ಒಮಿಕ್ರಾನ್ ತಡೆಗೆ ಸರಕಾರ ಸನ್ನದ್ಧ: ಸಿಎಂ
Team Udayavani, Dec 7, 2021, 5:20 AM IST
ಬೀದರ್: ರಾಜ್ಯದಲ್ಲಿ ಕೋವಿಡ್ ಸೋಂಕು ತಡೆಗೆ ಸರಕಾರ ಎಲ್ಲ ರೀತಿಯಲ್ಲಿ ಸನ್ನದ್ಧವಾಗಿದ್ದು, ಮುಂದಿನ ಪರಿಣಾಮ ಮತ್ತು ವಿಸ್ತರಣೆ ಬಗ್ಗೆ ಕಾಲಕಾಲಕ್ಕೆ ತಜ್ಞರಿಂದ ಮಾಹಿತಿ ಪಡೆದು ಚಿಕಿತ್ಸೆ, ಸೌಲಭ್ಯ ನೀಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಭಾಲ್ಕಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಒಮಿಕ್ರಾನ್ ಕಾಣಿಸಿಕೊಂಡಿದ್ದು, ಸರಕಾರ ಅಗತ್ಯ ನಿಗಾ ವಹಿಸಿದ್ದಲ್ಲದೆ, ತಜ್ಞರ ಮಾರ್ಗಸೂಚಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.
ವಿಶೇಷವಾಗಿ ವಿದ್ಯಾರ್ಥಿಗಳ ವಸತಿ ನಿಲಯದಂಥ ಕ್ಲಸ್ಟರ್‌ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ವೈರಸ್ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ಕ್ಲಸ್ಟರ್ ಮ್ಯಾನೇಜ್‌ಮೆಂಟ್‌ಗಳಿಗೆ ಕೊಡಲಾಗಿದೆ.
ಇದನ್ನೂ ಓದಿ:ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!
ಚಿಕ್ಕಮಗಳೂರು ಹಾಸ್ಟೆಲ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ವಿದ್ಯಾರ್ಥಿಗಳ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಚಿಕಿತ್ಸೆ ಆರಂಭಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.