ತಂಬಾಕು ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ
ಸಂತೆ-ಜಾತ್ರೆಗಳಲ್ಲಿ ದುಷ್ಪರಿಣಾಮ ತಿಳಿಸಿ | ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಸಿದರೆ ದಂಡ ಹಾಕಿ
Team Udayavani, Jan 8, 2020, 4:52 PM IST
ಕಲಬುರಗಿ: ತಂಬಾಕು ನಿಯಂತ್ರಣಕ್ಕಾಗಿ ಸಂತೆ, ಜಾತ್ರೆ, ಸಾರ್ವಜನಿಕ ಸಭೆ- ಸಮಾರಂಭಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ| ಶಂಕರಪ್ಪ ವಣಿಕ್ಯಾಳ ಹೇಳಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ಸೇವನೆ ಮಾಡುತ್ತಿರುವ ಸರ್ಕಾರಿ ಅಧಿಕಾರಿಗಳು, ನೌಕರರು ಮೊದಲು ಇದನ್ನು ತ್ಯಜಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಸೇವನೆ ಕಂಡುಬಂದಲ್ಲಿ ಮುಲಾಜಿಲ್ಲದೇ ದಂಡ ಹಾಕಿ. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರಮುಖ ವೃತ್ತ ಮತ್ತು ಜನಸಂದಣಿ ಪ್ರದೇಶದಲ್ಲಿ ಭಿತ್ತಿಚಿತ್ರ ಅಂಟಿಸಬೇಕು, ಕರಪತ್ರ ವಿತರಿಸಬೇಕು ಎಂದರು. ತಂಬಾಕು ಸೇವನೆ ನಿಯಂತ್ರಣದಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಇದನ್ನರಿತು ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಬೇಕು ಎಂದರು.
ಶಾಲೆ-ಕಾಲೇಜುಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯ ತಂಬಾಕು ನಿಯಂತ್ರಣ ಘಟಕದ ಕಲಬುರಗಿ ವಿಭಾಗೀಯ ಸಂಯೋಜಕ ಮಹಾಂತೇಶ ಮಾತನಾಡಿ, 2019ರ ಏಪ್ರಿಲ್ ನಿಂದ ಡಿಸೆಂಬರ್ ತಿಂಗಳ ವರೆಗೆ ತನಿಖಾ ತಂಡವು ತಂಬಾಕು ಸೇವನೆ ಮಾಡುವವರ ಮೇಲೆ ನಿರಂತರ ದಾಳಿ ಮಾಡಿ 69180 ರೂ. ದಂಡ ಸಂಗ್ರಹಿಸಿದೆ. ತಂಬಾಕು ವ್ಯಸನಕ್ಕೆ ಒಳಗಾದ ಅಭ್ಯರ್ಥಿಗಳಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರ, ಸಮಾಲೋಚನಾ ಹಾಗೂ ತರಬೇತಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಇಲ್ಲಿಯವರೆಗೆ ಸುಮಾರು 897 ಜನ ತಂಬಾಕು ವ್ಯಸನಿಗಳೊಂದಿಗೆ
ಸಮಾಲೋಚನೆ ನಡೆಸಲಾಗಿದೆ. 360 ಜನ ವ್ಯಸನಿಗಳೊಂದಿಗೆ ಅನುಸರಣೆ ಹಾಗೂ ಮಾನಸಿಕ ಬೆಂಬಲ ಕೋಶದಿಂದ ನಿರಂತರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ತಂಬಾಕು ನಿಯಂತ್ರಣದ ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ಶಿವಶರಣಪ್ಪ, ಪ್ರಭಾರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಲೇಕರ್, ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರ್ತಿ ಸುಜಾತಾ ಪಾಟೀಲ ಹಾಗೂ ಪೌರ ಸಂಸ್ಥೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.