ಶಿಕ್ಷಕರ ತ್ಯಾಗದಿಂದ ಶ್ರೇಷ್ಠ ಸಮಾಜ


Team Udayavani, May 27, 2018, 1:25 PM IST

gul-4.jpg

ಬೀದರ: ಉತ್ತಮ ಗುರುವಿನಿಂದ ವಿದ್ಯಾರ್ಥಿಯಾದವನು ನೈಜ ಸಮಾಜ ಜೀವಿಯಾಗಿ ಹೊರ ಹೊಮ್ಮಲು ಸಾಧ್ಯ. ಈ
ನಿಟ್ಟಿನಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವಿನ ಸಂಬಂಧ ಕಪ್ಪೆ ಚಿಪ್ಪಿನಂತಿರಲಿ ಎಂದು ಸೃಜನಾತ್ಮಕ ಬೋಧನಾ ಸಂಸ್ಥೆ ಸಂಪನ್ಮೂಲ ವ್ಯಕ್ತಿ ಜೋತ್ಸ್ನಾ ಅಯ್ಯಂಗಾರ್‌ ಹೇಳಿದರು.

ನಗರದ ಜನಸೇವಾ ಶಾಲೆಯಲ್ಲಿ ಸೃಜನಾತ್ಮಕ ಬೋಧನಾ ಸಂಸ್ಥೆ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆ
ಶಿಕ್ಷಕರಿಗಾಗಿ ಆಯೋಜಿಸಿರುವ ಮೂರು ದಿನಗಳ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,
ಶಿಕ್ಷಕ ನಿಜ ಶಿಲ್ಪಕಾರನು ಹೌದು. ಆತನ ಪ್ರಾಮಾಣಿಕ ಹಾಗೂ ಪಾರದರ್ಶಕ ತ್ಯಾಗದಿಂದ ಶ್ರೇಷ್ಠ ಸಮಾಜ
ರಚನೆ ಸಾಧ್ಯವಾಗಿದ್ದು, ವಿದ್ಯಾರ್ಥಿಗಳೇ ಶಿಕ್ಷಕನ ಪ್ರಧಾನ ಸಂಪತ್ತಾಗಬೇಕೆಂದು ಕರೆ ಕೊಟ್ಟರು.

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕೃತಿ, ಪರಂಪರೆ, ಆಚಾರ, ವಿಚಾರ, ಭಾವನಾತ್ಮಕ ಗುಣ, ನೈತಿಕ
ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡುವ ಗುರುವಾಗಬೇಕು. ಹೀಗಾದಾಗ ಮಾತ್ರ ವಿದ್ಯಾರ್ಥಿಗಳು ಬರೀ ಅಂಕ ಗಳಿಸುವ ಯಂತ್ರಗಳಾಗದೆ, ಸಮಾಜದ ನೈಜ ಆಸ್ತಿಯಾಗಬಲ್ಲರು ಎಂದು ಹೇಳಿದರು.

ಇಂದು ಮಕ್ಕಳಲ್ಲಿ ಸಾಮಾನ್ಯ ಜ್ಞಾನದ ಕೊರತೆ ತೀರ ಕಂಡು ಬರುತ್ತಿದೆ. ಶಿಕ್ಷಣದ ಜೊತೆ ಜೊತೆಗೆ ಮಾನವೀಯ
ಮೌಲ್ಯ ಹಾಗೂ ಅಧ್ಯಾತ್ಮದ ತಿರುಳು ವಿದ್ಯಾರ್ಥಿಗಳಲ್ಲಿ ಉತ್ತಿ ಬಿತ್ತಿದಾಗ ಮಾದರಿ ಜೀವನ ಕಂಡುಕೊಂಡು ಜಗತ್ತಿಗೆ ತನ್ನದೆ ಆದ ವೈಶಿಷ್ಟ್ಯ ನೀಡಬಲ್ಲರು ಎಂದರು.

ಡಿಡಿಪಿಐ ಇನಾಯತ್‌ ಅಲಿ ಶಿಂಧೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂದಿನ ಮೊಬೈಲ್‌ ದುನಿಯಾದಲ್ಲಿ
ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಯನ್ನು ಗಾಳಿಗೆ ತೂರಿದ್ದಾರೆ. ದೈಹಿಕ ಹಾಗೂ ಮಾನಸಿಕವಾಗಿ ದುರ್ಬಲರಾಗಿ
ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆಯಂತಹ ಕ್ಲಿಷ್ಟಕರವಾದ ದಾರಿ ಕಂಡುಕೊಳ್ಳುತ್ತಿರುವ ಯುವಜನತೆಗೆ ಶಿಕ್ಷಕರಾದವರು
ತಾಯಿಯ ರೂಪದಲ್ಲಿ ವಾತ್ಸಲ್ಯ ಕರುಣಿಸಿ, ಸ್ವತ್ಛ ಹಾಗೂ ಸುಂದರ ಯುವಕರನ್ನು ಸಮಾಜಕ್ಕೆ ಧಾರೆ ಎರೆಯಲು
ಕಂಕಣ ಬದ್ದರಾಗಬೇಕು ಎಂದರು. 

ಜ್ಞಾನ ಕಾರಂಜಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಬಸವರಾಜ ಭರಶೆಟ್ಟಿ ಮಾತನಾಡಿ, ನುರಿತ ಶಿಕ್ಷಕರಿಂದ ಪ್ರಬುದ್ಧ
ಸಮಾಜ ನಿರ್ಮಾಣ ಸಾಧ್ಯವಾಗಿದ್ದು, ಅಲ್ಲಿ ಜ್ಞಾನದ ಗಂಗೆ ನೆಲೆಸಬಲ್ಲಳು. ಅಂತಹ ವಾತಾವರಣದಲ್ಲಿ ಮಕ್ಕಳು
ಸಾಮಾಜಿಕ ಕಳಕಳಿಯುಳ್ಳುವರಾಗಿ ದೇಶಕ್ಕೆ ನೈಜ ಕೊಡುಗೆ ನೀಡಬಲ್ಲರು ಎಂದು ಅಭಿಪ್ರಾಯಪಟ್ಟರು.

ಶಾಲೆಯ ಆಡಳಿತ ಮಂಡಳಿ ಸದಸ್ಯ ಬಿ.ಎಸ್‌. ಕುದುರೆ ಮಾತನಾಡಿದರು. ಶಾಲೆಯ ಕಾರ್ಯದರ್ಶಿ ರೇವಣಸಿದ್ದಪ್ಪ
ಜಲಾದೆ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಮಲ್ಲಮ್ಮ ಚಾಮರೆಡ್ಡಿ ನಿರೂಪಿಸಿದರು. ಅಧ್ಯಕ್ಷ ಬಸವರಾಜ ಸ್ವಾಮಿ
ವಂದಿಸಿದರು. ಸುಧಾಕರ ದೇಶಪಾಂಡೆ, ಶಿವಶಂಕರ ತರನಳ್ಳಿ, ಯಶವಂತರಾವ್‌ ಬಿರಾದಾರ, ರವಿ ಶಂಭು ಸೇರಿದಂತೆ
ಜಿಲ್ಲೆಯ ಸುಮಾರು 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 48 ಶಿಕ್ಷಕರು ತರಬೇತಿಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.