ಬಿರುಗಾಳಿ ಸಹಿತ ಆಲಿಕಲ್ಲು
Team Udayavani, May 27, 2018, 1:17 PM IST
ಬೀದರ: ನಗರ ಸೇರಿದಂತೆ ತಾಲೂಕಿನಲ್ಲಿ ಶನಿವಾರ ಉತ್ತಮ ಮಳೆಯಾಗಿದ್ದು, ವಾರದಿಂದ ಉರಿ ಬಿಸಿಲಿನಿಂದ ಕಾದು ಬೆಂಡಾಗಿದ್ದ ಇಳೆ ತಂಪಾಗಿದೆ. ಆಲಿಕಲ್ಲು, ಬಿರುಗಾಳಿ, ಗುಡುಗು ಸಹಿತ ಮಳೆಯಿಂದ ಮರಗಳು ಧರೆಗಿಳಿದಿದ್ದರೆ,
ಸಿಡಿಲಿಗೆ ಒಬ್ಬ ವ್ಯಕ್ತಿ ಹಾಗೂ ಎರಡು ಜಾನುವಾರುಗಳು ಮೃತಪಟ್ಟಿವೆ.
ಬೇಸಿಗೆ ಅವಧಿ ಮುಗಿಯುವ ಈ ದಿನಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿತ್ತು. ಮಳೆ ಆರ್ಭಟ ಭೂಮಿಯನ್ನು ತಂಪಾಗಿಸಿದೆ. ಮಧ್ಯಾಹ್ನ ಬೀದರ ಮತ್ತು ಔರಾದ ತಾಲೂಕಿನಲ್ಲಿ ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ನಗರದ ನಂದಿ ಪೆಟ್ರೋಲ್ ಪಂಪ್, ಖಾದಿ ಭಂಡಾರ ಸೇರಿದಂತೆ ಹಲವೆಡೆ ಮರಗಳು ಧರೆಗುರುಳಿದಿದ್ದು, ಇದರಿಂದ ಬೈಕ್, ಆಟೋಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಔರಾದ ತಾಲೂಕಿನಲ್ಲಿ ಭಾರಿ ಗಾಳಿ ಬೀಸಿದ್ದು, ಮನೆಗಳ ಮೇಲಿನ ಪತ್ರಾಸ್‌ಗಳು ಹಾರಿ ಹೋಗಿದ್ದರೆ, ಸಿಂದೋಲ ಗ್ರಾಮದ ಹೊಲವೊಂದರಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಹಣಮಂರ ಶೇರಿಕಾರ (34) ಮೃತಪಟ್ಟ ವ್ಯಕ್ತಿ. ಮಾರಜೋಡಿ ಗ್ರಾಮದಲ್ಲಿ ರೈತ ಹೊಲದಲ್ಲಿ ಕಟ್ಟಿದ್ದ ಎರಡು ಆಕಳುಗಳು ಸಿಡಿಲಿಗೆ ಬಲಿಯಾಗಿವೆ. ಹುಮನಾಬಾದ ತಾಲೂಕಿನಲ್ಲಿ ಸಂಜೆ ಹೊತ್ತು ಬಿರುಗಾಳಿಯೊಂದಿಗೆ ತುಂತುರು ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.