ಶಾಲಾ-ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
Team Udayavani, Feb 6, 2022, 11:57 AM IST
ಬೀದರ: ಬದಲಾದ ಸಂದರ್ಭದಲ್ಲಿ ಕಂಪ್ಯೂಟರ್ ಶಿಕ್ಷಣದ ಮಹತ್ವ ಹೆಚ್ಚಿದೆ. ಎಲ್ಲ ಕ್ಷೇತ್ರಗಳಲ್ಲಿ ಕಂಪ್ಯೂಟರ್ ಬಳಕೆಯಾಗುತ್ತಿದೆ. ಕಂಪ್ಯೂಟರ್ ಜ್ಞಾನ ಇಲ್ಲದಿದ್ದಲ್ಲಿ ಅನಕ್ಷರಸ್ಥರೆಂದು ಪರಿಗಣಿಸುವ ಕಾಲ ಬರಬಹುದು ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.
ನಗರದ ಪನ್ನಾಲಾಲ್ ಹೀರಾಲಾಲ್ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಅವರು, ಕಂಪ್ಯೂಟರ್ ಲ್ಯಾಬ್ ಆರಂಭಿಸಿರುವುದು ಹರ್ಷದ ಸಂಗತಿ. ಇದರಿಂದ ಮಕ್ಕಳ ಕಲಿಕೆಯ ವೇಗ ಹೆಚ್ಚಲಿದೆ. ವಿದ್ಯಾರ್ಥಿಗಳು ಕಂಪ್ಯೂಟರ್ ಸೌಲಭ್ಯ ಬಳಸಿಕೊಂಡು, ಹೊಸ-ಹೊಸ ಸವಾಲು, ಸ್ಪರ್ಧೆ ಎದುರಿಸಲು ಸಜ್ಜಾಗಬೇಕು ಎಂದು ಕಿವಿಮಾತು ಹೇಳಿದರು.
ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಅಗರವಾಲ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಂಪ್ಯೂಟರ್ ಲ್ಯಾಬ್ ಆರಂಭಿಸ ಲಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯ ಬಳಸಿಕೊಳ್ಳಬೇಕು. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ನುರಿತ, ಅನುಭವಿ ಅಧ್ಯಾಪಕರಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸಲು ಶ್ರಮಿಸಲಾಗುತ್ತಿದೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ಬ್ರಿಜ್ ಕಿಶೋರ ಮಲಾನಿ, ಪ್ರಮುಖರಾದ ನಂದಕಿಶೋರ ವರ್ಮಾ, ಧನಶಾಂ ಗೊಯಲ್, ರಾಜೇಂದ್ರಸಿಂಗ್ ಪವರ್, ಸತ್ಯನಾರಾಯಣ ಬಲ್ಗವ್, ಹನುಮಾನ್, ಪ್ರಾಚಾರ್ಯ ಬಸವರಾಜ ಬಳ್ಳೂರೆ, ಕಲ್ಲಪ್ಪ ದಾನ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.