ಶಿಕ್ಷಣದೊಂದಿಗೆ ಮಾನವೀಯ ಮೌಲ್ಯ ಬೆಳೆಸುವುದು ಅಗತ್ಯ


Team Udayavani, Sep 9, 2017, 12:12 PM IST

bid-4.jpg

ಬಸವಕಲ್ಯಾಣ: ಶಿಕ್ಷಣದೊಂದಿಗೆ ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಗಮನ ಹರಿಸಬೇಕು ಎಂದು ಸಹಾಯಕ ಆಯುಕ್ತ ಶರಣಬಸಪ್ಪ ಕೊಟಪ್ಪಗೋಳ ಹೇಳಿದರು.

ಅನುಭವ ಮಂಟಪ ಪರಿಸರದಲ್ಲಿ ವಿಶ್ವಬಸವಧರ್ಮ ಟ್ರಸ್ಟ್‌, ಅನುಭವ ಮಂಟಪ ಮತ್ತು ಬಸವಕಲ್ಯಾಣ ಅಭಿವೃದ್ಧಿ
ಮಂಡಳಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಶರಣ ಕಮ್ಮಟ ಮತ್ತು ಅನುಭವ ಮಂಟಪ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇಂಥ
ಶಿಬಿರಗಳು ಪೂರಕವಾಗುತ್ತವೆ ಎಂದರು.

ಸಾನ್ನಿಧ್ಯ ವಹಿಸಿದ್ದ ಹುಲಸೂರನ ಡಾ|ಶಿವಾನಂದ ಮಹಾಸ್ವಾಮೀಜಿ ಮಾತನಾಡಿ, ಪ್ರತಿಯೊಂದು ಮಕ್ಕಳಲ್ಲಿಯೂ ಪ್ರತಿಭೆ ಇರುತ್ತದೆ. ಪ್ರತಿಭೆ ಹೊರತರಲು ವೇದಿಕೆ ಅಗತ್ಯವಿರುತ್ತದೆ. ಇದಕ್ಕೆ ವೇದಿಕೆ ಕಲ್ಪಿಸುವ ಜತೆಗೆ ಮಕ್ಕಳ ಸರ್ವಾಂಗೀಣ ಪ್ರಗತಿಯ ದೃಷ್ಟಿಯಿಂದ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಬಿರ ಆಯೋಜಿಸಿರುವುದು ಸಂತಸ ತಂದಿದೆ
ಎಂದರು. 

ಬಸವಗುರು ಪೂಜೆ ನೆರವೇರಿಸಿದ ಬಿಜೆಪಿ ಮುಖಂಡ ವಿಜಯಕುಮಾರ ಮಂಠಾಳೆ ಮಾತನಾಡಿ, ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಜ್ಞಾನಗಂಗೆ ಸಂಸ್ಥೆಯಿಂದ ಬಹುಮಾನ ನೀಡುವದಾಗಿ ಪ್ರಕಟಿಸಿದರು. ಪ್ರಥಮ 5100 ರೂ., ದ್ವಿತೀಯ 3100 ರೂ. ಹಾಗೂ ತೃತೀಯ ಬಹುಮಾನ 2100 ರೂ. ನೀಡಲಾಗುವದು ಎಂದು ಪ್ರಕಟಿಸಿದರು.
ಸಾನ್ನಿಧ್ಯ ವಹಿಸಿದ್ದ ಡಾ| ಬಸವಲಿಂಗ ಪಟ್ಟದ್ದೇವರು ಆಶೀರ್ವಚನ ನೀಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಶಾಲೆ ಶಿಕ್ಷಣದ ಜತೆಗೆ ಜೀವನ ಶಿಕ್ಷಣ ಸೀಗಬೇಕೆಂದು ಶಿಬಿರ ಏರ್ಪಡಿಸಲಾಗಿದೆ.

ಮೂರು ದಿನದ ಶಿಬಿರದಲ್ಲಿ ಹಲವಾರು ಪೂಜ್ಯರು, ಅನುಭವಿಗಳು ಮಾರ್ಗದರ್ಶನ ಮಾಡಲಿದ್ದಾರೆ. ವಿದ್ಯಾರ್ಥಿಗಳು
ಸದುಪಯೋಗ ಪಡೆಯಬೇಕು. ಈ ಶಿಬಿರದಲ್ಲಿ ಸೇವೆ, ಇಷ್ಟಲಿಂಗದ ವೈಜ್ಞಾನಿಕತೆ, ಪಂಚಾಚಾರ , ಷಟ್‌ಸ್ಥಲ, ಶಿಸ್ತು ಸ್ವತ್ಛತೆ ಮತ್ತು ಉತ್ಸಾಹ, ಆತ್ಮವಿಶ್ವಾಸ, ನೈತಿಕ ಶಿಕ್ಷಣ, ಅಷ್ಟಾವರಣ, ದೇಶಭಕ್ತಿ ಹೀಗೆ ಹಲವು
ವಿಷಯಗಳ ಬಗ್ಗೆ ತಿಳಿಸಿಕೊಡಲಾಗುವುದು ಎಂದರು.

ಬಿಕೆಡಿಬಿ ಸದಸ್ಯ ಶಿವರಾಜ ನರಶೆಟ್ಟಿ ಮಾತನಾಡಿದರು. ಇದೇ ವೇಳೆ ಚೆನ್ನೈ ಶಾಂತಿ ವಿವಿಯಿಂದ ಗೌರವ ಡಾಕ್ಟರೇಟ್‌ ಪಡೆದ ಹುಲಸೂರನ ಡಾ| ಶಿವಾನಂದ ಮಹಾಸ್ವಾಮೀಜಿ ಹಾಗೂ ಗುವಿವಿಯಿಂದ ಡಾಕ್ಟರೇಟ್‌ ಪಡೆದ ಕಸಾಪ ತಾಲೂಕು ಅಧ್ಯಕ್ಷ ಡಾ| ರುದ್ರಮಣಿ ಮಠಪತಿ ಅವರನ್ನು ಸನ್ಮಾನಿಸಲಾಯಿತು. ಡಾ| ಎಸ್‌.ಬಿ. ದುರ್ಗೆ
ಸ್ವಾಗತಿಸಿದರು. ಶಿವಶಂಕರ ಹಡಪದ ನಿರೂಪಿಸಿದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.