ಜನರಿಗೆ ಖಾತ್ರಿ ಯೋಜನೆ ಆಸರೆ: ಮುಕ್ಕಣ್ಣ
Team Udayavani, May 30, 2020, 4:38 PM IST
ಸಾಂದರ್ಭಿಕ ಚಿತ್ರ
ಗುರುಮಠಕಲ್: ತಾಲೂಕಿನ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಅವರು ಮೊದಲ ಬಾರಿಗೆ ತಾಪಂ ಸಾಮಾನ್ಯ ಸಭೆ ನಡೆಸಿದರು.
ತಾಲೂಕಿನ ಗಾಜರಕೋಟ ಗ್ರಾಮದಲ್ಲಿ 700 ಜನರು ಬೆಂಗಳೂರಿನಿಂದ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತ್ರಿಯ ಜಾಬ್ ಕಾರ್ಡ್ ನೀಡುವ ಮೂಲಕ ವಲಸೆಯಿಂದ ಹಿಂದಿರುಗಿದವರಿಗೆ ಕೆಲಸದ ಖಾತ್ರಿ ಯೋಜನೆಗೆ ಚಾಲನೆ ನೀಡಿದರು. ಗಾಜರಕೋಟ ಗ್ರಾಮದ ಮನೆ ಮನೆಗೆ ತೆರಳಿ ಬೆಂಗಳೂರಿನಿಂದ ಬಂದಿರುವ ವಲಸೆ ಕಾರ್ಮಿಕರನ್ನು ಗುರುತಿಸಿ ಒಂದು ಕುಟುಂಬಕ್ಕೆ 100 ದಿನಗಳ ಕೆಲಸವಾಗಿದ್ದು, ದಿನಕ್ಕೆ 275 ರೂ.ಯಂತೆ ಕೂಲಿ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಸಲಕರಣೆಗಳಿಗೆ 10 ರೂ. ಪಾವತಿಸಲಾಗುವುದು. ಪ್ರತಿ ವಾರಕ್ಕೊಮ್ಮೆ ಕೂಲಿ ಪಾವತಿಸಲಾಗುವುದು ಎಂದು ಕೂಲಿಕಾರರಿಗೆ ಹೇಳಿದರು.
ಉದ್ಯೋಗ ಖಾತ್ರಿಗೆ ಸಂಬಂಧಪಟ್ಟಂತಹ ಸಂದೇಹ ಮತ್ತು ಸಮಸ್ಯೆಗಳ ಬಗ್ಗೆ ಕೂಲಿಗಾರರ ಜತೆ ಸಂವಾದ ನಡೆಸಿ ಸಮಸ್ಯೆಗಳನ್ನು ಪರಿಹರಿಸಿದರು. ಎಡಿ ಚಂದ್ರಶೇಖರ್ ಪವಾರ, ಗಾಜರಕೋಟ ಪಿಡಿಒ ಮಹಾದೇವಪ್ಪ ಸೇರಿದಂತೆ ತಾಲೂಕಿನ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.