![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 18, 2020, 3:48 PM IST
ಸಾಂದರ್ಭಿಕ ಚಿತ್ರ
ಕಲಬುರಗಿ: ಮಹಾರಾಷ್ಟ್ರದ ಮುಂಬೈ ಹಾಗೂ ಪುಣೆಯಲ್ಲಿರುವ ಕಲಬುರಗಿ ಜಿಲ್ಲೆಯ ವಲಸೆ ಕಾರ್ಮಿಕರು ತಮ್ಮ ಮನೆಗೆ ತೆರಳಲು ಅನುಕೂಲವಾಗುವಂತೆ ರೈಲಿನ ವ್ಯವಸ್ಥೆ ಮಾಡಬೇಕು ಎಂದು ರೈಲ್ವೆ ಖಾತೆ ಸಚಿವ ಪಿಯೂಷ ಗೋಯಲ್ ಅವರಿಗೆ ಮಾಜಿ ಶಾಸಕ ಬಿ.ಆರ್. ಪಾಟೀಲ ಪತ್ರ ಬರೆದು ಮನವಿ ಮಾಡಿದ್ದಾರೆ.
ರೈಲ್ವೆ ಇಲಾಖೆ ವಲಸೆ ಕಾರ್ಮಿಕರಿಗಾಗಿ ಶ್ರಮಿಕ ವಿಶೇಷ ರೈಲುಗಳನ್ನು ಓಡಿಸುತ್ತಿರುವುದು ಅಭಿನಂದನಾರ್ಹ. ಸುಮಾರು 1 ಲಕ್ಷ ಕಾರ್ಮಿಕರು ಮುಂಬೈ ಹಾಗೂ ಪುಣೆಯಲ್ಲಿದ್ದಾರೆ ಎಂಬ ಅಂದಾಜಿದೆ. ಈಗ ಮುಂಬೈಯಿಂದ ಆಗಮಿಸಿರುವ 2ರಿಂದ 3ರೈಲುಗಳಿಂದ ಕೇವಲ ಶೇ. 2ರಿಂದ 3ರಷ್ಟು ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತೆರಳಲು ಅನುಕೂಲ ಕಲ್ಪಿಸಿದಂತಾಗಿದೆ. ಸಾಕಷ್ಟು ಕಾರ್ಮಿಕರು ತಮ್ಮ ಸ್ವಗ್ರಾಮಗಳಿಗೆ ತೆರಳಲು ರಸ್ತೆಗಳಲ್ಲಿ ನಡೆಯುತ್ತ, ರೈಲ್ವೆ ಟ್ರ್ಯಾಕ್ ಮೂಲಕ ನಡೆದುಕೊಂಡು, ಟ್ರಕ್ ಹಾಗೂ ಕಂಟೇನರ್‌ಗಳಲ್ಲಿ ಬರುತ್ತಿದ್ದಾರೆ. ಕಾರಣ ಅಸಹಾಯಕ ವಲಸೆ ಕಾರ್ಮಿಕರಿಗೆ ಉಚಿತವಾಗಿ ಇನ್ನು ಹೆಚ್ಚಿನ ರೈಲುಗಳನ್ನು ಓಡಿಸಿ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.