ಕೋವಿಡ್ ಸುರಕ್ಷತೆಗೆ ಮಾಸ್ಕ್- ಸಾನಿಟೈಜರ್ ಉಪಯೋಗಿಸಿ
Team Udayavani, May 3, 2020, 12:17 PM IST
ಹುಣಸಗಿ: ಕಕ್ಕೇರಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸೈಯದ್ ನಜೀಮಾ ಮೋಸಿನ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಸಾನಿಟೈಜರ್ ವಿತರಿಸಿದರು.c
ಹುಣಸಗಿ: ಕೋವಿಡ್ ಸುರಕ್ಷತೆಗಾಗಿ ಮಾಸ್ಕ್ ಹಾಗೂ ಸಾನಿಟೈಜರ್ ಬಳಸಬೇಕು ಎಂದು ವೈದ್ಯಾಧಿಕಾರಿ ನಜೀಮಾ ಮೋಸಿನ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಶಿಶು ಅಭಿವೃದ್ಧಿ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಸಾನಿಟೈಜರ್ ವಿತರಿಸಿ ಅವರು ಮಾತನಾಡಿದರು.
ಕೋವಿಡ್ ವೈರಸ್ ತಪ್ಪಿಸಿಕೊಳ್ಳಲು ಸ್ವಚ್ಛತೆ ಅಗತ್ಯವಾಗಿದೆ. ಸಾಮಾಜಿಕ ಅಂತರ ಹಾಗೂ ಮನೆಯಲ್ಲಿರುವುದೇ ಇದಕ್ಕೆ ಸರಿಯಾದ ಮದ್ದು. ಹೀಗಾಗಿ ಕೋವಿಡ್ ನಿಯಮ ಸೂಚನೆಗಳನ್ನು ಪಾಲಿಸಬೇಕು ಎಂದು ಹೇಳಿದರು. 42 ಅಂಗನವಾಡಿ ಕಾರ್ಯಕರ್ತೆಯರು, 36 ಅಂಗನವಾಡಿ ಸಹಾಯಕಿಯರು ಮತ್ತು 36 ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಗಳು ಮತ್ತು ಸಾನಿಟೈಜರ್ ವಿತರಿಸಲಾಯಿತು. ವಲಯ ಮೇಲ್ವಿಚಾರಕಿ ಲಕ್ಷ್ಮೀಬಾಯಿ ಚವ್ಹಾಣ ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.