ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ: ರಾಜಶೇಖರ
Team Udayavani, Jun 13, 2020, 5:48 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹುಮನಾಬಾದ: ಪಟ್ಟಣದ ಜನರಲ್ಲಿ ಕೋವಿಡ್ ಭೀತಿ ಕಂಡುಬರುತ್ತಿಲ್ಲ. ವ್ಯಾಪರಸ್ಥರು, ಗ್ರಾಹಕರು ಮಾಸ್ಕ್ ಧರಿಸದಿರುವುದು ಕಂಡುಬರುತ್ತಿದೆ. ಪುರಸಭೆ ಮುಖ್ಯಾಧಿಕಾರಿಗಳು ಪೊಲೀಸರ ಸಹಕಾರ ಪಡೆದು ಅಂಥವರಿಗೆ ದಂಡ ವಿಧಿಸುವ ಜತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.
ಪಟ್ಟಣದಲ್ಲಿ ನಡೆದ ರಸ್ತೆ ಕಾಮಗಾರಿಗೆ ಚಾಲನೆ ನಂತರ ಮಾತನಾಡಿದ ಅವರು, ಎಲ್ಲೆಡೆ ಕೋವಿಡ್ ಹಾವಳಿ ಹೆಚ್ಚಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗ ಇದಾಗಿದೆ. ಮುಂಜಾಗ್ರತೆ ವಹಿಸಿದರೆ ಸೋಂಕು ಹರಡುವಿಕೆ ತಡೆಯಬಹುದು. ಕಾರಣ ಜನರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಪಾಲಿಸುವಂತೆ ತಿಳಿವಳಿಕೆ ಮೂಡಿಸುವ ಕೆಲಸವಾಗಬೇಕು. ದಂಡ ವಿಧಿಸಲಾರಂಭಿಸಿದರೆ ಜನರು ನಿಯಮ ಪಾಲಿಸುತ್ತಾರೆ. ಈ ಕುರಿತು ಕ್ರಮ ವಹಿಸಬೇಕು. ಸಾರ್ವಜನಿಕರು, ವ್ಯಾಪಾರಸ್ಥರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಪಾಲಿಸಬೇಕು. ಪ್ರತಿಯೊಬ್ಬರು ಮನೆಯಿಂದ ಹೊರಬಂದರೆ ಮಾಸ್ಕ್ ಧರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.