ಗಡಿಭಾಗದ ಜಾನಪದ ಕಲಾವಿದರ ಬೆಳೆಸಿ
Team Udayavani, Feb 23, 2022, 12:53 PM IST
ಬಸವಕಲ್ಯಾಣ: ಸಾಮಾಜಿಕ ಬದುಕಿನಲ್ಲಿ ಜಾನಪದ ಕಲೆಗೆ ಬಹಳಷ್ಟು ಗೌರವ ಸಿಗುತ್ತಿದೆ. ಆದರೆ ಅರಳಬೇಕಾದ ಗ್ರಾಮೀಣ ಭಾಗದ ಜಾನಪದ ಕಲಾವಿದರಿಗೆ ಕಾಣದಂತೆ ಮಾಯವಾಗುತ್ತಿದ್ದಾರೆ, ಅಂಥವರನ್ನು ಗುರುತಿಸಿ ಬೆಳೆಸುವ ಕಾರ್ಯ ನಡೆಸಬೇಕಾಗಿದೆ ಎಂದು ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕಲ್ಯಾಣರಾವ್ ಮದರಗಾಂಬಕರ್ ಹೇಳಿದರು.
ಧಾಮುರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ವಿಶ್ವಶಾಂತಿ ಫೌಂಡೇಶನ್ ಮತ್ತು ಕಲ್ಚರಲ್ ವೆಲ್ಫೇರ್ ಡೆವಲಪ್‌ಮೆಂಟ್ ಸಂಸ್ಥೆ ಆಶ್ರಯದಲ್ಲಿ ನಡೆದ ಜಾನಪದ ಗಡಿನಾಡು ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಡಿ ಭಾಗದಲ್ಲಿ ಕನ್ನಡ ಎಂದರೆ ಮರಾಠಿ ಭಾಷೆಯಲ್ಲಿ ಮಾತನಾಡುವುದು ಹೆಚ್ಚು ಕಾಣುವಂತಾಗಿದೆ. ಹೀಗಾಗಿ ಕನ್ನಡದಲ್ಲಿ ಓದುವುದು, ಮಾತನಾಡುವುದು ಕಡಿಮೆಯಾಗುತ್ತಿದೆ. ಅದಕ್ಕೆ ಎಲ್ಲ ಭಾಷೆಗಳಿಗೆ ಗೌರವ ಕೊಡುವ ಜೊತೆಗೆ ಕನ್ನಡಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.
ವಿಶ್ವಶಾಂತಿ ಮತ್ತು ಕಲ್ಚರಲ್ ವೆಲ್ಫೇರ್ ಸಂಸ್ಥೆ ಅಧ್ಯಕ್ಷ ಜೈಪಾಲ ಬೋರಾಳೆ ಪ್ರಾಸ್ತಾವಿಕ ಮಾತನಾಡಿ, ಜಾನಪದ ಗಡಿನಾಡು ಉತ್ಸವ ಆಚರಿಸುವುದರಿಂದ ಜನರಿಗೆ ಕನ್ನಡದ ಬಗ್ಗೆ ಜಾಗೃತಿ ಅಲ್ಲದೇ ಅರಿವು ಮೂಡಿಸಲು ಸಹಕಾರಿಯಾಗುತ್ತದೆ. ಜತೆಗೆ ಕನ್ನಡದ ಸ್ವಾಭಿಮಾನ ಹೆಚ್ಚುತ್ತದೆ. ಹೀಗಾಗಿ ಜಾನಪದ ಗಡಿನಾಡು ಉತ್ಸವ ಆಚರಿಸಲಾಗುತ್ತಿದೆ. ಇಂತಹ ಉತ್ಸವಗಳಲ್ಲಿ ಹೆಚ್ಚಿನ ಕಲಾವಿದರು ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ನಂತರ ಕೈಲಾಸ ಬಾವಿಕಟ್ಟಿ, ಪ್ರಭು ಕಾಂಬಳೆ, ಮದರ ಥೆರೆಸಾ ಭಜನಾ ಮಂಡಳಿ ಮಹಿಳೆಯರು ಕಲಾವಿದರು ಕಲೆ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ರೇಖಾ ಜಾಧವ, ಉಪಾಧ್ಯಕ್ಷ ಸಂಜು ಜಾಧವ, ಎಪಿಎಂಸಿ ಸದಸ್ಯ ಸಂತೋಷ ಜಾಧವ, ಎಸ್‌ಡಿಎಂಸಿ ಅಧ್ಯಕ್ಷ ಶಿವಾಜಿ ಜಾಧವ, ಉಪಾಧ್ಯಕ್ಷ ಮೀನಾ ಮೂಳೆ, ಶ್ರೀಮಂತ ಪಾಟೀಲ್, ಮುಖ್ಯಗುರು ಗಿರಿಧರ ಧಾನುರೆ, ದಶರಥ ಜಾಧವ, ರಾಹುಲ್ ಕಲ್ಲುರೆ, ಕುಲದೀಪ ಕಾಂಬಳೆ, ಬಸವರಾಜ ಕಾಳೆ, ಶಶೀಲ್ ಪ್ರಜಾರಿ, ಧನಜಾಜಿ ಉದಬಲೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.