Humanabad: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ
Team Udayavani, Jul 6, 2023, 12:46 PM IST
ಹುಮನಾಬಾದ: ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಧುಮ್ಮನಸೂರ್ ಹೊರವಲಯದಲ್ಲಿ ಜು.6ರ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), ಮಗಳು ತನು (6), ಮಗ ಸಾಯಿರಾಜ್ (5) ಮೃತಪಟ್ಟವರು.
ಮಕ್ಕಳೊಂದಿಗೆ ತಂದೆ ಧುಮ್ಮನಸೂರ್ ಹೊರವಲಯದ ಸೇಡೋಳ ರಸ್ತೆಯಲ್ಲಿರುವ ಹೊಲದ ಭಾವಿಗೆ ಬುಧವಾರ ತಡರಾತ್ರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಹುಮನಾಬಾದ ಪಿಎಸ್ಐ ಮಂಜನಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಮೃತದೇಹಗಳಗಳನ್ನು ಬಾವಿಯಿಂದ ಮೇಲೆತ್ತಿದರು. ಈ ಸಂದರ್ಭದಲ್ಲಿ ನೂರಾರು ಜನರು ಜಮಾಯಿಸಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.