ಮನೆ ಬಾಗಿಲಿಗೆ ತಾಜಾ ಹಣ್ಣು ಪೂರೈಕೆ
Team Udayavani, Apr 29, 2020, 5:27 PM IST
ಕಲಬುರಗಿ: ಕೊರೊನಾ ಹಿನ್ನೆಲೆಯಲ್ಲಿ ಜನಸಂದಣಿ ನಿಯಂತ್ರಿಸುವುದರ ಜೊತೆಗೆ ಬೇಸಿಗೆ ಸಮಯ ಇದಾಗಿರುವುದರಿಂದ ರೈತರಿಂದ ನೇರವಾಗಿ ಖರೀದಿಸಿದ ತಾಜಾ ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿದೆ.
ಕಮಲಾಪುರ ಗ್ರಾಮೀಣ ತೋಟಗಾರಿಕೆ ರೈತ ಉತ್ಪಾದಕರ ಸಂಘ, ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದೊಂದಿಗೆ ತೋಟಗಾರಿಕೆ ಇಲಾಖೆಯು ನಗರದ ನಿವಾಸಿಗಳಿಗೆ ಅನುಕೂಲವಾಗುವಂತೆ ಜಿಲ್ಲೆಯ ರೈತರಿಂದ ನೇರವಾಗಿ ಹಣ್ಣುಗಳನ್ನು ಖರೀದಿಸಿ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ ಸಪ್ಪಂಡಿ ಹಾಗೂ ಹಿರಿಯ ಸಹಾಯಕ ನಿರ್ದೇಶಕ ಶಂಕರ ಪಟವಾದಿ ತಿಳಿಸಿದ್ದಾರೆ.
ಗ್ರಾಹಕರ ಮನೆ ಬಾಗಿಲಿಗೆ ಹಣ್ಣು ತಲುಪಿಸಲು ಅಜೀಂ ಪ್ರೇಮಜೀ ಸಂಸ್ಥೆಯು ವಾಹನ ಸೌಲಭ್ಯ ಒದಗಿಸಿದೆ. ನಗರದ ಸಾರ್ವಜನಿಕರು ಮತ್ತು ಗ್ರಾಹಕರು ಪರಮೇಶ್ವರ ಎಫ್‌ಪಿಒ, ಸಿಇಒ ಮೊಬೈಲ್ ಸಂಖ್ಯೆ-9945682437ಕ್ಕೆ ಸಂಪರ್ಕಿಸಿ ಬೇಡಿಕೆ ಸಲ್ಲಿಸಿ ಪಡೆಯಬಹುದಾಗಿದೆ. ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ ಹಣ್ಣುಗಳ ಕನಿಷ್ಠ ಬೇಡಿಕೆಯು ಐದು ಕೆ.ಜಿ.ಗೆ ಮೇಲ್ಟಟ್ಟು ಸಲ್ಲಿಸಿದರೆ
ಮಾತ್ರ ಗ್ರಾಹಕರ ಮನೆ ಬಾಗಿಲಿಗೆ ಸೇವೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.