ಇಎಸ್‌ಐ ಆಸ್ಪತ್ರೆಯಲ್ಲಿ 400 ಬೆಡ್ ವ್ಯವಸ್ಥೆ
ಕೆಮ್ಮು -ನೆಗಡಿ ಇದ್ದರೆ ವಿಶ್ರಾಂತಿ ಪಡೆಯಿರಿಜಿಮ್ಸ್‌ನಲ್ಲಿ ಸೋಂಕು ಪತ್ತೆಗಾಗಿ ಲ್ಯಾಬ್
Team Udayavani, Mar 13, 2020, 3:55 PM IST
ಕಲಬುರಗಿ: ಕೊರೊನಾ ಹರಡುವಿಕೆ ತಡೆಯಲು ಕೇಂದ್ರ ಸರ್ಕಾರದ ನಿರ್ದೇಶನದಂತೆ ಇಎಸ್‌ಐ ಆಸ್ಪತ್ರೆಯಲ್ಲಿ 400 ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವನ್ನು ಜಿಲ್ಲಾಡಳಿತ ಕೈಗೊಳ್ಳುತ್ತಿದೆ. ಜಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಗಾಗಿ ಲ್ಯಾಬ್ ವ್ಯವಸ್ಥೆ ಮಾಡಲಾಗುತ್ತಿದೆ. ತಕ್ಷಣವೇ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದರು.
ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಪ್ರವಾಸಿ ತಾಣ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಕೆಮ್ಮು, ಜ್ವರ, ನೆಗಡಿ, ಉಸಿರಾಟದ ತೊಂದರೆ ಇರುವವರು ಸೂಕ್ತ ಚಿಕಿತ್ಸೆ ಪಡೆಯಬೇಕು. ಈ ರೋಗಿಗಳು ಹೊರಗಡೆ ತಿರುಗಾಡದೆ ಮನೆಯಲ್ಲೇ ಗುಣಮುಖರಾಗುವ ವರೆಗೆ ವಿಶ್ರಾಂತಿ ಪಡೆಯಬೇಕೆಂದು ಸಲಹೆ ನೀಡಿದರು.
ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರ ಮೇಲೂ ನಿಗಾ ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರವಾಸಿ ತಾಣಗಳಲ್ಲಿ ಆರೋಗ್ಯ ಸಲಹಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಹೊರದೇಶಕ್ಕೆ ತೆರಳುವವರಿಗೆ ವೀಸಾವನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಹೊರದೇಶದಿಂದ ಬರುವರನ್ನು ಸೂಕ್ಷ್ಮವಾಗಿ ಪರೀಕ್ಷಿಸಿ ಅವರ ಸಂಪೂರ್ಣ ಮಾಹಿತಿ ಪಡೆಯಲಾಗುತ್ತದೆ. 14 ದಿನಗಳ ಕಾಲ ಅವರ ಆರೋಗ್ಯದ ಮೇಲೆ
ನಿಗಾವಹಿಸಲಾಗುತ್ತದೆ ಎಂದರು.
ನಗರದ ಮಾಲ್, ಹೊಟೇಲ್, ಪ್ರವಾಸಿ ಮಂದಿರಗಳ ಮಾಲೀಕರೊಂದಿಗೆ ಸಭೆ ನಡೆಸಿ ಕೊರೊನಾ ಕುರಿತು ಜಾಗೃತಿ ಮೂಡಿಸಲಾಗುವುದು. ಆರೋಗ್ಯ ಇಲಾಖೆಯಿಂದ ಧಾರ್ಮಿಕ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಾಗುವುದು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮ್ಮೇಳನಗಳ ಆಯೋಜನೆಗೆ ಅವಕಾಶ ನೀಡದಂತೆ ಸರ್ಕಾರ ಸೂಚನೆ ನೀಡಿದೆ ಎಂದು ಹೇಳಿದರು.
ಜಿಮ್ಸ್, ಇಎಸ್‌ಐಗೆ ಭೇಟಿ: ಮುಂಜಾಗ್ರತಾ ಕ್ರಮವಾಗಿ ಕೊರೊನಾ ಶಂಕಿತರಿಗೆ ಚಿಕಿತ್ಸೆ ನೀಡಲು ಜಿಮ್ಸ್ ಆಸ್ಪತ್ರೆ ಮತ್ತು ಇಎಸ್‌ಐ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶರತ್ ಬಿ., ಜಿ.ಪಂ ಸಿಇಒ ಡಾ| ರಾಜಾ ಪಿ., ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಚಿಕಿತ್ಸೆಗೆ ಜಿಮ್ಸ್ ಸಜ್ಜುಗೊಂಡಿರಬೇಕು. ಒಂದು ವೇಳೆ ಕೊರೊನಾ ಉಲ್ಬಣಗೊಂಡಿದ್ದೆ ಆದಲ್ಲಿ ಅದರ ನಿಯಂತ್ರಣಕ್ಕೂ ನಾವು ತಯಾರಾಗಬೇಕಾಗುತ್ತದೆ. ಆದ್ದರಿಂದ ಪಕ್ಕದ ಟ್ರಾಮಾ ಸೆಂಟರ್‌ನಲ್ಲಿ 50 ಬೆಡ್ ವಿಶೇಷ ವಾರ್ಡ್ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಿಇಒ ಡಾ| ಪಿ. ರಾಜಾ ಮಾತನಾಡಿ, ಆಸ್ಪತ್ರೆಗೆ ಮಂಜೂರಾಗಿರುವ ಎಲ್ಲ ವೆಂಟಿಲೇಟರ್ ಕಾರ್ಯ ನಿರ್ವಹಣೆಯಲ್ಲಿ ಇರಬೇಕು. ಏನೇ ತಾಂತ್ರಿಕ ತೊಂದರೆಗಳಿದ್ದಲ್ಲಿ ಕೂಡಲೇ ಸರಿಪಡಿಸಿಕೊಳ್ಳಬೇಕೆಂದರು ಸೂಚಿಸಿದರು.
ಈಗಾಗಲೇ ಜಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವುಳ್ಳ ತಲಾ ಆರು ಹಾಸಿಗೆಯ ಮಹಿಳಾ ಮತ್ತು ಪುರುಷರ ಪ್ರತ್ಯೇಕ ವಾರ್ಡ್ ಸ್ಥಾಪಿಸಲಾಗಿದೆ. 24 ಗಂಟೆ ಸೇವೆಗೆ ತಜ್ಞ ವೈದ್ಯರು ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ. ಆರ್‌ಎಂಒ ಡಾ| ರಾಜಶೇಖರ ಮಾಲಿ ಮತ್ತು ರಘುನಾಥ ಕುಲಕರ್ಣಿ ನೇತೃತ್ವದಲ್ಲಿ ಮೇಲುಸ್ತುವಾರಿ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ| ಎ.ಎಸ್. ರುದ್ರವಾಡಿ, ಜಿಮ್ಸ್‌ನ ವೈದ್ಯಕೀಯ ಅಧೀಕ್ಷಕ ಡಾ| ಶಫಿಯುದ್ದಿನ್ ಮಾಹಿತಿ ನೀಡಿದರು.
ಇಎಸ್‌ಐ ಮೆಡಿಕಲ್ ಕಾಲೇಜಿಗೂ ಭೇಟಿ ನೀಡಿ 200 ಬೆಡ್‌ಗಳ ವಿಶೇಷ ಚಿಕಿತ್ಸಾ ವಾರ್ಡ್ ಮತ್ತು ಕ್ವಾರೆಂಟೈನ್ ವಾರ್ಡ್ ಕೋಣೆಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದರು. ಇಎಸ್‌ಐ ಡೀನ್ ಡಾ| ಎ.ಎಲ್. ನಾಗರಾಜ ಪೂರ್ವಸಿದ್ಧತೆ ಕುರಿತು ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಣಾ ಕಾರಿ ಡಾ|
ಎಂ.ಎ. ಜಬ್ಟಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.