ಮರೆಯಾದ ಬೀಜ ಸಂಸ್ಕರಣಾ ಪದ್ಧತಿ
Team Udayavani, Sep 12, 2017, 11:26 AM IST
ಬೀದರ: ಖಾಸಗೀಕರಣ, ಉದಾರೀಕರಣ ಹಾಗೂ ಜಾಗತೀಕರಣದ ಪ್ರತಿ ಫಲವೇ ನಿರ್ಬೀಜೀಕರಣ ಎಂದು ಸುರೇಶ ಗೌಡ ಪಾಟೀಲ ಹುಲಕೋಟಿ ಹೇಳಿದರು.
ನಗರದ ರಂಗ ಮಂದಿರದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ರಾಜ್ಯ ಮಟ್ಟದ ಕೃಷಿ ಮತ್ತು ಸಹಕಾರ
ಸಾಹಿತ್ಯ ಸಮಾವೇಶದಲ್ಲಿ “ಕೃಷಿ ಸಾಹಿತ್ಯ’ದ ಮೊದಲ ಗೊಷ್ಠಿಯಲ್ಲಿ “ಸಾವಯವ ಹಾಗೂ ನೈಸರ್ಗಿಕ ಕೃಷಿ ವಿಷಯ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.
ಪಾರಂಪರಿಕ ಬೀಜ ಸಂಸ್ಕರಣಾ ಪದ್ಧತಿ ಮರೆಯಾಗಿ ಬಹುರಾಷ್ಟ್ರೀಯ ಕಂಪನಿಗಳು ಉತ್ಪಾದಿತ ಬೀಜ ರಹಿತ
ಬೀಜದಿಂದ ದೇಶದ ಜನತೆಯ ಆರ್ಥಿಕ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ಪುರುಷರಲ್ಲಿ ನಪುಂಸಕತ್ವ, ಮಹಿಳೆಯರಲ್ಲಿ ಬಂಜೆತನ ಪ್ರಮಾಣ ಹೆಚ್ಚಾಗಿ ಶಕ್ತಿಹೀನವಾದ ನಿರ್ಬೀಜ ಸಮಾಜ ರೂಪುಗೊಳ್ಳುತ್ತಿರುವುದು ಬಹು ದೊಡ್ಡ ದುರಂತ. ಇದೆಲ್ಲದಕ್ಕೂ ಸಹಜ ಹಾಗೂ ಸಾವಯವ ಕೃಷಿಯಲ್ಲಿ ಪರಿಹಾರವಿದೆ ಎಂದು ಅನೇಕ ವಾಸ್ತವಿಕ ದೃಷ್ಟಾಂತ, ಪ್ರಯೋಗಶೀಲ ಉದಾಹರಣೆಗಳ ಮೂಲಕ ವಿವರಿಸಿದರು.
ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆಶಯ ಭಾಷಣ ಮಾಡಿದರು. ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ವಿಶ್ವನಾಥ ಪಾಟೀಲ, ವೀರಭೂಷಣ ಮೊದಲಾದವರು ಪ್ರತಿಕ್ರಿಯೆ ವ್ಯಕ್ತಪಡಿಸಿದರು. ವಸಂತ ಹುಣಸನಾಳೆ ಸ್ವಾಗತಿಸಿದರು. ರಾಜಕುಮಾರ ಹೆಬ್ಟಾಳೆ ನಿರೂಪಿಸಿದರು. “ಸಹಕಾರ ಸಾಹಿತ್ಯ’ ಎಂಬ ಎರಡನೇ ಗೋಷ್ಠಿಯಲ್ಲಿ ಶಾಸನ ತಜ್ಞರಾದ ಹನುಮಾಕ್ಷಿ ಗೋಗಿ ಸಹಕಾರಿ ಕಾನೂನುಗಳು ಹಾಗೂ ಸಾಹಿತ್ಯ ವಿಷಯ ಕುರಿತು ಪ್ರಬಂಧ ಮಂಡಿಸಿದರು.
ಸಹಾರ್ದ ತರಬೇತಿ ಸಂಸ್ಥೆಯ ಸುಬ್ರಹ್ಮಣ್ಯ ಪ್ರಭು ಅವರು “ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ತತ್ವದ ಪಾತ್ರ’ ಕುರಿತು ಮಾತನಾಡಿದರು. ಸಹಕಾರ ಸಂಘಗಳ ಉಪ ನಿಬಂಧಕರಾದ ವಿಶ್ವನಾಥ ಎಂ. ಮಾಲನೊಡ ಅಧ್ಯಕ್ಷತೆ ವಹಿಸಿದ್ದರು. ಸಂಜೀವಕುಮಾರ ಮಾಲಿಪಾಟೀಲ, ಮಲ್ಲಿಕಾರ್ಜುನ ಬಿರಾದಾರ, ನಾಗಭೂಷಣ ಕಮಠಾಣಾ ಮೊದಲಾದವರು ಉಪಸ್ಥಿತರಿದ್ದರು. ಹುಮನಾಬಾದ ಕಸಾಪ ಅಧ್ಯಕ್ಷ ಸಚಿನ ಮಠಪತಿ ಸ್ವಾಗತಿಸಿದರು. ಡಾ|ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು. ವೀರಶೆಟ್ಟಿ ಚನಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.