ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅಣಿಯಾಗಿ
Team Udayavani, Jul 16, 2022, 2:55 PM IST
ಬೀದರ: ಶಿಕ್ಷಕರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅಣಿಯಾಗಬೇಕು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಸಲಹೆ ನೀಡಿದರು.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಗರದ ನೌಬಾದ್‌ನ ಡಯಟ್‌ನಲ್ಲಿ ಆಯೋಜಿಸಿರುವ 12 ದಿನಗಳ ಕಾರ್ಯಾಗಾರವನ್ನು ಸಸಿಗೆ ನೀರೆರೆದು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನೆರವಾಗಬಲ್ಲ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯದಲ್ಲಿ ಮುಂದಿನ ವರ್ಷದಿಂದ ಜಾರಿಗೆ ಬರುವ ಸಾಧ್ಯತೆ ಇದೆ ಎಂದರು.
ಮಕ್ಕಳಿಗೆ ಪರಿಣಾಮಕಾರಿ ಬೋಧನೆಗೆ ಪೂರಕವಾಗಿ ಬೋಧನಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಬದಲಾವಣೆಗಳ ಮಾಹಿತಿ ನೀಡಲು ಕಲ್ಯಾಣ ಕರ್ನಾಟಕ ಸಂಘವು ಶಿಕ್ಷಕರಿಗೆ ವಿವಿಧ ಕಾರ್ಯಾಗಾರ ಹಾಗೂ ತರಬೇತಿ ಹಮ್ಮಿಕೊಳ್ಳುತ್ತಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರಕ್ಕೆ 300 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ತಲಾ 150 ಶಿಕ್ಷಕರಿಗೆ ಎರಡು ತಂಡಗಳಲ್ಲಿ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮಹತ್ವ ಮನವರಿಕೆ ಮಾಡಲಿದ್ದಾರೆ. ಸುಲಭ ಬೋಧನಾ, ಕಲಿಕಾ ತಂತ್ರಗಳನ್ನೂ ಹೇಳಿಕೊಡಲಿದ್ದಾರೆ ಎಂದರು.
ಬೆಂಗಳೂರಿನ ಆ್ಯಕ್ಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ವಿವೇಕಾನಂದ ಮಾತನಾಡಿ, ಕಾರ್ಯಾಗಾರ ಸ್ಪರ್ಧಾತ್ಮಕ ಶಿಕ್ಷಣದ ಮೇಲೆ ಬೆಳಕು ಚೆಲ್ಲಲಿದೆ. ಬೋಧನಾ ಕೌಶಲ ಹೆಚ್ಚಿಸಿಕೊಳ್ಳಲು ಶಿಕ್ಷಕರಿಗೆ ಸಹಕಾರಿಯಾಗಲಿದೆ ಎಂದರು.
ಡಯಟ್ ನೋಡಲ್ ಅಧಿ ಕಾರಿ ಸಂತೋಷ ಪೂಜಾರಿ ಕಾರ್ಯಾಗಾರದ ಸಂಕ್ಷಿಪ್ತ ಪರಿಚಯ ನೀಡಿದರು. ಡಯಟ್ ಪ್ರಾಚಾರ್ಯ ಡಾ| ಮಹಮ್ಮದ್ ಗುರ್ಲಿನ್ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಕಚೇರಿಯ ಗುಂಡಪ್ಪ ಹುಡಗೆ ಇದ್ದರು. ಉಪನ್ಯಾಸಕ ಗೋವಿಂದ ರೆಡ್ಡಿ ನಿರೂಪಿಸಿದರು. ಸಂಘದ ತಾಲೂಕು ಸಂಯೋಜಕ ಗಣಪತಿ ಹಡಪದ ಸ್ವಾಗತಿಸಿದರು. ಉಪನ್ಯಾಸಕ ಲಕ್ಷ್ಮಣ ವಂದಿಸಿದರು. ಜಿಲ್ಲೆಯ ವಿವಿಧ ಶಾಲೆಗಳ 150 ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.