ನಾಡಿನ ಪ್ರಗತಿಗೆ ಕರಾವಳಿಗರ ಕೊಡುಗೆ ಅಪಾರ: ಕಟೀಲ್‌


Team Udayavani, Feb 21, 2020, 4:55 PM IST

21-February-23

ಕಲಬುರಗಿ: ಕರಾವಳಿಗರು ನಾಡಿನ ಪ್ರಗತಿಗೆ ವಿಶಿಷ್ಟ ಕೊಡುಗೆ ನೀಡಿ ಜಗದ್ವಿಖ್ಯಾತರಾಗಿದ್ದಾರೆ ಎಂದು ಲೋಕಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಹೇಳಿದರು.

ಕಲಬುರಗಿ ದಕ್ಷಿಣ ಕನ್ನಡ ಸಂಘ, ಹೋಟೆಲ್‌ ಮಾಲೀಕರ ಸಂಘದ ವತಿಯಿಂದ ನಗರದ ಆಮಂತ್ರಣ ಹೋಟೆಲ್‌ನ ಅನ್ನಪೂರ್ಣ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಕರಾವಳಿಯ ದೈವ-ದೇಗುಲಗಳ ಅಭಿವೃದ್ಧಿ ಸಹಿತ ಧಾರ್ಮಿಕ ಕ್ಷೇತ್ರ, ಶಿಕ್ಷಣಕ್ಷೇತ್ರ, ಕೈಗಾರಿಕಾ ಕ್ಷೇತ್ರಗಳಿಗೆ ಸಹಾಯಹಸ್ತ ಚಾಚೂವಲ್ಲದೇ, ಪರವೂರಿನಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡುತ್ತಿದ್ದಾರೆ ಎಂದರು.

ಕೇವಲ ಕರಾವಳಿಯಷ್ಟೇ ಅಲ್ಲ, ಅವರ ಕರ್ಮಭೂಮಿಯಲ್ಲಿ ಸಾಮಾಜಿಕ ಸೇವೆಗೆ ಬದ್ಧತೆ ತೋರಿ ಪ್ರಗತಿಗೆ ಕೈಜೋಡಿಸುತ್ತಿದ್ದಾರೆ. 55 ವರ್ಷಗಳಿಂದ ಕಲಬುರಗಿಯ ದಕ್ಷಿಣ ಕನ್ನಡ ಸಂಘದ ಸೇವೆ ಈ ಭಾಗದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಜಗತ್ತಿನಲ್ಲಿ ಎಲ್ಲೆ ಹೋದರೂ ಕರಾವಳಿಗರು ಪ್ರೀತಿ-ವಿಶ್ವಾಸದಿಂದ ಬಾಳ್ವೆ ಮಾಡುತ್ತಿದ್ದಾರೆ. ಕಲಬುರಗಿಯಲ್ಲೂ ಜನಪ್ರತಿನಿಧಿಗಳು, ಅಧಿಕಾರಿಗಳು ಕರಾವಳಿಗರ  ಮಸ್ಯೆಗೆ ಸ್ಪಂದಿಸಿ, ಸಹಕರಿಸಬೇಕು ಎಂದು ಕರೆ ನೀಡಿದರು.

ಕರಾವಳಿಗರ ಈ ಸನ್ಮಾನ ನನ್ನ ತವರುಮನೆಗೆ ಬಂದ ಅನುಭವ ಮತ್ತು ಖುಷಿ ನೀಡಿದೆ. ಆತಿಥ್ಯಕ್ಕೆ ಧನ್ಯ ವಾದ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘವು ಇನ್ನಷ್ಟು ಸಮಾಜ ಮುಖೀ ಕಾರ್ಯ ಮುಂದುವರಿಸಲಿ. ಅದಕ್ಕೆ ನನ್ನ ಬೆಂಬಲ ಖಚಿತ ಎಂದರು.

ರಾಜ್ಯ ಬಿಜೆಪಿ ಅಧ್ಯಕ್ಷರಾದ ಮೇಲೆ ಸಂಘಕ್ಕೆ ಮೊದಲ ಬಾರಿಗೆ ಆಗಮಿಸಿದ ನಳಿನ್‌ ಕುಮಾರ ಕಟೀಲ್‌ ಅವರಿಗೆ ಶಾಲು, ಹಾರ, ಯಕ್ಷಗಾನದ ಕಿರೀಟ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಬೀದರ ಸಂಸದ ಭಗವಂತ ಖೂಬಾ, ವಿಧಾನಪರಿಷತ್‌ ಸದಸ್ಯರಾದ ಬಿ.ಜಿ. ಪಾಟೀಲ, ವಿಧಾನಪರಿಷತ್‌ ಮಾಜಿ ಸದಸ್ಯ ಶಶೀಲ್‌ ಜಿ. ನಮೋಶಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರ ಘಟಕ ಅಧ್ಯಕ್ಷ ಸಿದ್ದಾಜಿ ಪಾಟೀಲ ಹಾಜರಿದ್ದರು.

ದ.ಕ. ಸಂಘದ ಸದಸ್ಯರು, ಹೋಟೆಲ್‌ ಮಾಲೀಕರ ಸಂಘದ ಸದಸ್ಯರು, ವಾಣಿಜ್ಯೋದ್ಯಮಿಗಳು ಹಾಜರಿದ್ದರು. ಸಂಘದ ಗೌರವಾಧ್ಯಕ್ಷ ಪ್ರಶಾಂತ ಶೆಟ್ಟಿ ಇನ್ನಾ ಅಧ್ಯಕ್ಷತೆ ವಹಿಸಿದ್ದರು. ಹೋಟೆಲ್‌ ಮಾಲೀಕರ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮೆಂಡನ್‌ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಅರುಣಾಚಲಭಟ್‌ ಮನವಿ ವಾಚಿಸಿದರು. ಡಾ| ಸದನಂದ ಪೆರ್ಲ ನಿರೂಪಿಸಿದರು.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.