ಕೃಷಿ ಕಾಲೇಜು ಮಂಜೂರಿಗೆ ಸರ್ಕಾರಕ್ಕೆ ಆಗ್ರಹ

Team Udayavani, Feb 17, 2022, 5:59 PM IST

22protest

ಬೀದರ: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ ನಲ್ಲಿ ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆ ಅನುದಾನದಡಿ ಜಿಲ್ಲೆಗೆ ಕೃಷಿ ಕಾಲೇಜು ಮಂಜೂರು ಮಾಡುವಂತೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಜಿಲ್ಲಾ ರೈತ ಸಂಘದ ಪದಾಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು. ಫಲವತ್ತಾದ ಮಣ್ಣು, ಉತ್ತಮ ಹವಾಮಾನ ಇರುವ ಕಾರಣ ಜಿಲ್ಲೆಯಲ್ಲಿ ವಿವಿಧ ಪದ್ಧತಿಗಳಲ್ಲಿ 52 ಬಗೆಯ ಬೆಳೆ ಬೆಳೆಯಲಾಗುತ್ತಿದೆ. ಜಿಲ್ಲೆಯ ಆರ್ಥಿಕತೆ ಒಕ್ಕಲುತನವನ್ನೇ ಅವಲಂಬಿಸಿದೆ ಎಂದು ಸಚಿವರ ಗಮನ ಸೆಳೆದರು.

ಸರ್ಕಾರ, ರಾಜ್ಯದಲ್ಲಿ 10 ಕೃಷಿ ವಲಯ ರಚಿಸಿದ್ದು, ಬೀದರ ವಲಯ 1 (ಅರೆ ಮಲೆನಾಡು) ರಲ್ಲಿ ಇದೆ. ಈಗಾಗಲೇ ವಲಯ 2ರಲ್ಲಿ ರಾಯಚೂರು ಕೃಷಿ ವಿವಿ ಅಡಿಯಲ್ಲಿ ಮೂರು ಕೃಷಿ ಕಾಲೇಜುಗಳು ಹಾಗೂ ಒಂದು ಕೃಷಿ ಎಂಜಿನಿಯರಿಂಗ್‌ ಕಾಲೇಜು ಇದೆ. ಆದರೆ, ಬೀದರನಿಂದ ದೂರ ಇರುವುದರಿಂದ ಬಡ ಕೃಷಿಕರ ಮಕ್ಕಳಿಗೆ ಕೃಷಿ ಅಧ್ಯಯನಕ್ಕೆ ತೊಡಕಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ, ಕೃಷಿ ಸಂಶೋಧನಾ ಕೇಂದ್ರಗಳಿವೆ. ಕೃಷಿಯಲ್ಲಿನ ಆಧುನಿಕ ತಾಂತ್ರಿಕತೆ ರೈತರಿಗೆ ತಲುಪಿಸಲು ಕೃಷಿ ಕಾಲೇಜು ಅವಶ್ಯ ಎಂದು ಮನವರಿಕೆ ಮಾಡಿದರು.

ಕೃಷಿ ಕಾಲೇಜಿಗೆ 70 ಎಕರೆ ಜಮೀನು ಬೇಕು. ಜನವಾಡ ಹತ್ತಿರದ ಕೃಷಿ ವಿಜ್ಞಾನ ಕೇಂದ್ರದಲ್ಲಿ 36 ಎಕರೆ ಮತ್ತು ಹಳ್ಳದಕೇರಿ ಸಮೀಪದ ಕೃಷಿ ಸಂಶೋಧನಾ ಕೇಂದ್ರದಲ್ಲಿ 34 ಎಕರೆ ಜಮೀನು ಸೇರಿ ಒಟ್ಟು 70 ಎಕರೆ ಜಮೀನು ಲಭ್ಯ ಇದೆ. ಕೆವಿಕೆಯಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್‍ಗಳು ನಡೆಯುತ್ತಿವೆ. ಇದಕ್ಕಾಗಿ 3.5 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಇದನ್ನು ಕೃಷಿ ಕಾಲೇಜಿಗೆ ಬೋಧನಾ ಕೊಠಡಿ, ಆಡಳಿತ ಕಚೇರಿ, ವಿದ್ಯಾರ್ಥಿಗಳ ವಸತಿಗೃಹ ಹಾಗೂ ಪ್ರಾಯೋಗಿಕ ಪಾಠ ಬೋಧನೆಗೆ ಬಳಸಿಕೊಳ್ಳಬಹುದು ಎಂದರು.

ಈ ವರ್ಷದಿಂದಲೇ ಮೊದಲ ವರ್ಷದ ಕೃಷಿ ವಿಷಯದ ಬೋಧನೆಗೆ ಕೃಷಿ ವಿವಿ ಅಧೀನದ ಕೃಷಿ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ, ಕೃಷಿ ಡಿಪ್ಲೊಮಾ ಸಂಸ್ಥೆಗಳ ಸಿಬ್ಬಂದಿ ಸೇವೆ ಪಡೆಯಬಹುದಾಗಿದೆ. ರಾಯಚೂರು ಕೃಷಿ ವಿವಿ ಡಿನ್ಸ್‌ ಟೀಮ್‌ ಬೀದರನಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತು ಸರ್ಕಾರಕ್ಕೆ ಸಕಾರಾತ್ಮಕ ವರದಿ ಸಲ್ಲಿಸಿದೆ ಎಂದರು.

ಸಚಿವರು ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಉನ್ನತ ಅಧಿಕಾರಿಗಳಿಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ, ಶ್ರೀಮಂತ ಬಿರಾದಾರ, ನಾಗಯ್ಯ ಹಿರೇಮಠ, ಬಾಬುರಾವ್‌ ಜೊಳದಾಪಕಾ, ಪ್ರವೀಣ ಕುಲಕರ್ಣಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.