![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Apr 13, 2020, 3:43 PM IST
ಜೇವರ್ಗಿ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ರವಿವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಡಾ| ಅಜಯಸಿಂಗ್ ಮಾತನಾಡಿದರು
ಜೇವರ್ಗಿ: ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನಲ್ಲಿರುವ ನಿರ್ಗತಿಕರು, ಬಡವರು, ಅಲೆಮಾರಿ ಜನಾಂಗದವರು ಹಸಿವಿನಿಂದ ಬಳಲಬಾರದು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಪ್ರಮಾಣದಲ್ಲಿ ಆಹಾರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ರವಿವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊರ ರಾಜ್ಯ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ತಾಲೂಕಿಗೆ 8960 ಜನ ಬಂದಿದ್ದು, ಮಹಾರಾಷ್ಟ್ರದಿಂದ 1283, ತೆಲಂಗಾಣದಿಂದ 221, ಬೆಂಗಳೂರು ನಗರದಿಂದ 6186 ಹಾಗೂ ಇತರ ಪ್ರದೇಶಗಳಿಂದ 1270 ಜನ ಬಂದಿದ್ದಾರೆ ಎಂದು ತಿಳಿಸಿದರು.
ದೊಡ್ಡ ನಗರಗಳಿಂದ ಹಳ್ಳಿಗಳಿಗೆ ಜನರು ಬಂದರೆ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೊರೊನಾ ಸೋಂಕು ತಡೆಗಟ್ಟಲು ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು.
ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದಿರುವ 8960 ಜನರಲ್ಲಿ ಈಗಾಗಲೇ 5413 ಜನರಿಗೆ 14
ದಿನಗಳ ಹೋಂ ಕ್ವಾರಂಟೈನ್ ಪೂರ್ಣಗೊಳಿಸಲಾಗಿದೆ.
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನಲ್ಲಿ 75631 ಕುಟುಂಬಗಳು ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದಾರೆ. ಇವರಲ್ಲಿ 46079 ಕುಟುಂಬಗಳಿಗೆ ನ್ಯಾಯ ಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸಲಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಸಿದರಾಯ ಭೋಸಗಿ, ಯಡ್ರಾಮಿ ತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ, ತಾಪಂ ಇಒ ವಿಲಾಸರಾಜ, ಸಹಾಯಕ ಕೃಷಿ ನಿರ್ದೇಶಕ ಸುನೀಲಕುಮಾರ ಜವಳಗಿ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ. ಪಾಟೀಲ, ಸಿಡಿಪಿಒ ಶಿವಪ್ರಕಾಶ ಹಿರೇಮಠ, ಸಿಪಿಐ ರಮೇಶ ರೊಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.