ಮಿನಿ ವಿಧಾನಸೌಧದಲ್ಲಿ ಸೌಕರ್ಯ ಮರೀಚಿಕೆ!
ಶೌಚಕ್ಕೆ ಮರ-ಸಂದಿಗೊಂದಿಯೇ ಗತಿದಾಹ ನೀಗಿಸಿಕೊಳ್ಳಲು ಬಾಟಲ್ ನೀರೇ ಅನಿವಾರ್ಯ
Team Udayavani, Mar 2, 2020, 11:59 AM IST
ಹುಮನಾಬಾದ: ವಿವಿಧ ಕೆಲಸ ಕಾರ್ಯಗಳ ಹಿನ್ನೆಲೆಯಲ್ಲಿ ಮಿನಿ ವಿಧಾನಸೌಧಕ್ಕೆ ಹೋಗಬೇಕಾದರೆ ಮನೆಯಿಂದಲೇ ನೀರಿನ ಬಾಟಲಿ ತೆಗೆದುಕೊಂಡು ಹೋಗಬೇಕು. ಇಲ್ಲವೇ ಬಾಯಾರಿಕೆಯಿಂದ ಪರದಾಡುವುದು ಖಂಡಿತ. ಇನ್ನೂ ಅಲ್ಲಿ ಶೌಚಾಲಯ ಹೋಗಬೇಕೆಂದೆನಿಸಿದರೆ ಮರ, ಸಂದಿಗೊಂದಿ ಹುಡುಕುವುದು ಅನಿವಾರ್ಯವಾಗಿದೆ.
ಪಟ್ಟಣದ ಮಿನಿ ವಿಧಾನಸೌಧಕ್ಕೆ ಪ್ರತಿ ದಿನ ತಾಲೂಕಿನ ನೂರಾರು ಜನರು ನಾನಾ ಕೆಲಸದ ನಿಮಿತ್ತ ಬರುತ್ತಾರೆ. ಆದರೆ ಇಲ್ಲಿಗೆ ಬರುವ ಜನರಿಗೆ ತಾಲೂಕಾಡಳಿತ ನೀರಿನ ವ್ಯವಸ್ಥೆ ಬಗ್ಗೆ ತಲೆಕಡೆಸಿಕೊಂಡಿಲ್ಲ.
ನೀರಿನ ಘಟಕ ಸ್ಥಗಿತ: ಈ ಹಿಂದೆ ಉದಯವಾಣಿ ಪತ್ರಿಕೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಕುರಿತು ಸುದ್ದಿ ಪ್ರಕಟಗೊಂಡ ನಂತರ ಮಿನಿ ವಿಧಾನಸೌಧದ ಹೊರ ಪ್ರದೇಶದಲ್ಲಿ ಕುಡಿಯುವ ನೀರಿನ ಕಟ್ಟೆ ನಿರ್ಮಿಸಿ ಟ್ಯಾಂಕರ್ ಅಳವಡಿಸಿ ನೀರು ಪೂರೈಸಲಾಗುತ್ತಿತ್ತು. ಆದರೆ, ಇದು ಸದ್ಯ ಸ್ಥಗಿತಗೊಂಡಿದೆ. ಅಲ್ಲದೆ, ಕಚೇರಿ ಒಳ ಪ್ರದೇಶದಲ್ಲಿಯೂ ಒಂದು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಅಳವಡಿಸಲಾಗಿತ್ತು. ಅದು ಕೂಡ ದುರಸ್ತಿ ಹಿನ್ನೆಲೆಯಲ್ಲಿ ಬಂದಾಗಿದ್ದು, ಕಚೇರಿಗೆ ಬರುವ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಸಾರ್ವಜನಿಕ ಶೌಚಾಲಯವಿಲ್ಲ: ಇಲ್ಲಿ ಶೌಚಾಲಯ ಸಮಸ್ಯೆ ಹೇಳತೀರದು. ಪುರುಷರು ಹೇಗೋ ಹೊರಹೋಗಿ ಶೌಚ ಮಾಡುತ್ತಾರೆ. ಆದರೆ ಮಹಿಳೆಯರು ಪರದಾಡುವಂತಾಗಿದೆ. ಈ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ ಎಂದು ಮಹಿಳೆಯರು ದೂರುತ್ತಿದ್ದಾರೆ. ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಕಾರ್ಯಾಲಯ, ಉಪ ನೋಂದಣಿ ಕಚೇರಿ, ದಾಖಲೆಗಳ ಕಚೇರಿ, ಭೂ ಸರ್ವೇ ಇಲಾಖೆ, ಭೂಮಿ ಕೇಂದ್ರ, ಖಜಾನೆ ಇಲಾಖೆ, ಚುನಾವಣೆ ಕಚೇರಿ ಸೇರಿದಂತೆ ಇತರೆ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿನಿತ್ಯ ಕೆಲಸಕ್ಕೆ ಗ್ರಾಮೀಣ ಭಾಗ ಸೇರಿದಂತೆ ಪಟ್ಟಣದ ಜನರು ಇಲ್ಲಿಗೆ ಬರುತ್ತಾರೆ. ಕುಡಿಯುವ ನೀರಿನ ಸಮಸ್ಯೆ ಜತೆಯಲ್ಲಿ ಶೌಚಾಲಯ ಸಮಸ್ಯೆ ಹೆಚ್ಚಿದೆ.
ಅಧಿಕಾರಿಗಳಿಗೆ ಕೆಲವು ಕಡೆ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ ಸಾರ್ವಜನಿಕರಿಗೆ ಮಾತ್ರ ಶೌಚಾಲಯ ಇಲ್ಲದಂತಾಗಿದೆ. ಮಿನಿ ವಿಧಾನಸೌಧದ ಹಿಂದಿನ ಪ್ರದೇಶದಲ್ಲಿ ಕಳೆದ ಸುಮಾರು ವರ್ಷಗಳ ಹಿಂದೆ ಶೌಚಾಲಯ ನಿರ್ಮಿಸಲಾಗಿದೆ. ತಹಶೀಲ್ದಾರರು ಬದಲಾಗುತ್ತಿದ್ದಾರೆ. ಆದರೆ, ಶೌಚಾಲಯ ಮಾತ್ರ ಪ್ರಾರಂಭಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎನ್ನುವ ಕೂಗು ದಟ್ಟವಾಗಿದೆ.
ಮುಂದಿನ ಒಂದು ವಾರದಲ್ಲಿ ಸಾರ್ವಜನಿಕ ಶೌಚಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಕುಡಿಯುವ ನೀರಿನ ವ್ಯವಸ್ಥೆಗಾಗಿ ತಾಪಂ ಇಒ ಅವರಿಗೆ ತಿಳಿಸಲಾಗಿದ್ದು, ನೀರಿನ ಘಟಕ ಶೀಘ್ರ ಪ್ರಾರಂಭಿಸಲಾಗುವುದು.
ನಾಗಯ್ನಾ ಹಿರೇಮಠ,
ತಹಶೀಲ್ದಾರ್
ಮಿನಿ ವಿಧಾನಸೌಧಕ್ಕೆ ಆಗಮಿಸುವ ಜನರಿಗೆ ಸೂಕ್ತ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ತಹಶೀಲ್ದಾರರು ಮುಂದಾಗಬೇಕು. ದೂರದ ಊರುಗಳಿಂದ ಬರುವ ಜನರು ಒಂದು ಲೀಟರ್ ಕುಡಿಯವ ನೀರಿಗಾಗಿ 20 ರೂ. ಖರ್ಚುಮಾಡುತ್ತಿದ್ದಾರೆ. ಅಲ್ಲದೆ, ವಾಹನಗಳಲ್ಲಿ ಬರುವ ಜನರಿಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ, ಸಾರ್ವಜನಿಕರಿಗೆ ಶೌಚಾಲಯದ ವ್ಯವಸ್ಥೆಗಳು ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮುಂದಾಗಬೇಕು.
ಮನೋಜ ಸಿತಾಳೆ,
ಕರವೇ ತಾಲೂಕು ಅಧ್ಯಕ್ಷ
ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.