. ಜಿಲ್ಲೆಯಲ್ಲಿ ಅತೀ ಹೆಚ್ಚು ಹುಮನಾಬಾದ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಅನೇಕ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾರೆ. ಪಕ್ಷ ಸಂಘಟಿಸುವ ಕಾರ್ಯಕ್ಕೆ ಅವರ ಕೊಡುಗೆ ಇದೆ. ಎಲ್ಲ ರೀತಿಯ ಸಮಸ್ಯೆಗಳಿಗೆ ಸರಳವಾಗಿ ಪರಿಹಾರ ಕಂಡುಕೊಳ್ಳುವ ವ್ಯಕ್ತಿತ್ವ ಅವರದಾಗಿತ್ತು. 
 ಸುಭಾಷ ಕಲ್ಲೂರ್‌, ಮಾಜಿ ಶಾಸಕರು

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.