ರಾಶಿಯಾಗಿ ತಿಂಗಳಾದರೂ ಖರೀದಿಯಾಗದ ತೊಗರಿ

ನೋಂದಣಿಯಲ್ಲಿ ಕಾಲ ಕಳೆಯುತ್ತಿದೆ ಸರ್ಕಾರ ಅಗ್ಗದ ದರದಲ್ಲಿ ಮಾರಾಟ ಮಾಡುತ್ತಿರುವ ರೈತ

Team Udayavani, Feb 2, 2020, 3:44 PM IST

2-Febraury-21

ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆ ತೊಗರಿ ಬೆಲೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕುಸಿತವಾಗಿದ್ದರೂ ಸರ್ಕಾರ ಮಧ್ಯಪ್ರವೇಶಿಸಿ ಖರೀದಿ ಮಾಡಲು ಹಿಂದೇಟು ಹಾಕಿರುವುದರಿಂದ ಬರ-ಪ್ರವಾಹದ ನಡುವೆ ಬೆಳೆದಿದ್ದ ತೊಗರಿಯನ್ನು ಅಗ್ಗದ ದರದಲ್ಲಿ ಮಾರಾಟ ಮಾಡಿ ಕೈ ಸುಟ್ಟುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ನಿಗದಿತ ಸಮಯದೊಳಗೆ ಖರೀದಿ ಆರಂಭವಾಗಿದ್ದರೆ ಇಷ್ಟೋತ್ತಿಗೆ ಶೇ.80ರಷ್ಟು ಖರೀದಿ ಪ್ರಕ್ರಿಯೆ ಮುಗಿಯುತ್ತಿತ್ತು. ಆದರೆ ಸರ್ಕಾರಕ್ಕೆ, ಈ ಭಾಗದ ಜನಪ್ರತಿನಿಧಿಗಳಿಗೆ ತೊಗರಿ ಬಗ್ಗೆ ಎಳ್ಳು ಕಾಳಷ್ಟು ಕಾಳಜಿ ಇಲ್ಲದಂತೆ ತೋರುತ್ತಿದೆ.

ಕಳೆದ ಡಿಸೆಂಬರ್‌ ಎರಡನೇ ವಾರದಿಂದಲೇ ತೊಗರಿ ಮಾರುಕಟ್ಟೆಗೆ ಆರಂಭವಾಗಿದೆ. ಕೇಂದ್ರ ಸರ್ಕಾರ 2019, ಡಿ.18ರಂದೇ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರ ತನ್ನ ಪ್ರೋತ್ಸಾಹ ಧನ ನಿಗದಿ ಮಾಡಲು 10 ದಿನಗಳ ಕಾಲ ಸಮಯ ತೆಗೆದುಕೊಂಡಿತು. ಕೇಂದ್ರದ 5800 ರೂ. ಬೆಂಬಲ ಬೆಲೆಗೆ ರಾಜ್ಯ ಸರ್ಕಾರ ಕೇವಲ 300 ರೂ. ಪ್ರೋತ್ಸಾಹ ಧನ ನಿಗದಿ ಮಾಡಿ, ಕೇವಲ 10 ಕ್ವಿಂಟಲ್‌ಗೆ ಮಿತಿ ಹೇರಿತು. ಹಿಂದಿನ ಸರ್ಕಾರದ ಅವಧಿಯಲ್ಲಿ ಪ್ರೋತ್ಸಾಹ ಧನ 500 ರೂ. ನೀಡಲಾಗಿತ್ತು. ಪ್ರೋತ್ಸಾಹ ಧನ ಕಡಿಮೆಯಾದರೂ ಪರವಾಗಿಲ್ಲ. ಬೇಗ ಖರೀದಿ ಆರಂಭವಾದರೆ ಕೆಲವು ರೈತರಿಗಾದರೂ ಅನುಕೂಲವಾಗುತ್ತದೆ ಎನ್ನುವುದು ರೈತರ ಅಳಲಾಗಿದೆ.

ದರ ಹೇಗಿದೆ?: ಮಾರುಕಟ್ಟೆಯಲ್ಲಿ ತೊಗರಿ ಕ್ವಿಂಟಲ್‌ಗೆ ಕೇವಲ 4500ರಿಂದ 4800 ರೂ.ಗೆ ಮಾರಾಟವಾಗುತ್ತಿದೆ. ಬೆಂಬಲ ಬೆಲೆ ಕ್ವಿಂಟಲ್‌ಗೆ 6100 ರೂ. ಇದೆ. ಹೀಗಾಗಿ ರೈತ ಪ್ರತಿ ಕ್ವಿಂಟಲ್‌ಗೆ 1500 ರೂ. ನಷ್ಟ ಅನುಭವಿಸಿ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಾ ರೈತರು ಮಾರಾಟ ಮಾಡುತ್ತಿದ್ದಾರೆ. ಜಿಲ್ಲೆಯಾದ್ಯಂತ 165 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಕಳೆದೊಂದು ತಿಂಗಳಿನಿಂದ ಕೇವಲ ನೋಂದಣಿ ಮಾಡಿಕೊಳ್ಳುವುದರಲ್ಲೇ ಕಾಲಹರಣ ಮಾಡಲಾಗುತ್ತಿದೆ.

ತೊಗರಿಗೆ ಕಿಮ್ಮತ್ತಿಲ್ಲ!
ಸರ್ಕಾರ ಬೆಂಬಲ ಬೆಲೆಯಲ್ಲಿ ಭತ್ತ 40 ಕ್ವಿಂಟಲ್‌, ರಾಗಿ 50 ಕ್ವಿಂಟಲ್‌ ಖರೀದಿಗೆ ನಿರ್ಧರಿಸಿದ್ದರೆ ತೊಗರಿಯನ್ನು ಕೇವಲ 10 ಕ್ವಿಂಟಲ್‌ ಖರೀದಿಸಲು ನಿರ್ಧರಿಸಿರುವುದು ಶೋಷಣೆಗೆ ಹಿಡಿದ ಮತ್ತೊಂದು  ಕನ್ನಡಿಯಾಗಿದೆ.

„ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.