ಆಹಾರ ಸಾಮಗ್ರಿಗಳ ಕಿಟ್ ವಿತರಣೆ
Team Udayavani, Apr 10, 2020, 5:32 PM IST
ಜಗಳೂರು: ಕಾರ್ಮಿಕರಿಗೆ ಮತ್ತು ಬಡವರ್ಗದವರಿಗೆ ಶಾಸಕ ಎಸ್.ವಿ. ರಾಮಚಂದ್ರ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದರು
ಜಗಳೂರು: ಒಂದೇ ದಿನಕ್ಕೆ ಎಲ್ಲರಿಗೂ ಆಹಾರ ಸಾಮಗ್ರಿ ವಿತರಿಸಲಾಗುವುದಿಲ್ಲ. ದಾನಿಗಳಿಂದ ಸಂಗ್ರಹಿಸಿ ಹಂತ ಹಂತವಾಗಿ ಆರ್ಹರಿಗೆ ಆಹಾರ ಸಾಮಗ್ರಿ ವಿತರಿಸಲಾಗುವುದು ಎಂದು ಶಾಸಕ ಎಸ್.ವಿ. ರಾಮಚಂದ್ರ ಭರವಸೆ ನೀಡಿದರು.
ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ ಕಾರ್ಮಿಕರಿಗೆ ಮತ್ತು ಬಡವರ್ಗದವರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಅವರು ಮಾತನಾಡಿದರು. ಪ್ರಧಾನ ಮಂತ್ರಿ ಮತ್ತು ರಾಜ್ಯದ ಮುಖ್ಯ ಮತ್ರಿಗಳ ಸೂಚನೆಯಂತೆ ಬಡ ಹಾಗೂ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿ ದಾನಿಗಳಿಂದ ಸಂಗ್ರಹಿಸಿ ವಿತರಿಸಲಾಗುತ್ತಿದೆ. ಈಗಾಗಲೆ ಕರವೇ, ಸರಕಾರಿ ನೌಕರರ ಸಂಘದ ವತಿಯಿಂದ ಕಿಟ್ ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವರ್ತಕರು ನೀಡಲಿದ್ದು, ಇನ್ನು ಸಹ ದಾನಿಗಳಿಂದ ಸಂಗ್ರಹಿಸಿ ವಿತರಿಸಲಾಗುವುದು ಎಂದರು.
ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಮಾತನಾಡಿದರು. ಇಒ ಮಲ್ಲಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ನಾಗರಾಜ್, ಸಿಪಿಐ ದುರು ಗಪ್ಪ, ಪಿಎಸ್‌ಐ ಉಮೇಶ್ ಬಾಬು, ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಜ್ಜಣ್ಣ, ಕರವೇ ಅಧ್ಯಕ್ಷ ಮಹಾಂತೇಶ್, ಮಹಿಳಾ ಘಟಕದ ಅಧ್ಯಕ್ಷೆ ರೇಖಾ, ಬಿಜೆಪಿ ತಾಲೂಕು ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಷಂಷೀರ್, ತಾ.ಪಂ ಸದಸ್ಯ ಸಿದ್ದೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.