ಬಿಎಸ್‌ಎಸ್‌ಕೆ ಶುರುವಾಗೋದು ಸುಳ್ಳೆ?


Team Udayavani, Dec 18, 2018, 11:57 AM IST

bid-1.jpg

ಬೀದರ: ಆರ್ಥಿಕ ಸಂಕಷ್ಟದಿಂದ ಬಾಗಿಲು ಮುಚ್ಚಿದ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸುವ ನಿಟ್ಟಿನಲ್ಲಿ
ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ 20 ಕೋಟಿ ಅನುದಾನ ಒದಗಿಸುವ ಭರವಸೆ ನೀಡಿದ್ದು, ಇಂದಿಗೂ ಭರವಸೆ
ಈಡೇರಿಲ್ಲ.

ಬೀದರ್‌ ಜಿಲ್ಲೆಯ ರೈತರ ಜೀವನಾಡಿ ಎಂದೆ ಗುರುತಿಸಿಕೊಂಡ ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸುವ ನಿಟ್ಟಿನಲ್ಲಿ ಕಳೆದ ಜೂನ್‌ ತಿಂಗಳಿಂದ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ವಿಧಾನ ಸಭೆ
ಚುನಾವಣೆ ಸಂದರ್ಭದಲ್ಲಿ ಕೂಡ ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ನೂರು ಕೋಟಿ ಅನುದಾನ ಒದಗಿಸುವ
ಭರವಸೆ ನೀಡಲಾಗಿತ್ತು. ರಾಜ್ಯದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆದ ನಂತರ ಜಿಲ್ಲೆಯ ರೈತರು ಈ ವರ್ಷ ಬಿಎಸ್‌ಎಸ್‌ಕೆ ಶುರುವಾಗುತ್ತದೆ ಎಂದು ಭರವಸೆ ಇಟ್ಟುಕೊಂಡಿದರು.

ಅಲ್ಲದೆ ನ.15ರಂದು ಬೀದರ್‌ ಪ್ರವಾಸ ಸಂದರ್ಭದಲ್ಲಿ ಕೂಡ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಡಿಸೆಂಬರ್‌
ಮೊದಲು ಕಾರ್ಖಾನೆ ಶುರುವಾಗುತ್ತದೆ. 20 ಕೋಟಿ ಅನುದಾನ ಬಿಡುಗಡೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಅಲ್ಲದೆ, ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಬಂಡಪ್ಪ ಖಾಶೆಂಪೂರ್‌, ಗಣಿ ಮತ್ತು ಭೂ ವಿಜ್ಞಾನ ಹಾಗೂ
ಮುಜುರಾಯಿ ಸಚಿವ ರಾಜಶೇಖರ ಪಾಟೀಲ ಅವರು ಕೂಡ ಕಾರ್ಖಾನೆ ಪ್ರಾರಂಭಿಸುವ ನಿಟ್ಟಿನಲ್ಲಿ ಸರ್ಕಾರದ ಜತೆಗೆ ಚರ್ಚೆ ನಡೆಸಿದ್ದು, ಕೂಡಲೆ ಸಾಲದ ಹಣ ಬಿಡುಗಡೆ ಆಗಲಿದೆ ಎಂದು ಪದೆ ಪದೆ ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ಇಂದಿಗೂ ಕೂಡ ಜಿಲ್ಲೆಯ ಸಚಿವರು ಕಾರ್ಖಾನೆ ಪ್ರಾರಂಭಿಸುವ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿವೆ.

ಅಕ್ರಮಕ್ಕೆ ಸಾಥ್‌: ಕಳೆದ ವರ್ಷ ಕೂಡ ಆರ್ಥಿಕ ಸಂಕಷ್ಟದಿಂದ ಕಾರ್ಖಾನೆ ವಿಳಂಬವಾಗಿ ಪ್ರಾರಂಭವಾಗಿತ್ತು. ಸೂಕ್ತ
ಸಮಯಕ್ಕೆ ಸಾಲದ ಹಣ ಸಿಗದ ಕಾರಣ ಕಾರ್ಖಾನೆ ಬಾಗಿಲು ಮುಚ್ಚಲಾಗಿತ್ತು. ಕಾರ್ಖಾನೆ ಮುಚ್ಚಿದ ನಂತರ ಕಾರ್ಖಾನೆಗೆ 10 ಕೋಟಿ ಸಾಲದ ಹಣ ಬಿಡುಗಡೆಯಾಗಿದ್ದು, ರೈತರ ಕಬ್ಬಿನ ಬಾಕಿ ಹಣ ಪಾವತಿಸಿದ ಆಡಳಿತ ಮಂಡಳಿ, ಉಳಿದ ಹಣದಲ್ಲಿ ಅಕ್ರಮ ಎಸಗಲಾಗಿದೆ ಎಂದು ಆಡಳಿತ ಮಂಡಳಿ ಸದಸ್ಯರೇ ಆರೋಪ ಮಾಡಿದ್ದರು. ಇದೀಗ ಜಿಲ್ಲೆಯಲ್ಲಿನ ವಿವಿಧ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಶುರುಮಾಡಿ ಎರಡು ತಿಂಗಳ ಸಮೀಪಕ್ಕೆ ಬಂದಿದ್ದು, ಇದೀಗ ಸರ್ಕಾರ ಸಾಲದ ಹಣ ನೀಡಿದರೂ ಕೂಡ ಕನಿಷ್ಠ ಹತ್ತು ದಿನಗಳ ಕಾಲ ಕಾರ್ಖಾನೆ ಶುರು ಮಾಡಲು ಸಾಧ್ಯವಿಲ್ಲ ಎಂಬುದು ಕಾರ್ಖಾನೆ ಸಿಬ್ಬಂದಿಗಳ ಮಾತು. ಚುನಾಯಿತ ಜನ ಪ್ರತಿನಿಧಿಗಳು ಅಕ್ರಮಕ್ಕೆ
ಸಾಥ್‌ ನೀಡುವ ನಿಟ್ಟಿನಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಅನುಮಾನ ಕಾರ್ಖಾನೆ ಸಿಬ್ಬಂದಿಗಳು ಹಾಗೂ ರೈತರನ್ನು ಕಾಡುತ್ತಿದೆ.

ಒಂದು ಕೋಟಿ ಸಾಲ: ಇನ್ನು ಕೆಲವು ಮೂಲಗಳ ಪ್ರಕಾರ ಇದೇ ತಿಂಗಳು ಸರ್ಕಾರ ಒಂದು ಕೋಟಿ ಅನುದಾನ ನೀಡುವ
ಚಿಂತನೆಯಲ್ಲಿದ್ದು, ಕಾರ್ಖಾನೆ ಪ್ರಾರಂಭವಾದ ನಂತರ ಇನ್ನುಳಿದ ಸಾಲದ ಹಣ ನೀಡುವ ಆಲೋಚನೆಯಲ್ಲಿದೆ ಎಂದು
ತಿಳಿದುಬಂದಿದೆ. ಒಂದು ಕೋಟಿ ಅನುದಾನ ಯಾವ ಕೆಲಸಕ್ಕೆ ಸಾಕಾಗುತ್ತದೆ ಎಂಬ ಮಾತನ್ನು ಕಾರ್ಖಾನೆ ಅಧಿಕಾರಿಗಳು ತಿಳಿಸಿದ್ದು, ಸದ್ಯ ಕಾರ್ಖಾನೆಯ ಕಾರ್ಮಿಕರ ಸಂಬಳ, ಕಾರ್ಖಾನೆ ಮೇಲಿನ ಸಾಲದ ಬಡ್ಡಿ ಬಾಕಿ ಇದೆ. ಅಲ್ಲದೇ ಕಾರ್ಖಾನೆಯ ಯಂತ್ರೋಪಕರಣಗಳ ದುರಸ್ಥಿ ಕಾರ್ಯಕೂಡ ಇದ್ದು, ಕೋಟಿ ಅನುದಾನ ಸಾಕಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಯಾವಾಗ ಶುರು?: ಬಿಎಸ್‌ಎಸ್‌ಕೆ ಕಾರ್ಖಾನೆಯಲ್ಲಿ ಸುಮಾರು 24 ಸಾವಿರಕ್ಕೂ ಅಧಿಕ ರೈತರು ಷೇರುದಾರರಿದ್ದು, ಸಾವಿರಾರು ಕಬ್ಬು ಬೆಳೆಗಾರರು ಈ ಕಾರ್ಖಾನೆಯನ್ನೆ ನಂಬಿಕೊಂಡಿದ್ದಾರೆ. ನವೆಂಬರ್‌ ಕೊನೆಯ ವಾರ ಹಾಗೂ ಡಿಸೆಂಬರ್‌ ಮೊದಲ ವಾರದಲ್ಲಿ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯ ನಡೆಸುವುದಾಗಿ ಈ ಹಿಂದೇ ಸಹಕಾರ ಸಚಿವರು ಹೇಳಿಕೆ ಕೂಡ ನೀಡಿದರು. ಆದರೆ, ಸಧ್ಯ ಕಾರ್ಖಾನೆ ಶುರುವಾಗುವ ಸಾಧ್ಯತೆಗಳು ಕಂಡುಬರುತ್ತಿಲ್ಲ. ಮಳೆ ಕೊರತೆಯಿಂದ ರೈತರು ಹೊಲದಲ್ಲಿನ ಕಬ್ಬು ಸಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಖಾನೆಗಳ ಕಡೆಗೆ ಮುಖ ಮಾಡಿದ್ದಾರೆ.

ಜನವರಿಯಲ್ಲಿ ಸ್ಥಗಿತ: ಮಳೆ ಕೊರತೆಯಿಂದ ಕಬ್ಬಿನ ಇಳುವರಿ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೆ ಒಳಗಾಗಿ ವಿವಿಧ ಕಾರ್ಖಾನೆಗಳಿಗೆ ಕಬ್ಬು ಸಾಗಿಸುತ್ತಿದ್ದು, ಬಹುತೇಕ ಕಾರ್ಖಾನೆಗಳು ಜನವರಿ ತಿಂಗಳಲ್ಲಿ ಕಬ್ಬು ನುರಿಸುವ ಕಾರ್ಯ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಈ ಮಧ್ಯದಲ್ಲಿ ಜನವರಿ ತಿಂಗಳಲ್ಲಿ ಕಾರ್ಖಾನೆ ಶುರು ಮಾಡಿದರೆ ಕಬ್ಬು ಎಲ್ಲಿಂದ ತರುತ್ತಾರೆ? ಸರ್ಕಾರದಿಂದ ಬರುವ ಸಾಲದ ಹಣ ಏನು ಮಾಡುತ್ತಾರೆ? ಚುನಾಯಿತ ಜನಪ್ರತಿನಿಧಿ ಗಳು, ಸಚಿವರು ಸೇರಿದಂತೆ ರಾಜ್ಯದ ಮುಖ್ಯಮಂತ್ರಿಗಳು ಕೂಡ ಸುಳ್ಳು ಭರವಸೆಗಳನ್ನು ನೀಡಿದರೆ ಏನು ಗತಿ ಎಂಬ ಪ್ರಶ್ನೆ ಜಿಲ್ಲೆಯ ರೈತರದಾಗಿದೆ.

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?

Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?

Shiva Rajkumar returns on January 26th: Grand preparations for the welcome

Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್‌: ಸ್ವಾಗತಕ್ಕೆ ಅದ್ಧೂರಿ ತಯಾರಿ

Belagavi: Finance loan fraud

Belagavi: ಫೈನಾನ್ಸ್ ಸಾಲದ ವಂಚನೆ; ಜಿಲ್ಲೆಯಲ್ಲಿ ಮೊದಲ ಬಲಿ

Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ

Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ

ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ

Los Angeles: Another wildfire; More than 30,000 people displaced

Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ

Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ…

Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar-Police

Robbery: ಬೀದರ್‌ ದರೋಡೆ ಬಿಹಾರಿ ಗ್ಯಾಂಗ್‌ ಕೃತ್ಯ: ಪೊಲೀಸರು

Air Balloon: ಹೈದರಾಬಾದ್‌ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…

Air Balloon: ಹೈದರಾಬಾದ್‌ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…

HDKK-1

ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರದಿಂದ ಅಸಹಕಾರ: ಎಚ್‌.ಡಿ.ಕುಮಾರಸ್ವಾಮಿ

Bidar robbery case: Accused identified, will be arrested soon: ADGP Harishekaran

Bidar ದರೋಡೆ ಕೇಸ್:‌ ಆರೋಪಿಗಳ ಗುರುತು ಪತ್ತೆ, ಶೀಘ್ರ ಬಂಧನ: ಎಡಿಜಿಪಿ ಹರಿಶೇಖರನ್

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

3-koratagere

Tumkur: ತುಮುಲ್‌ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು

Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?

Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?

Shiva Rajkumar returns on January 26th: Grand preparations for the welcome

Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್‌: ಸ್ವಾಗತಕ್ಕೆ ಅದ್ಧೂರಿ ತಯಾರಿ

2-mudhol

Mudhol: ಸಾಲಬಾದೆಗೆ ಹೆದರಿ ದಂಪತಿ ಆತ್ಮಹತ್ಯೆ

Belagavi: Finance loan fraud

Belagavi: ಫೈನಾನ್ಸ್ ಸಾಲದ ವಂಚನೆ; ಜಿಲ್ಲೆಯಲ್ಲಿ ಮೊದಲ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.