“ತಾಕತ್ತಿದ್ದರೆ ಬಾಬ್ರಿ ಮಸೀದಿ ಕಟ್ಟುತ್ತೇವೆಂದು ಹೇಳಿ’
Team Udayavani, Dec 4, 2018, 6:00 AM IST
ಬೀದರ: ಚುನಾವಣೆ ಬಂದಾಗ ಮಾತ್ರ ಶ್ರೀರಾಮ ಮಂದಿರ ವಿಚಾರ ಚರ್ಚೆಗೆ ಬರುತ್ತದೆ ಎಂಬುದು ಸರಿಯಲ್ಲ. ಅದು ನಿರಂತರವಾಗಿ ನಡೆಯುತ್ತಿದೆ. ಬೇಕಾದರೆ ಕಾಂಗ್ರೆಸ್‌ನವರು ಅಥವಾ ಸಿದ್ದರಾಮಯ್ಯ ಅವರು ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕಟ್ಟಿಸುತ್ತೇವೆ ಎಂದು ಹೇಳಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,
ಸಿದ್ದರಾಮಯ್ಯ ಅವರಿಂದ ಹಿಂದುತ್ವದ ಬಗ್ಗೆ ತಿಳಿದುಕೊಳ್ಳುವ ಅಗತ್ಯ ನಮಗಿಲ್ಲ. ಭಾರತದಲ್ಲಿ ಯಾರು ಹಿಂದುತ್ವವಾದಿಗಳು ಎಂಬುದು ಎಲ್ಲರಿಗೂ ಗೊತ್ತಿದೆ. ರಾಮ ಎಂದ ಕೂಡಲೇ ಕಾಂಗ್ರೆಸ್‌ನವರಿಗೆ ಬೆವರು ಬರುತ್ತದೆ. ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯವರು ತಾವು ಹಿಂದೂ, ಬ್ರಾಹ್ಮಣ ಎಂದು ಹೇಳಿಕೊಳ್ಳಲು ಶುರು ಮಾಡಿದ್ದಾರೆ. ದೇಶದಲ್ಲಿ
ಹಿಂದುತ್ವ ಜಾಗೃತವಾಗಿರುವುದನ್ನು ಅರಿತ ಕಾಂಗ್ರೆಸ್‌ನವರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದರು.
ದೇವೇಗೌಡ ಸ್ವಯಂ ಘೋಷಿಕ ಮಣ್ಣಿನ ಮಗ. ಅವರು ನಿಜವಾಗಿಯೂ ಮಣ್ಣಿನ ಮಗ ಆಗಿದ್ದರೆ ಅದನ್ನು ಸ್ವತ: ರೈತರೇ ಹೇಳುತ್ತಿದ್ದರು. ಮಣ್ಣಿನ ಮಗನೆಂದು ಹೇಳಿಕೊಳ್ಳುವ ದೇವೇಗೌಡರು, ಹಿಂದುಳಿದ ವರ್ಗಗಳ ನಾಯಕನೆಂದೇ ಹೇಳಿಕೊಳ್ಳುವ ರಾಜ್ಯ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಯಾವತ್ತಾದರೂ ರಾಜ್ಯದ ರೈತರ ಕಣ್ಣೀರೊ ರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರಾ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.