ತೊಗರಿ ನೋಂದಣಿ-ಖರೀದಿ ಆರಂಭಕ್ಕೆಆಗ್ರಹ
Team Udayavani, Jan 17, 2020, 5:15 PM IST
ಕಲಬುರಗಿ: ತೊಗರಿ ನೋಂದಣಿ, ಖರೀದಿ ಪ್ರಾರಂಭಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿರುವ ಸಂಸದ ಡಾ| ಉಮೇಶ ಜಾಧವ ಕಚೇರಿ ಎದುರು ರೈತ ಸಂಘಗಳ ಮುಖಂಡರು ಗುರುವಾರ ಧರಣಿ ನಡೆಸಿದರು.
ತೊಗರಿ ಕಟಾವು ಆಗುತ್ತಿದ್ದು, ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿ ರೈತರು ನಷ್ಟ ಅನುಭಸುವಂತೆ ಆಗಿದೆ. ಹೀಗಾಗಿ ತಕ್ಷಣವೇ ರೈತರಿಂದ ತೊಗರಿ ನೋಂದಣಿ ಆರಂಭಿಸಿ, ಖರೀದಿಸುವ ಪ್ರಕ್ರಿಯೆ ಶುರು ಮಾಡಬೇಕು. ಈ ವರ್ಷ ರಾಜ್ಯದಲ್ಲಿ 11 ಲಕ್ಷ ಟನ್ ತೊಗರಿ ಉತ್ಪಾದನೆ ನಿರೀಕ್ಷೆ ಇದೆ. ಆದರೆ, ರಾಜ್ಯ ಸರ್ಕಾರವು 10.70 ಲಕ್ಷ ಟನ್ ಉತ್ಪಾದನೆಯೆಂದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಪಿಎಸ್‌ಎಸ್ ಯೋಜನೆಯಡಿ ಉತ್ಪಾದನೆಯಾದ ಶೇ. 25ರಷ್ಟು
ಮಾತ್ರ ಖರೀದಿ ಮಾಡಲು ಆದೇಶ ಹೊರಡಿಸಿದೆ. ಜತೆಗೆ ಈಗಾಗಲೇ ಕೇಂದ್ರ ಸರ್ಕಾರವು 1.85 ಲಕ್ಷ ಟನ್ ಮಾತ್ರ ಖರೀದಿಗೆ ಒಪ್ಪಿಗೆ ನೀಡಿದ್ದು, ರೈತರಿಗೆ ಅನ್ಯಾಯ ಆಗುತ್ತಿದೆ. 5.5 ಲಕ್ಷ ಟನ್ ಖರೀದಿಗೆ ಕೇಂದ್ರವು ಒಪ್ಪಿಗೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತೊಗರಿ ಖರೀದಿಗೆ ಕೇಂದ್ರ ಸರ್ಕಾರದ ಹಣ ಬಿಡುಗಡೆಗೆ ವಿಳಂಬವಾದರೆ, ರಾಜ್ಯ ಸರ್ಕಾರವೇ ಖರೀದಿಗೆ ಹಣ ನೀಡುವ ತೀರ್ಮಾನ ತೆಗೆದುಕೊಳ್ಳಬೇಕು. ಪ್ರತಿ ರೈತರಿಂದ 10 ಕ್ವಿಂಟಲ್ ಖರೀದಿ ನಿಗದಿ ಸಡಿಲಿಸಿ ಕನಿಷ್ಠ 25 ಕ್ವಿಂಟಲ್ ತೊಗರಿ ಖರೀದಿಸಬೇಕು. ದೇಶದ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ವಿದೇಶದಿಂದ ಆಮದು ಮಾಡಿಕೊಳ್ಳುವ ಬೇಳೆ ಕಾಳುಗಳ ಮೇಲೆ ಶೇ.30ರಷ್ಟು ಸುಂಕ ವಿಧಿ ಸಬೇಕೆಂದು ಒತ್ತಾಯಿಸಿದರು.
ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಮೂರು ತಿಂಗಳಿನಿಂದ ವೇತನ ಬಿಡುಗಡೆ ಮಾಡಿಲ್ಲ. ಕೂಡಲೇ ಬಾಕಿ ವೇತನ ಪಾವತಿಸಬೇಕು. ಕಾಳಗಿ ಪಟ್ಟಣ ಪಂಚಾಯಿತಿ ಆಗಿರುವುದರಿಂದ ಆ ಗ್ರಾಮದಲ್ಲಿನ 1,500 ಕುಟುಂಬಗಳು ಉದ್ಯೋಗ ಖಾತ್ರಿಯಲ್ಲಿ
ಕೆಲಸ ಮಾಡುತ್ತಿದ್ದು, ಈಗ ಯೋಜನೆಯ ಲಾಭ ಇಲ್ಲದಂತಾಗಿದೆ.
ಆದ್ದರಿದ ಅಲ್ಲಿನ ಗ್ರಾಮಸ್ಥರು ವಲಸೆ ಹೋಗುವುದನ್ನು ತಡೆಯಲು ಪರ್ಯಾಯ ಕೆಲಸ ಒದಗಿಸಬೇಕು. ಇಲ್ಲವೇ ಉದ್ಯೋಗ ಖಾತ್ರಿ ಯೋಜನೆ ಪುನರ್ ಪ್ರಾರಂಭಿಸಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಅಖೀಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ್ ಮಾಡಿಯಾಳ್, ಮೌಲಾ ಮುಲ್ಲಾ ಅಲ್ತಾಫ್ ಇನಾಂದಾರ್, ಅಶೋಕ್ ಮ್ಯಾಗೇರಿ, ಮಂಜುನಾಥ ಪಾಟೀಲ, ಮಲ್ಲಣ್ಣಗೌಡ ಬನ್ನೂರ, ಶಾಂತಪ್ಪ ಪಾಟೀಲ, ಪಾಂಡುರಂಗ ಮಾನವಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.