ಸಾಹಿತ್ಯ ಸಮ್ಮೇಳನದಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲ

ಕಾರ್ಯಕ್ರಮ ಯಶಸ್ಸಿಗೆ ಉಪ ಸಮಿತಿ ರಚಿಸಿಸಾಹಿತಿಗಳ ಸಲಹೆ ಮೇರೆಗೆ ಉತ್ತಮ ವೇದಿಕೆ ನಿರ್ಮಿಸಿ

Team Udayavani, Jan 9, 2020, 4:44 PM IST

9-January-24

ಕಲಬುರಗಿ: ಅಖೀಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಎಷ್ಟೇ ತಯಾರಿ ಮಾಡಿಕೊಂಡರೂ ಕಡಿಮೆ ಆಗಿರುವುದರಿಂದ ಸಮ್ಮೇಳನದ ಮುಖ್ಯ ವೇದಿಕೆ ಜತೆಗೆ ಸಮನಾಂತರ ವೇದಿಕೆಯಲ್ಲಿಯೂ ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಉಪ ಸಮಿತಿಗಳನ್ನು ರಚಿಸಬೇಕು ಎಂದು ಕಲಬುರಗಿ ದಕ್ಷಿಣ ಶಾಸಕ ಹಾಗೂ ಸಾಹಿತ್ಯ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬುಧವಾರ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ವೇದಿಕೆ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗಣ್ಯರನ್ನು ಸತ್ಕರಿಸಲು ಹಳದಿ, ಕೆಂಪು ಬಣ್ಣದ ಕನ್ನಡ ಧ್ವಜದ ಶಾಲು ಮತ್ತು ಮೂರು ವಿವಿಧ ಮಾದರಿಯ ಸ್ಮರಣ ಸಂಚಿಕೆಗಳನ್ನು ಸಿದ್ಧಪಡಿಸುವುದರ ಜತೆಗೆ ನೆನಪಿನ ಕಾಣಿಕೆಯಲ್ಲಿ ಸಮ್ಮೇಳನ ಲಾಂಛನ ಕಡ್ಡಾಯವಾಗಿ ಬಳಸಬೇಕು ಎಂದು ಸಲಹೆ ನೀಡಿದ ದತ್ತಾತ್ರೇಯ ಪಾಟೀಲ ಅವರು, ಯಾವುದೇ ಕಾರಣಕ್ಕೂ ಸಮ್ಮೇಳನದಲ್ಲಿ ಪ್ಲಾಸ್ಟಿಕ್‌ ಬಳಸಬೇಡಿ ಎಂದರು.

ಸಮ್ಮೇಳನದ ವೇದಿಕೆ ನಿರ್ಮಾಣ ಕಾರ್ಯಕ್ಕೆ ಜನವರಿ 16 ರಂದು ಬೆಳಗ್ಗೆ 11:30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ. ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಜರುಗುವ ಉದ್ಘಾಟನಾ ದಿನದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖ ಗಣ್ಯರು ಆಗಮಿಸುವುದರಿಂದ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕನ್ನಡ ಕಂಪನ್ನು ಹೆಚ್ಚಿಸುವ ರಾಷ್ಟ್ರೀಯ ಹಬ್ಬ ಇದಾಗಿದ್ದು, ಇಲ್ಲಿ ಕವಿಗೋಷ್ಠಿ, ಸಂಗೀತ, ನೃತ್ಯ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ತಕ್ಕಂತೆ ಅತ್ಯಾಧುನಿಕ ಗುಣಮಟ್ಟದ ಧ್ವನಿವರ್ಧಕ ಮತ್ತು ಬೆಳಕಿನ ವ್ಯವಸ್ಥೆ ಮಾಡಬೇಕು. ಮುಖ್ಯ ವೇದಿಕೆಯ ಹಿನ್ನೆಲೆಯ ಪರದೆ ಜಿಲ್ಲೆಯನ್ನು ಮುಖ್ಯವಾಗಿ ಗುರುತಿಸುವಂತಾಗಬೇಕು. ಐತಿಹಾಸಿಕ ಸ್ಥಳಗಳು ಇಲ್ಲಿ ಒಳಗೊಳ್ಳಬೇಕು. ಈ ನಿಟ್ಟಿನಲ್ಲಿ ಬ್ಯಾಕ್‌ಡ್ರಾಪ್‌ ವಿನ್ಯಾಸದ ಕುರಿತು ಡಾ| ಗೀತಾ ನಾಗಭೂಷಣ ಸೇರಿದಂತೆ ಜಿಲ್ಲೆಯ ಎಲ್ಲಾ ಸಾಹಿತಿಗಳ ಅಭಿಪ್ರಾಯ ಪಡೆದು ಅತ್ಯುತ್ತಮ ವೇದಿಕೆ ಹಿನ್ನೆಲೆಯ ಪರದೆ ಸಿದ್ಧಪಡಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಅವರಿಗೆ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ನಿರ್ದೇಶಿಸಿದರು.

ಕಲಬುರಗಿ ನಗರ ಪೊಲೀಸ್‌ ಆಯುಕ್ತ ಎಂ.ಎನ್‌.ನಾಗರಾಜ ಮಾತನಾಡಿ, ಮುಖ್ಯ ವೇದಿಕೆ, ಎರಡು ಸಮನಾಂತರ ವೇದಿಕೆ, ಸಾರ್ವಜನಿಕರ ಊಟದ ಸ್ಥಳ ಹೀಗೆ ಸಮ್ಮೇಳನದ ಸಂಪೂರ್ಣ ಆವರಣ ಸಿ.ಸಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಇರಲಿದೆ. ಅಲ್ಲದೆ ಡ್ರೋಣ್‌ ಕ್ಯಾಮೆರಾಗಳನ್ನು ಬಳಸಲಾಗುತ್ತದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್‌ ಬಂದೋಬಸ್ತ್ಮಾ ಡಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಶರತ್‌ ಬಿ. ಮಾತನಾಡಿ ವಿವಿದ ಕ್ಷೇತ್ರಗಳಲ್ಲಿನ ಸಾಧಕರನ್ನು ಸಮ್ಮೇಳನಕ್ಕೆ ಆಹ್ವಾನಿಸಬೇಕು. ಸ್ಥಳೀಯ ಕಲೆ ಮತ್ತು ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇದಾಗಿರುವುದರಿಂದ ಕವಿಗೋಷ್ಠಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಯ ಕಲಾವಿದರಿಗೆ ಸೂಕ್ತ ಪ್ರಾತಿನಿಧ್ಯ ಲಭಿಸಬೇಕು. ಲಕ್ಷಾಂತರ ಜನಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಇಲ್ಲಿ ಸೇರುವುದರಿಂದ ಸ್ವತ್ಛತೆಗೆ ಆದ್ಯತೆ ನೀಡಬೇಕಾಗಿದ್ದು, ಪುರುಷ-ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಬೇಕಾಗಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಮಾತನಾಡಿ, ಸಮ್ಮೇಳನದಲ್ಲಿ ಜರುಗುವ ಕವಿಗೋಷ್ಠಿಗಳ ಮಧ್ಯೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು. ಸಾಹಿತ್ಯ ಸಮ್ಮೇಳನದ ಸಂಪೂರ್ಣ ಮುಖ್ಯ ವೇದಿಕೆ ಆವರಣಕ್ಕೆ ಅನುಭವ ಮಂಟಪ, ಮುಖ್ಯ ವೇದಿಕೆಗೆ ಶ್ರೀವಿಜಯ, ಸಮನಾಂತರ ವೇದಿಕೆಗಳಿಗೆ ಪೂಜ್ಯ ದೊಡ್ಡಪ್ಪ ಅಪ್ಪ, ಬಿ. ಶ್ಯಾಮಸುಂದರ ಹೆಸರಿಡಲು ಚರ್ಚಿಸಲಾಯಿತು.

ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತ ಅಮೀನ್‌ ಮುಖಾ¤ರ ಅಹ್ಮದ್‌, ಪ್ರಚಾರ ಸಮಿತಿ ಕಾರ್ಯಾಧ್ಯಕ್ಷರಾಗಿರುವ ಸಿದ್ದೇಶ್ವರಪ್ಪ ಜಿ.ಬಿ., ಆರ್‌.ಪಿ.ಜಾಧವ, ಜಗದೀಶ ಮೇಟಿ ಹಾಗೂ ವೇದಿಕೆ ಸಮಿತಿಯ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.