ಅತಿಥಿ ಶಿಕ್ಷಕರ ನೇಮಕಕ್ಕೆ ಅನುದಾನ ಲಭ್ಯ


Team Udayavani, Oct 15, 2019, 2:45 PM IST

bidar-tdy-1

ಬೀದರ: ಗಣಿತ, ವಿಜ್ಞಾನ ಶಿಕ್ಷಕರನ್ನು ಪಡೆಯಲು ಹೆಚ್ಚುವರಿ ಅನುದಾನ ಲಭ್ಯವಿದೆ. ಈ ವಿಷಯಗಳ ಶಿಕ್ಷಕರ ಕೊರತೆ ಇರುವ ಶಾಲೆಗಳ ಮಾಹಿತಿ ನೀಡಿದಲ್ಲಿ ಅಂತಹ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ಪಡೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಹೇಳಿದರು.

ನಗರದ ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಕೊರತೆ ಇರುವ ಶಾಲೆಗಳ ಕುರಿತು ಶಿಕ್ಷಣ ಇಲಾಖೆ ಮಾಹಿತಿ ನೀಡಿದರೆ ಕೂಡಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡುವುದಾಗಿ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾತನಾಡಿ, ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳಲ್ಲಿ 333 ಹಾಗೂ ಪ್ರೌಢ ಶಾಲೆಗಳಲ್ಲಿ 134 ಅತಿಥಿ ಶಿಕ್ಷಕರನ್ನು ನಿಯೋಜಿಸಿ ಪಠ್ಯಚಟುವಟಿಕೆಗಳು ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 26 ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗಿದ್ದು, ಇಲ್ಲಿನ ಶಿಕ್ಷಕರಿಗೆ ತರಬೇತಿ ನೀಡಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಡೆಂಘೀಜ್ವರ ಕ್ರಮ ವಹಿಸಿ: ಜಿಲ್ಲೆಯಲ್ಲಿ ಡೆಂಘೀ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಿ ಕಾಯಿಲೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಗೀತಾ ಚಿದ್ರಿ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು. ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗಬೇಕು. ಆಸ್ಪತ್ರೆಯಲ್ಲಿರುವ ಆಂಬ್ಯುಲೆನ್ಸ್‌ಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅರ್ಹರಿಗೆ ಸಿಕ್ಕಿಲ್ಲ ಮನೆ: ಜಿಲ್ಲಾ ಪಂಚಾಯತ್‌ನ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ನಿಟ್ಟೂರಕರ್‌ ಮಾತನಾಡಿ, ಪ್ರಧಾನ ಮಂತ್ರಿ ವಸತಿ ಯೋಜನೆಯಡಿ ಈಗಾಗಲೇ ಮನೆಗಳು ಮಂಜೂರಾಗಿದ್ದು, ಅರ್ಹರಿಗೆ ಮನೆಗಳು ಸಿಕ್ಕಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಜಿಪಂ ಸಿಇಒ ಪ್ರತಿಕ್ರಿಯಿಸಿ, ಈ ಬಗ್ಗೆ ಕೂಡಲೇ ಮಾಹಿತಿ ಒದಗಿಸುವಂತೆ ಸಂಬಂಧಿ ಸಿದ ಅಧಿ ಕಾರಿಗೆ ನಿರ್ದೇಶನ ನೀಡಿದರು.

ಸಹಾಯಧನ ನೀಡಿ: ಈ ಹಿಂದೆ ಜಿಲ್ಲೆಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡಿರುವ ರೈತರಿಗೆ ಇನ್ನೂ ಸಹಾಯಧನ ಬಿಡುಗಡೆಯಾಗಿಲ್ಲ. ತಾಡಪತ್ರಿ ವಿತರಣೆ ಸಮರ್ಪಕವಾಗಿ ನಡೆದಿಲ್ಲ ಎನ್ನುವ ದೂರುಗಳು ಬಂದಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷರು ಸೂಚಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಧಾನ ಮಂತ್ರಿ ಗ್ರಾಮೀಣ ಸಡಕ್‌ ಯೋಜನೆ, ಕೊಳಚೆ ನಿರ್ಮೂಲನಾ ಮಂಡಳಿ, ಪಶು ಸಂಗೋಪನೆ ಇಲಾಖೆ, ಪಂಚಾಯತ್‌ ರಾಜ್‌ ಎಂಜಿನೀಯರಿಂಗ್‌ ವಿಭಾಗ, ಆಯುಷ್‌, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಡಾ| ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ತೋಟಗಾರಿಕೆ, ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ, ಉಪ ಕಾರ್ಯದರ್ಶಿ ಸೂರ್ಯಕಾಂತ ಜೋಜನಾ, ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.