ತಿರಂಗ ಧ್ವಜ ಹಿಡಿದು ಬೈಕ್‌ ಮೆರವಣಿಗೆ

ಗಣರಾಜ್ಯೋತ್ಸವ ಸಂಭ್ರಮ50 ಕ್ಕೂ ಹೆಚ್ಚು ಆಟೋ ಚಾಲಕರಿಂದ ರ‍್ಯಾಲಿ

Team Udayavani, Jan 27, 2020, 2:30 PM IST

27-Janauary-22

ಕಲಬುರಗಿ: ಜಿಲ್ಲಾದ್ಯಂತ ಶನಿವಾರ 71ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ತ್ರಿವರ್ಣ ಧ್ವಜಾರೋಹಣ, ಭಕ್ತಿ ಗೀತೆಗಳ ಗಾಯನ ನಡೆಯಿತು.

ಗಣರಾಜ್ಯೋತ್ಸವ ಅಂಗವಾಗಿ ಹಲವೆಡೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಶೇಷವೆಂಬಂತೆ ಯುವಕರು ತಿರಂಗ ಧ್ವಜ ಹಿಡಿದು ನಗರದಾದ್ಯಂತ ಬೈಕ್‌ ರ್ಯಾಲಿ ನಡೆಸಿ ಗಮನ ಸೆಳೆದರು. 50ಕ್ಕೂ ಅಧಿಕ ಆಟೋ ಚಾಲಕರು ರ‍್ಯಾಲಿ ನಡೆಸಿ ಗಣರಾಜ್ಯೋತ್ಸವವನ್ನು ಸಂಭ್ರಮಿಸಿದರು.

ಪಿಡಿಎ ಕಾಲೇಜು ವಿದ್ಯಾರ್ಥಿಗಳು ಬೃಹತ್‌ ಧ್ವಜದ ಮೆರವಣಿಗೆ ನಡೆಸಿದರು. ಕಾಲೇಜಿನಿಂದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದ ವರೆಗೆ ನಡೆದ ತಿರಂಗ ಜಾಥಾ ಆಕರ್ಷಕವಾಗಿತ್ತು.
ಡಿಎಚ್‌ಒ ಕಚೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಡಾ| ವಿವೇಕಾನಂದ ರೆಡ್ಡಿ ನೆರವೇರಿಸಿದರು. ಡಾ| ಅವಿನಾಶ ಕಸ್ಕೆ, ಡಾ| ರತ್ನವೀರ, ಸಂತೋಷ ಕುಡಳ್ಳಿ, ಗುಂಡಪ್ಪ ದೊಡ್ಡಮನಿ, ಶೌಖತ್‌ ಅಲಿ, ಮಂಜುನಾಥ ಕಂಬಾಳಿಮಠ, ಸುರೇಖಾ ಹೇರಲಗಿ, ಅಬ್ದುಲ್‌ ಜಬ್ಬರ್‌, ಸುರೇಶ ದೊಡ್ಡಮನಿ, ವಿಶಾಲ ಸಜ್ಜನ್‌, ಅರ್ಚನಾ ಇದ್ದರು.

ಬಿಜೆಪಿ ಕಚೇರಿ: ನಗರದ ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಧ್ವಜಾರೋಹಣ ಮಾಡಿದರು. ಜಿ.ಪಂ ಅಧ್ಯಕ್ಷೆ ಸುವರ್ಣಾ ಎಚ್‌. ಮಲಾಜಿ, ಮಾಜಿ ಎಂಎಲ್‌ಸಿ ಶಶೀಲ ನಮೋಶಿ, ವಿಠ್ಠಲ ಜಾಧವ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಕಾಂಗ್ರೆಸ್‌ ಕಚೇರಿ: ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೆರವೇರಿಸಿದರು. ಶಾಸಕಿ ಖನೀಜ್‌ ಫಾತೀಮಾ, ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ, ಮಹಿಳಾ ಘಟಕದ ಅಧ್ಯಕ್ಷೆ ಲತಾ ರವಿ ರಾಠೊಡ ಪಾಲ್ಗೊಂಡಿದ್ದರು.

ಜೆಡಿಎಸ್‌ ಕಚೇರಿ: ನಗರದ ಜಾತ್ಯತೀತ ಜನತಾ ದಳ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಧ್ವಜಾರೋಹಣ ಮಾಡಿದರು. ಮುಖಂಡರಾದ ಶಾಮರಾವ್‌ ಸೂರನ್‌, ನಾಸೀರ್‌ ಹುಸೇನ್‌ ಉಸ್ತಾದ್‌ ಹಾಗೂ ಪಕ್ಷದ ನಾಯಕರು ಇದ್ದರು.

ಜಿ.ಪಂ ಕಚೇರಿ: ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜಿ.ಪಂ ಅಧ್ಯಕ್ಷೆ ಸುವರ್ಣಾ ಎಚ್‌. ಮಲಾಜಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸಿಇಒ ರಾಜಾ ಪಿ. ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.

ಕೆಬಿಎನ್‌ ವಿಶ್ವವಿದ್ಯಾಲಯ: ನಗರದ ಖಾಜಾ ಬಂದಾ ನವಾಜ್‌ ವಿಶ್ವವಿದ್ಯಾಲಯದಲ್ಲಿ ಸಮ ಕುಲಪತಿ ಎಫ್‌.ಯು. ಅಹ್ಮದ್‌ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿದರು. ಪ್ರೊ| ಎ.ಎಚ್‌. ರಾಜಾಸಾಬ, ಕೆಬಿಎನ್‌ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಎ. ಲತೀಫ್‌ ಶರೀಫ್‌, ಡಾ| ರುಕ್ಷರ್‌ ಫಾತೀಮಾ, ಮೊಹಮ್ಮದ್‌ ಅಜಂ ಕಮಲ್‌, ಶೇಖ್‌ ಜುನೈದ್‌ ಸೌದ್‌ ಹಾಗೂ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮಾರ್ಗದರ್ಶಿ ಸೊಸೈಟಿ: ನಗರದ ಮಾರ್ಗದರ್ಶಿ ಸಂಸ್ಥೆ ವತಿಯಿಂದ ನಗರ ರಾತ್ರಿ, ಹಗಲು
ವಸತಿ ರಹಿತ ನಿರ್ಗತಿಕರ ತಂಗುದಾನದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕ ಆನಂದರಾಜ, ಶಿವಕುಮಾರ ಹೊಳಕರ್‌, ರಾಹುಲ್‌ ಮಾಳಗೆ, ಶ್ರೀನಿವಾಸ ಕುಲಕರ್ಣಿ, ಭೀಮರಾಯ, ಬಸವರಾಜ ಬಿರಾದಾರ, ನಾಗರಾಜ ಇದ್ದರು.

ಮಾರ್ಗದರ್ಶಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ನೆಮ್ಮದಿ ಹಿರಿಯರ ಮನೆ ವೃದ್ಧಾಶ್ರಮದಲ್ಲಿ ಹಿರಿಯ ಜೀವಿಗಳೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಯಿತು. ರೋಟರಿ ಕ್ಲಬ್‌ ಅಧ್ಯಕ್ಷ ಸಂಧ್ಯಾರಾಜ್‌ ಸಾಮ್ಯುವೆಲ್‌ ಧ್ವಜಾರೋಹಣ ಮಾಡಿದರು. ಯೋಜನಾ ನಿರ್ದೇಶಕಿ ವಿಜಯಲಕ್ಷ್ಮೀ , ಶಿವಕುಮಾರ ಹೊಳಕರ್‌, ರಾಹುಲ್‌ ಮಾಳಗೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.