ಟ್ರಾವೆಲ್‌ ಹಿಸ್ಟರಿ ಪತ್ತೆ ಹಚ್ಚದಿದ್ದರೆ ಸಂಕಷ್ಟ

ಮನೆ-ಮನೆ ಸಮೀಕ್ಷೆ ವಿಳಂಬಕ್ಕೆ ಗರಂ ಹೇಳಿದ ಕೆಲಸ ಮಾಡದಿದ್ದರೇ ಹೇಗೆ?

Team Udayavani, May 3, 2020, 3:32 PM IST

3-may-14

ಕಲಬುರಗಿ: ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ಸೋಂಕಿತರಿಗೆ ಆಹಾರ ತಯಾರಿಸುತ್ತಿರುವ ಕುರುಣೇಶ್ವರ ನಗರದ ಬಿಸಿಎಂ ಹಾಸ್ಟೆಲ್‌ಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಪರಿಶೀಲಿಸಿದರು.

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೇಳಿದ ಕೆಲಸ ಮಾಡದಿದ್ದರೆ ಹೇಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಕೋವಿಡ್  ಸೋಂಕು ತಡೆಗಟ್ಟಲು ಕೈಗೊಂಡಿರುವ ಕ್ರಮಗಳು ಕುರಿತಂತೆ ಸಭೆ ನಡೆಸಿ ಅವರು ಮಾತನಾಡಿದರು. ಕೋವಿಡ್ ಸೋಂಕಿತ ವ್ಯಕ್ತಿಗಳ ಟ್ರಾವೆಲ್‌ ಹಿಸ್ಟರಿ ಪತ್ತೆ ಹಚ್ಚುವುದು ಅತ್ಯಗತ್ಯವಾಗಿದೆ. ಸೋಂಕಿತರ ಟ್ರಾವೆಲ್‌ ಹಿಸ್ಟರಿ ಪತ್ತೆ ಹಚ್ಚದಿದ್ದಲ್ಲಿ ಸೋಂಕು ನಿಯಂತ್ರಣ ಅಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾದ್ಯಂತ ಎಲ್ಲ ಮನೆಗಳ ಸಮೀಕ್ಷೆ ನಡೆಸುವಂತೆ ಈ ಹಿಂದಿನ ಮೂರು ಸಭೆಗಳಲ್ಲಿಯೂ ಸೂಚನೆ ನೀಡಲಾಗಿತ್ತು ಎಂದರು.

ಕಲಬುರಗಿ ನಗರ ಪ್ರದೇಶ ಮಾತ್ರವಲ್ಲದೇ, ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲೂ ಮನೆ-ಮನೆ ಸಮೀಕ್ಷೆ ಮಾಡಬೇಕು. ಈಗಾಗಲೇ ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ಮಾಡಬೇಕು. ಸಂಶಯಸ್ಪಾದ ವ್ಯಕ್ತಿಗಳು ಕಂಡು ಬಂದರೆ ಅಂತಹವರನ್ನು ಕ್ವಾರಂಟೈನ್‌ ಸೆಂಟರ್‌ಗೆ ಕಳುಹಿಸಬೇಕೆಂದು ತಾಕೀತು ಮಾಡಿದರು. ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್‌ ಮೋಹನ್‌, ಮನೆ-ಮನೆ ಸಾರ್ವತ್ರಿಕ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಕಲಬುರಗಿ ನಗರದಲ್ಲಿ 3000 ಸಿಬ್ಬಂದಿಗಳ 680 ತಂಡ ರಚಿಸಲಾಗಿದೆ ಎಂದು ತಿಳಿಸಿದರು.

ಏ.25ರ ನಂತರ ಜಿಲ್ಲೆಗೆ ಬಂದವರೆಷ್ಟು?: ರಾಜ್ಯ ಸರ್ಕಾರ ಲಾಕ್‌ಡೌನ್‌ನಲ್ಲಿ ಸಿಲುಕಿರುವ ಕಾರ್ಮಿಕರನ್ನು ಆಯಾ ಜಿಲ್ಲೆಗಳಿಗೆ ಸ್ಥಳಾಂತರಿಸಲು ಏ.25ರಿಂದ ಅವಕಾಶ ನೀಡಿದೆ. ಅಲ್ಲಿಂದ ಇಲ್ಲಿ ವರೆಗೆ ಬೇರೆ-ಬೇರೆ ಜಿಲ್ಲೆಗಳಿಂದ ಜಿಲ್ಲೆಗೆ ಎಷ್ಟು ಜನರು ಮರಳಿದ್ದಾರೆ ಎಂದು ಡಿಸಿಎಂ ಕಾರಜೋಳ ಪ್ರಶ್ನಿಸಿದರು. ಅಲ್ಲದೇ, ಜಿಲ್ಲಾದ್ಯಂತ ಎಷ್ಟು ಚೆಕ್‌ಪೋಸ್ಟ್‌ ಕಾರ್ಯನಿರ್ವಹಿಸುತ್ತಿವೆ ಎಂದು ಕೇಳಿದರು. ಈ ವೇಳೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಲು ತಡವರಿಸಿದರು. ನಂತರ 18 ಅಂತಾರಾಜ್ಯ ಗಡಿಯಲ್ಲಿ ಒಟ್ಟು 40 ಚೆಕ್‌ ಪೋಸ್ಟ್‌ ಸ್ಥಾಪಿಸಲಾಗಿದೆ ಎಂದಷ್ಟೇ ಅಧಿಕಾರಿಗಳು ಹೇಳಿದರು. ಆದರೆ, ಜಿಲ್ಲೆಗೆ ಮರಳಿದ ಕಾರ್ಮಿಕರ ಸಂಖ್ಯೆಯನ್ನು ಕೊನೆಯವರೆಗೂ ನೀಡಲೇ ಇಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವಂತೆ, ಕ್ಷೌರಿಕರಿಗೆ ಮತ್ತು
ಆಟೋಚಾಲಕರಿಗೆ ಆಹಾರದ ಕಿಟ್‌ ನೀಡುವಂತೆ ಕಳೆದ ಸಭೆಗಳಲ್ಲಿ ಸೂಚನೆ ನೀಡಿದ್ದೆ. ಆದರೆ ಅದನ್ನು ಇದುವರೆಗೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕ್ಷೌರಿಕರ ಕಿಟ್‌ ವಿತರಣೆಗೆ ವಿಳಂಬ: ಕ್ಷೌರಿಕರಿಗೆ ಆಹಾರ ದಿನಸಿ ಕಿಟ್‌ ವಿತರಣೆ ವಿಳಂಬಕ್ಕೂ ಡಿಸಿಎಂ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು. ಕ್ಷೌರಿಕರ ಅಂಡಿಗಳು ಬಂದ್‌ ಆಗಿರುವುದರಿಂದ ಕ್ಷೌರಿಕರು ಸಂಕಷ್ಟದಲ್ಲಿದ್ದು, ಎಲ್ಲ ಕುಟುಂಬಗಳಿಗೆ 1200ರೂ. ಮೊತ್ತದ ದಿನಸಿ ಕಿಟ್‌ ವಿತರಿಸುವಂತೆ ಈ ಹಿಂದಿನ ಸಭೆಯಲ್ಲಿ ನೀಡಲಾಗಿತ್ತು. ಆದರೆ, 10 ದಿನಗಳಾದರೂ ವಿತರಿಸಿಲ್ಲ ಎಂದು ಸಿಡಿಮಿಡಿಗೊಂಡರು.

ಈ ಸಮಯದಲ್ಲಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ನಗರದಲ್ಲಿರುವ ಗೌಳಿಗರ ಕುಟುಂಬಗಳಿಗೂ ಕಿಟ್‌ ವಿತರಿಸುವಂತೆಯೂ ಸೂಚಿಸಲಾಗಿತ್ತು. ಅವರಿಗೂ ಕಿಟ್‌ ತಲುಪಿಲ್ಲ ಎಂದು ಡಿಸಿಎಂ ಗಮನಕ್ಕೆ ತಂದರು. ಮೂರು ದಿನಗಳಲ್ಲಿ ಎಲ್ಲರಿಗೂ ಕಿಟ್‌ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಶರತ್‌ ಬಿ. ಅವರಿಗೆ ಕಾರಜೋಳ ತಾಕೀತು ಮಾಡಿದರು. ಸಭೆಯಲ್ಲಿ ಸಂಸದರಾದ ಡಾ| ಉಮೇಶ ಜಾಧವ, ಭಗವಂತ ಖೂಬಾ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಎಂ.ವೈ. ಪಾಟೀಲ, ಖನೀಜ್‌ ಫಾತೀಮಾ, ಅವಿನಾಶ ಜಾಧವ, ಬಸವರಾಜ ಮತ್ತಿಮಡು, ಸುಭಾಷ ಗುತ್ತೇದಾರ, ವಿಧಾನ ಪರಿಷತ್‌ ಸದಸ್ಯರಾದ ಬಿ.ಜಿ.ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಜಿ.ಪಂ ಸಿಇಒ ಡಾ| ಪಿ. ರಾಜಾ, ಎಸ್‌ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಕಲಬುರಗಿ ನಗರ ಪೊಲೀಸ್‌ ಆಯುಕ್ತ ಎನ್‌. ಸತೀಶಕುಮಾರ ಮತ್ತಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.