ಸುಧಾರಿತ ಭತ್ತದ ಬೆಳೆ ನಾಟಿ ಪ್ರಾತ್ಯಕ್ಷಿಕೆ
Team Udayavani, Jan 17, 2022, 5:47 PM IST
ಮಾನ್ವಿ: ರೈತರು ಬೇಸಿಗೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೃತಕವಾಗಿ ಕಡಿಮೆ ಖರ್ಚಿನಲ್ಲಿ ಸಸಿಗಳನ್ನು ಟ್ರೇಗಳಲ್ಲಿ ಬೆಳೆಸುವುದರಿಂದ 12 ದಿನದಲ್ಲಿ ಸಸಿಯನ್ನು ಭತ್ತನಾಟಿ ಯಂತ್ರ ಬಳಸಿ ನಾಟಿ ಮಾಡಬಹುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ಪ್ರಕಾಶ್ ಕಡ್ಲಿಮಟ್ಟಿ ತಿಳಿಸಿದರು.
ಹಿರೇಕೊಟೆಕಲ್ ಗ್ರಾಮದಲ್ಲಿನ ಪ್ರಗತಿಪರ ರೈತ ಮಲ್ಲಿಕಾರ್ಜುನರ ಜಮೀನಿನಲ್ಲಿ ಯಂತ್ರ ಶ್ರೀ ಕಾರ್ಯಕ್ರಮದಡಿ ಸುಧಾರಿತ ಭತ್ತದ ಬೆಳೆ ನಾಟಿ ಮಾಡುವ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಟ್ರೇಗಳಿಂದ ಸಸಿಗಳನ್ನು ತೆಗೆದು ಮಡಿಗಳಲ್ಲಿ ಯಂತ್ರದ ಮೂಲಕ ಸಮಾನ ಆಳ ಮತ್ತು ಅಂತರದಲ್ಲಿ ನಾಟಿ ಮಾಡುವುದರಿಂದ ಭತ್ತದ ಬೇರುಗಳು ಆಳವಾಗಿ ಹರಡಿ ಭೂಮಿಯಲ್ಲಿನ ಪೋಷಕಾಂಶಗಳನ್ನು ಬಳಸಿಕೊಂಡು ಸದೃಢವಾಗಿ ಬೆಳೆಯುತ್ತವೆ ಎಂದರು.
ಪೈರಿನಲ್ಲಿ ತೆಂಡೆಗಳ ಸಂಖ್ಯೆ ಹೆಚ್ಚಾಗುತ್ತವೆ. ಸಸಿಗಳ ನಡುವೆ ಉತ್ತಮ ಅಂತರ ಇರುವುದರಿಂದ ಗಾಳಿ-ಬೆಳಕು ಚೆನ್ನಾಗಿ ಸಸಿಗಳಿಗೆ ದೊರೆಯುತ್ತದೆ. ಕಳೆ ತೆಗೆಯಲು ಯಂತ್ರ ಬಳಸಲು ಅನುಕೂಲವಿರುತ್ತದೆ. ಕೇವಲ ಒಂದು ಗಂಟೆಯಲ್ಲಿ ಒಂದು ಎಕರೆ ಮಡಿಯಲ್ಲಿ ಸಸಿ ನಾಟಿ ಮಾಡಬಹುದಾಗಿದೆ. ನಾಟಿ ಮಾಡಿದ ಎಲ್ಲ ಸಸಿಗಳು ಜೀವಂತವಾಗಿರುವುದರಿಂದ ಕಡಿಮೆ ಸಂಖ್ಯೆಯ ಸಸಿಗಳು ಸಾಕಾಗುತ್ತದೆ ಹಾಗೂ ಉತ್ತಮವಾದ ಇಳುವರಿ ಪಡೆಯಲು ಅನುಕೂಲವಾಗುತ್ತದೆ ಎಂದರು.
ತಾಲೂಕು ಸಹಾಯಕ ಕೃಷಿ ನಿರ್ದೇಶಕ ಹುಸೇನ್ ಸಾಬ್ ಮಾತನಾಡಿ, ಹಿಂಗಾರು ಹಂಗಾಮಿನಲ್ಲಿ ಭತ್ತವನ್ನು ಅಂದಾಜು 12 ಸಾವಿರ ಎಕರೆಯಲ್ಲಿ ರೈತರು ನಾಟಿ ಮಾಡುವ ಸಂಭವವಿದೆ. ಕೃಷಿ ಯಂತ್ರಧಾರೆ ಕೇಂದ್ರಗಳಿಂದ ರೈತರು ಯಂತ್ರಗಳನ್ನು ಬಾಡಿಗೆ ಪಡೆದು ಉತ್ತಮ ಇಳುವರಿ ಪಡೆದುಕೊಳ್ಳುವಂತೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.