ಮತದಾರರ ಪಟ್ಟಿ ಪರಿಶೀಲನೆಯಾಗಲಿ
ಬಿಎಲ್‌ಎಗಳೊಂದಿಗೆ ನೇರ ಸಂಪರ್ಕಿಸಿತಾಂತ್ರಿಕ ತೊಂದರೆ ಗಮನಿಸಲು ಸೂಚನೆ
Team Udayavani, Feb 7, 2020, 4:15 PM IST
ಕಲಬುರಗಿ: ತಹಶೀಲ್ದಾರರು ಹಾಗೂ ಚುನಾವಣಾ ಕಾರ್ಯಗಳಿಗೆ ನೇಮಿಸಿದ ಅಧಿಕಾರಿಗಳು ಪ್ರತಿ ಗ್ರಾಮ ಮತ್ತು ಬೂತ್‌ಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಬೇಕು. ಪ್ರತಿ ಬಿ.ಎಲ್.ಒಗಳಿಂದ ಹೊಸ ಮತದಾರರ ಹಾಗೂ ತಿದ್ದುಪಡಿ ಅರ್ಜಿಗಳ ಕುರಿತು ಮಾಹಿತಿ ಸಂಗ್ರಹಿಸಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಹಾಗೂ ಮತದಾರರ ಪಟ್ಟಿ ವೀಕ್ಷಕ ಸುಬೋಧ ಯಾದವ ತಿಳಿಸಿದರು.
ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ-2019 ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ಮತದಾರರ ಪಟ್ಟಿಗೆ ಸಂಬಂಧಿ ಸಿದ ತಾಲೂಕು ಬಿ.ಎಲ್. ಎಗಳೊಂದಿಗೆ ನೇರವಾಗಿ ಸಂಪರ್ಕವನ್ನು ಹೊಂದಬೇಕು. ನಿಗದಿತ ಸಮಯದೊಳಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಆಗ ಮಾತ್ರ ಮತದಾರರ ಪಟ್ಟಿ ಸ್ವಚ್ಛ ಮತ್ತು ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯ ಎಂದರು.
ಮತದಾರರ ಪಟ್ಟಿ ತಯಾರಿಕೆಗೆ ಚುನಾವಣೆ ಅಧಿಕಾರಿಗಳಿಗೆ ಹಾಗೂ ಬಿ.ಎಲ್.ಎಗಳಿಗೆ ಸೂಕ್ತ ತರಬೇತಿ ನೀಡಬೇಕು. ಜಿಲ್ಲೆಯಲ್ಲಿ 21.77 ಲಕ್ಷ ಮತದಾರರಿದ್ದು, ಶೇ.97ರಷ್ಟು ಮತದಾರರ ನೋಂದಣಿ ಕಾರ್ಯ ಮುಗಿದಿದೆ ಎಂದರು.
ಡಿಸಿ ಶರತ್ ಬಿ. ಮಾತನಾಡಿ, ಜೇವರ್ಗಿ ತಾಲೂಕಿನಲ್ಲಿ ಮೂರು, ಚಿತ್ತಾಪುರ ತಾಲೂಕಿನಲ್ಲಿ 20, ಸೇಡಂ ತಾಲೂಕಿನಲ್ಲಿ ಎರಡು, ಚಿಂಚೋಳಿ ತಾಲೂಕಿನಲ್ಲಿ 40, ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಆರು, ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ 612 ಮತದಾರರ ಪಟ್ಟಿ ಕುರಿತು ದೂರುಗಳು ಬಂದಿವೆ. ಕಲಬುರಗಿ ಉತ್ತರ ಕ್ಷೇತ್ರದಲ್ಲಿ 417 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ವಿವರಿಸಿದರು.
ಮೊಬೈಲ್ ಆಪ್ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೋಂದಣಿ ಹಾಗೂ ಮತದಾರರ ಪಟ್ಟಿ ಸ್ವಯಂ ದೃಢೀಕರಣ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆಯಿಂದ ಕೆಲವೊಮ್ಮೆ ಎರಡೆರಡು ಬಾರಿ ಅರ್ಜಿಗಳು ಸಲ್ಲಿಕೆಯಾಗಿದೆ. ಇವುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಮತದಾರರ ಪಟ್ಟಿ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು.
ಎಡಿ ಸಿ ಡಾ. ಶಂಕರ ವಣಿಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ, ತಾಲೂಕುಗಳ ತಹಶೀಲ್ದಾರರು, ಕ್ಷೇತ್ರವಾರು ಮತದಾರರ ನೊಂದಣಾಧಿಕಾರಿ, ಸಹಾಯಕ ಮತದಾರರ ನೊಂದಣಾಧಿಕಾರಿ, ಬಿ.ಎಲ್.ಎ.ಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.