ಮಾಳೆಗಾಂವನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ
Team Udayavani, Oct 30, 2017, 12:17 PM IST
ಬೀದರ: ವೈದ್ಯರು ಸಮಯಕ್ಕೆ ಸರಿಯಾಗಿ ಸೇವೆಗೆ ಹಾಜರಾಗಿ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಬೇಕು ಎಂದು ಶಾಸಕ ರಹೀಮ್ ಖಾನ್ ಕಿವಿ ಮಾತು ಹೇಳಿದರು.
ಮಾಳೆಗಾಂವ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯ ಎರಡು ಕೋಣೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಲಾಗಿದೆ. ಸದ್ಯ ಹೊರ ರೋಗಿಗಳ ತಪಾಸಣಾ ವಿಭಾಗದ ವ್ಯವಸ್ಥೆ ಮಾಡಲಾಗಿದೆ. ಬರುವ ದಿನಗಳಲ್ಲಿ ಕೇಂದ್ರಕ್ಕೆ ಸ್ವಂತ ಕಟ್ಟಡ ಸೇರಿದಂತೆ ವಿವಿಧ ಸೌಕರ್ಯಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಾಲ್ಕು ಎಕರೆ ಜಮೀನು ಬೇಕಿದೆ. ಕಟ್ಟಡ ನಿರ್ಮಾಣಕ್ಕಾಗಿ ರೂ. 2 ಕೋಟಿ ಅಗತ್ಯವಿದೆ. ಒಂದು ಲಕ್ಷ ರೂ. ವಂತಿಗೆ ಭರಿಸಬೇಕಾಗಲಿದೆ. ಗಡಿಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಲು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಜಿಪಂ ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಮಾತನಾಡಿದರು. ಜಿಲ್ಲಾ ಆರೋಗ್ಯ
ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಂ.ಎ. ಜಬ್ಟಾರ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ತಾಪಂ, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.