22ರಿಂದ ಧಾರವಾಡದಲ್ಲಿ ಕರ್ನಾಟಕ ಕುಸ್ತಿಹಬ್ಬ
ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ವಿಶ್ವದ ಹೆಸರಾಂತ ಕುಸ್ತಿ ದಿಗ್ಗಜರು
Team Udayavani, Feb 19, 2020, 1:29 PM IST
ಕಲಬುರಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ರಾಜ್ಯ ಭಾರತೀಯ ಶೈಲಿಯ ಕುಸ್ತಿ ಸಂಘದ ಸಹಯೋಗದಲ್ಲಿ ಫೆ. 22ರಿಂದ 25 ರ ವರೆಗೆ ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಹಮ್ಮಿಕೊಂಡಿದೆ.
ದೇಶದ ಹೆಸರಾಂತ ಸುಮಾರು 1200ಕ್ಕೂ ಹೆಚ್ಚು ಕುಸ್ತಿಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಮೂರು ಅಖಾಡಗಳಲ್ಲಿ 30 ಪ್ರತ್ಯೇಕ ತೂಕಗಳ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. 80 ಲಕ್ಷ ರೂ. ಮೌಲ್ಯದ ನಗದು ಬಹುಮಾನ, ಪಾರಿತೋಷಕಗಳನ್ನು ನೀಡಲಾಗುವುದು. ಅಜರ್‌ಬೈಜಾನ್, ಜಾರ್ಜಿಯಾ,ಇರಾನ್ ದೇಶಗಳ ಕುಸ್ತಿಪಟುಗಳ ಜೊತೆಗೆ ಭಾರತದ ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಒಲಂಪಿಕ್ ಪಂದ್ಯ ವಿಜೇತ್, ಯೋಗೇಶ್ವರ ದತ್, ಪದ್ಮಶ್ರೀ, ಅರ್ಜುನ್ ಪ್ರಶಸ್ತಿ ವಿಜೇತರು ಹಾಗೂ ನಿವೃತ್ತ ಐಜಿಪಿ ಕರ್ತಾರ ಸಿಂಗ್, ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಒಲಂಪಿಕ್ ಪದಕ ವಿಜೇತ ಸಾಕ್ಷಿ ಮಲಿಕ್, ಅಂತಾರಾಷ್ಟ್ರೀಯ ಕುಸ್ತಿಪಟು ಮಹ್ಮದ್ ಮುರಾಡಿ, ಭಾರತ ಕೇಸರಿ ಉಮೇಶ ಚೌದರಿ, ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಾದ ಅಂಶು ಮಲ್ಲಿಕ್, ಜೈಲಾ ನಾಗೀಜಡೆ, ನೈನಾ, ಸಭೀರಾ ಅಲಿಯೆವಾ ಅಲಹವರ್ಡಿ ಮೊದಲಾದ ಹೆಸರಾಂತ ಕುಸ್ತಿ ಪಟುಗಳು ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ.
ವಯೋಮಿತಿ: ಕರ್ನಾಟಕ ಕುಸ್ತಿ ಹಬ್ಬದಲ್ಲಿ 14ರಿಂದ 17 ವರ್ಷದೊಳಗಿನ ಹಾಗೂ 18 ವರ್ಷ ಮೇಲ್ಪಟ್ಟವರ ವಿಭಾಗಗಳಲ್ಲಿ ವಿವಿಧ ತೂಕದ ವಿಭಾಗಗಳಲ್ಲಿ ಕುಸ್ತಿ ಆಯೋಜಿಸಲಾಗಿದೆ. ಕರ್ನಾಟಕ ಕುಸ್ತಿ ಹಬ್ಬದ ಕುಸ್ತಿಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಆಸಕ್ತ ಕುಸ್ತಿಪಟುಗಳು ತಮ್ಮ ಜಿಲ್ಲೆಗಳಿಂದ ನೇರವಾಗಿ ಆಗಮಿಸಿ, ಭಾಗವಹಿಸಬಹುದು. ಕರ್ನಾಟಕದ ಎಲ್ಲ ಜಿಲ್ಲೆಗಳ ಕುಸ್ತಿಪಟುಗಳು ಈ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಬಹುದು.
ಕರ್ನಾಟಕ ಕುಸ್ತಿ ಹಬ್ಬವನ್ನು ಭಾರತೀಯ ಶೈಲಿಯ ಕುಸ್ತಿ ಸಂಘದ ನಿಯಮದ ಪ್ರಕಾರ ಅಂಕಗಳ ಆಧಾರದಲ್ಲಿ ಮಣ್ಣಿನ ಮೇಲೆ ಕುಸ್ತಿ ನಡೆಸಲಾಗುವುದು. 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ 2006, 2007 ಮತ್ತು 2008ನೇ ಇಸ್ವಿಯಲ್ಲಿ ಜನಿಸಿದವರು ಮಾತ್ರ ಭಾಗವಹಿಸಬಹುದು. 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ 2003, 2004 ಮತ್ತು 2005ನೇ ಇಸ್ವಿಯಲ್ಲಿ ಜನಿಸಿದವರು ಹಾಗೂ ಹಿರಿಯರ ವಿಭಾಗದಲ್ಲಿ 18 ವರ್ಷ ಮೇಲ್ಪಟ್ಟ ಅಂದರೆ 2002ರ ಇಸ್ವಿ ಹಾಗೂ ಅದಕ್ಕೂ ಮೊದಲು ಜನಿಸಿದ ಪುರುಷ ಮತ್ತು ಮಹಿಳೆಯರು ಮಾತ್ರ ಭಾಗವಹಿಸಬಹುದು.
ಪ್ರಶಸ್ತಿಗಳು: 14 ವರ್ಷ ದೊಳಗಿನ ಬಾಲಕರ 52 ಕೆ.ಜಿ ಮತ್ತು ಬಾಲಕಿಯರ 46 ಕೆ.ಜಿ
ವಿಭಾಗದಲ್ಲಿ ಅಂತಿಮವಾಗಿ ವಿಜೇತರಾಗುವ ಕುಸ್ತಿಪಟುಗಳಿಗೆ “ಕರ್ನಾಟಕ ಬಾಲ ಕೇಸರಿ’ ಪ್ರಶಸ್ತಿ ನೀಡಲಾಗುವುದು. 17 ವರ್ಷದೊಳಗಿನ ಬಾಲಕರ 60 ಕೆ.ಜಿ. ಮತ್ತು ಬಾಲಕಿಯರ 53 ಕೆ.ಜಿ ವಿಭಾಗದಲ್ಲಿ ಅಂತಿಮವಾಗಿ ವಿಜೇತರಾಗುವ ಕುಸ್ತಿಪಟುಗಳಿಗೆ “ಕರ್ನಾಟಕ ಕಿಶೋರ
ಮತ್ತು ಕಿಶೋರಿ’ ಪ್ರಶಸ್ತಿ ನೀಡಲಾಗುವುದು. ಹಿರಿಯರ ವಿಭಾಗದಲ್ಲಿ “ಕರ್ನಾಟಕ ಕೇಸರಿ ಪ್ರಶಸ್ತಿಗಾಗಿ 86 ಕೆ.ಜಿಯಿಂದ 125 ಕೆ.ಜಿ ವರೆಗಿನ ಪುರುಷ ಕುಸ್ತಿಪಟುಗಳು ಭಾಗವಹಿಸಬಹುದು. ಮಹಿಳಾ ಕರ್ನಾಟಕ ಕೇಸರಿ ಪ್ರಶಸ್ತಿಗಾಗಿ 59 ಕೆ.ಜಿಯಿಂದ 76 ಕೆ.ಜಿ ತೂಕದ ವರೆಗಿನ ಮಹಿಳೆಯರು ಭಾಗವಹಿಸಬಹುದು.
ಕರ್ನಾಟಕ ಕೇಸರಿ ವಿಭಾಗದಲ್ಲಿ ಭಾಗವಹಿಸುವ ಪುರುಷ ಮತ್ತು ಮಹಿಳಾ ಕುಸ್ತಿಪಟುಗಳು ಇತರೆ ತೂಕದ ವಿಭಾಗಗಳಲ್ಲಿ ಭಾಗವಹಿಸುವಂತಿಲ್ಲ. ಭಾಗವಹಿಸುವ ಕುಸ್ತಿಪಟುಗಳಿಗೆ ಪ್ರಯಾಣ ಭತ್ಯೆ ಹಾಗೂ ವಸತಿ ಊಟೋಪಹಾರ ವ್ಯವಸ್ಥೆ ಮಾಡಲಾಗಿದೆ. ಕುಸ್ತಿ ಪಂದ್ಯದ ಸಮಯದಲ್ಲಿ ಗೈರು ಹಾಜರಾಗುವ ಕುಸ್ತಿಪಟುಗಳಿಗೆ ಕರ್ನಾಟಕ ಕುಸ್ತಿ ಹಬ್ಬದ ಯಾವುದೇ ಸವಲತ್ತುಗಳನ್ನು ನೀಡಲಾಗುವುದಿಲ್ಲ. ಭಾಗವಹಿಸುವ ಕುಸ್ತಿಪಟುಗಳ ಉದ್ದೀಪನಾ ಮದ್ದು ಪರೀಕ್ಷೆಯನ್ನು ನಾಡಾ ಪರೀಕ್ಷಾ ತಂಡದಿಂದ ನಡೆಸಲಾಗುವುದು. ಪರೀಕ್ಷೆಯಲ್ಲಿ ಉದ್ದೀಪನಾ ಮದ್ದು ಸೇವನೆ ರುಜುವಾತಾದಲ್ಲಿ ನಾಲ್ಕು ವರ್ಷಗಳ ಅವಧಿಗೆ ಸ್ಪರ್ಧೆ, ಆಯ್ಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗುವುದು. ಕುಸ್ತಿ ಪ್ರಾರಂಭದ ಪ್ರಥಮ ಸುತ್ತಿನಿಂದಲೇ ನಾಡಾದವರು ಉದ್ದಿಪನ ಮದ್ದು ಪರೀಕ್ಷೆ ನಡೆಸುವರು. ಆರು ಪ್ರಶಸ್ತಿಗಳ (ಟೈಟಲನ್) ವಿಜೇತ ಪೈಲ್ವಾನರ ನಗದು ಬಹುಮಾನ ಮತ್ತು ಬೆಳ್ಳಿಗದೆಯನ್ನು ನಾಡಾದಿಂದ ಉದ್ದೀಪನಾ ಮದ್ದು ಪರೀಕ್ಷೆ ವರದಿ ಬಂದಮೇಲೆ ಕುಸ್ತಿಪಟುಗಳ ಖಾತೆಗೆ ಜಮಾ ಮಾಡಲಾಗುವುದು.
ಸರ್ಕಾರಿ ಸೇವೆಯಲ್ಲಿರುವ ಕರ್ನಾಟಕ ರಾಜ್ಯದ ಕುಸ್ತಿಪಟುಗಳು ಒಂದು ತೂಕದ ವಿಭಾಗದಲ್ಲಿ ಒಬ್ಬರು ಭಾಗವಹಿಸಬಹುದು. ಕುಸ್ತಿಪಟುಗಳು ಸೇವೆ ಸಲ್ಲಿಸುತ್ತಿರುವ ಇಲಾಖೆಯ ಕ್ರೀಡಾ ಧಿಕಾರಿಯವರಿಂದ ಅಥವಾ ಇಲಾಖೆ ಮುಖ್ಯಸ್ಥರಿಂದ ಸ್ಪರ್ಧೆಯಲ್ಲಿ ಭಾಗವಹಿಸಲು ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.
ನೋಂದಣಿ: ಫೆ. 22ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಕುಸ್ತಿಪಟುಗಳ ದೇಹದ ತೂಕ ತೆಗೆದುಕೊಳ್ಳಲಾಗುವುದು. ವಯೋಮಿತಿಯಲ್ಲಿ ಭಾಗವಹಿಸುವ ಕುಸ್ತಿಪಟುಗಳು ಜನನ ನೋಂದಣಿ ಅಧಿಕಾರಿಗಳಿಂದ ಜನನ ಪ್ರಮಾಣ ಪತ್ರ, ಆಧಾರಕಾರ್ಡ್, ನಾಲ್ಕು ಪಾಸ್‌ಪೋರ್ಟ್ ಅಳತೆ ಭಾವಚಿತ್ರಗಳನ್ನು ಹಾಗೂ ಬ್ಯಾಂಕ್ ಖಾತೆಯ ಪ್ರತಿಯನ್ನು ತರಬೇಕು.
ಸಾರಿಗೆ ವ್ಯವಸ್ಥೆ: ಫೆ. 22 ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೆ ಧಾರವಾಡದ ಕೇಂದ್ರೀಯ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಕರ್ನಾಟಕ ಕಾಲೇಜು ಮೈದಾನದ ವರೆಗೆ ಕುಸ್ತಿಪಟುಗಳ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ 94485 90935, 9964245769, 7892042714, 9481966245 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.