ಗುರುನಾನಕ್ ಜನ್ಮೋತ್ಸವ: ವೈಭವದ ಮೆರವಣಿಗ
Team Udayavani, Nov 24, 2018, 10:32 AM IST
ಬೀದರ: ಸಿಖ್ ಧರ್ಮಗುರು ಗುರುನಾನಕ್ ದೇವ ಮಹಾರಾಜರ 549ನೇ ಜನ್ಮೋತ್ಸವವನ್ನು ಶುಕ್ರವಾರ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಪಟಾಕಿಗಳ ಬೆಳಕಿನ ಚಿತ್ತಾರ ನೋಡುಗರ ಗಮನ ಸೆಳೆಯಿತು. ನೀಲಿ ಮತ್ತು ಹಳದಿ ಧ್ವಜಗಳನ್ನು ಹಿಡಿದುಕೊಂಡು ಪ್ರದರ್ಶಿಸಿದ ಪಾರಂಪರಿಕ ಕಲಾ ಪ್ರದರ್ಶನಗಳು ನೋಡುಗರ ಗಮನ ಸೆಳೆದವು. “ಬೋಲೆ ಸೋನಿಹಾಲ್, ಸಶ್ರೀ ಅಕಾಲ್’ ಎನ್ನುವ ಜಯಘೋಷಗಳು ಮೆರವಣಿಗೆಯಲ್ಲಿ ಕೇಳಿಬಂದವು. ಜಯಂತಿ ನಿಮಿತ್ತ ನಡೆದ ಮೆರವಣಿಗೆಯ ಅಭೂತಪೂರ್ವ ಕ್ಷಣಕ್ಕೆ ದೇಶ-ವಿದೇಶದಿಂದ ಆಗಮಿಸಿದ ಸಾವಿರಾರು ಸಿಖ್ ಧರ್ಮೀಯರು ಸಾಕ್ಷಿಯಾದರು.
ಸಂಜೆ 4 ಗಂಟೆಗೆ ಆರಂಭವಾದ ಮೆರವಣಿಗೆ ಸಂಜೆ 7ರ ವರೆಗೆ ನಡೆಯಿತು. ಸಿಖ್ ಧಾರ್ಮಿಕ ಮುಖಂಡರು ನಿಶಾನೆ ಸಾಹೇಬ್ ಗಳೆಂಬ ನೀಲಿ ಮತ್ತು ಹಳದಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿಶೇಷ ಅಲಂಕೃತ ವಾಹನದಲ್ಲಿ ಗುರುನಾನಕರ ಭಾವಚಿತ್ರ ಕಣ್ಮನ ಸೆಳೆಯಿತು. ಸಿಖ್ ಧರ್ಮಿಯರು ಭಕ್ತಿ-ಭಾವದಿಂದ ಭಾಗಿಯಾಗಿ ಹಾಡಿ, ಕುಣಿದು ಸಂಭ್ರಮಿಸಿದರಲ್ಲದೇ ಧಾರ್ಮಿಕ ಗ್ರಂಥ ಪಠಣ ಮಾಡಿದರು.
ಮೆರವಣಿಗೆ ಮಾರ್ಗದುದ್ದಕ್ಕೂ ಜಯ ಘೋಷಣೆಗಳು ಮುಗಿಲು ಮುಟ್ಟಿದವು. ಅಲಂಕೃತ ಕುದುರೆಗಳ ಮೇಲೆ ಸಿಖ್ ಧರ್ಮೀಯರು ಪಾರಂಪರಿಕ ತಲವಾರ್ ಮತ್ತು ಚಕ್ರ ತಿರುಗಿಸುವುದು, ಕೈಯಲ್ಲಿ ತಲವಾರ್ ಹಿಡಿದು ಓಡುವುದು ನೋಡುಗರನ್ನು ಸೆಳೆಯಿತು. ಬಾಲಕ ಮತ್ತು ಬಾಲಕಿಯರು ತಲವಾರ್ ತಿರುಗಿಸಿ ಸೈ ಎನಿಸಿಕೊಂಡರು.
ಐತಿಹಾಸಿಕ ಗುರುದ್ವಾರದಿಂದ ಆರಂಭವಾದ ಮೆರವಣಿಗೆ ಮಡಿವಾಳ ವೃತ್ತ, ಕರಿಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮೂಲಕ ಸಾಗಿ ಪುನಃ ಗುರುನಾನಕ ದೇವಸ್ಥಾನಕ್ಕೆ ಆಗಮಿಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಖ್ ಬಾಂಧವರಿಗಾಗಿ ವಿವಿಧ ಸಂಘಟನೆಗಳಿಂದ ರಸ್ತೆಯುದ್ದಕ್ಕೂ ಕುಡಿಯುವ ನೀರು, ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಜಯಂತಿ ನಿಮಿತ್ತ ಗುರುದ್ವಾರದಲ್ಲಿ ರಾತ್ರಿಯಿಡಿ ಗುರುನಾನಕ ದೇವ ಪ್ರಬಂಧಕ ಕಮಿಟಿ ವತಿಯಿಂದ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆದವು. ವಿಶೇಷ ಗ್ರಂಥ ಪಠಣ, ಭಜನೆ ಮತ್ತು ಕೀರ್ತನೆಗಳು ಜರುಗಿದವು. ಧಾರ್ಮಿಕ ಮುಖಂಡರು ವಿಧ್ಯುಕ್ತ ಚಾಲನೆ ನೀಡಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಬೆಂಗಳೂರು, ನಾಂದೇಡ್, ಉದಗೀರ, ಲಾತೂರ, ಪುಣೆ, ಹೈದ್ರಾಬಾದ ಸೇರಿದಂತೆ ವಿದೇಶದಿಂದಲೂ ಸಿಖ್‌ರು ಆಗಮಿಸಿದ್ದರು. ಜಯಂತಿ ನಿಮಿತ್ತ ಗುರುದ್ವಾರದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರಸಿಂಗ್, ಪ್ರಮುಖರಾದ ಮನಪ್ರಿತಸಿಂಗ್ ಬಂಟಿ, ದರ್ಬಾಸಿಂಗ್, ಪ್ರದೀಪಸಿಂಗ್, ತೇಜಪಾಲಸಿಂಗ್, ದರ್ಶನಸಿಂಗ್, ಗುರುಪ್ರಿತಸಿಂಗ್ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.