ತುರ್ತು ಮಾತ್ರೆ ತಲುಪಿಸಿದ ವಾರಿಯರ್ಸ್‌


Team Udayavani, Apr 16, 2020, 4:20 PM IST

16-April-20

ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೋವಿಡ್‌-19 ಹಿನ್ನೆಲೆಯಲ್ಲಿ ಕಾರ್ಯನಿರ್ವಸುತ್ತಿರುವ ಕೋವಿಡ್ ವಾರಿಯರ್ಸ್‌ (ಸೈನಿಕರು) ಮೂತ್ರಪಿಂಡ ಹಾಗೂ ಹೃದಯ ಶಸ್ತ್ರ ಚಿಕಿತ್ಸೆಗೊಳಗಾದ ಇಬ್ಬರು ರೋಗಿಗಳಿಗೆ ತುರ್ತಾಗಿ ಬೇಕಾಗಿರುವ ಮಾತ್ರೆಗಳನ್ನು ತಲುಪಿಸಿದ್ದಾರೆ.

ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದ ಕಸ್ತೂರಿಬಾಯಿ ಎನ್ನುವ 67 ವರ್ಷದ ವೃದ್ಧೆಯೊಬ್ಬರು ವರ್ಷದ ಹಿಂದೆಯೆ ಮೂತ್ರಪಿಂಡ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈ ರೋಗಿಗೆ ಪ್ರತಿ ತಿಂಗಳು ಸೇವಿಸಬೇಕಾದ ಮಾತ್ರೆಗಳನ್ನು ತಮ್ಮ ಸ್ವಂತ ವಾಹನದಲ್ಲಿ ನಿಂಬರಗಾ ಗ್ರಾಮಕ್ಕೆ ಕೊರೊನಾ ಸೈನಿಕ ನಾಗರಾಜ ಹೋಗಿ ತಲುಪಿಸಿದ್ದಾರೆ. ಸೇಡಂ ತಾಲೂಕಿನ ಹಂಗನಳ್ಳಿ ಗ್ರಾಮದ ನಾಗಮ್ಮ ಎನ್ನುವ 58 ವರ್ಷದ ವೃದ್ಧೆ ಆರು ತಿಂಗಳ ಹಿಂದೆಯೆ ಅತಿಯಾದ ರಕ್ತದೊತ್ತಡ ಇರುವ ಪ್ರಯುಕ್ತ ಗುಲಬರ್ಗಾ ಹಾರ್ಟ್‌ ಫೌಂಡೇಶನ್‌ ಆಸ್ಪತ್ರೆಯಲ್ಲಿ ಹೃದಯದ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರು. ಇವರಿಗೆ ವೈದ್ಯರು ಆರು ತಿಂಗಳು ತಪ್ಪದೇ ಮಾತ್ರೆ ಸೇವಿಸಲು ತಿಳಿಸಿದ್ದರು.

ಲಾಕ್‌ಡೌನ್‌ ಪ್ರಯುಕ್ತ ಇವರು ಕಲಬುರಗಿಗೆ ಬಂದು ಮಾತ್ರೆ ಪಡೆಯಲು ಅಸಾಧ್ಯವಾಗಿತ್ತು. ಕೋವಿಡ್ ಸೈನಿಕರಾದ ಹರ್ಷಲ್‌ ನಾಗರೆ, ರಾಜು ಜೇವರ್ಗಿ ತಮ್ಮ ಸ್ವಂತ ವಾಹನದಲ್ಲಿ ಹಂಗನಳ್ಳಿ ಗ್ರಾಮಕ್ಕೆ ಹೋಗಿ ಮಾತ್ರೆ ತಲುಪಿಸಿದ್ದಾರೆ. ಇವರ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ನಿಂಬರ್ಗಾ ಗ್ರಾಮದ ಕಸ್ತೂರಿಬಾಯಿ ಅವರ ಮೊಮ್ಮಗನಾದ ಸ್ವಪ್ನಿಲ್‌ ಹಾಗೂ ಹಂಗನಳ್ಳಿ ಗ್ರಾಮದ ನಾಗಮ್ಮ ಅವರ ಪುತ್ರಿ ಸುಲೋಚನಾ ಎನ್ನುವರು ಕರ್ನಾಟಕ ಕೊರೊನಾ ಸೈನಿಕರ ತಂಡದ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಲಾಕ್‌ ಡೌನ್‌ ಇರುವ ಪ್ರಯುಕ್ತ ರೋಗಿಗಳಿಗೆ ಪ್ರತಿ ತಿಂಗಳು ಸೇವಿಸಬೇಕಾದ ಮಾತ್ರೆಗಳನ್ನು ಪೂರೈಸುವಂತೆ ಮನವಿ ಮಾಡಿದ್ದರು.

ಬೆಂಗಳೂರಿನ ರಾಘವೆಂದ್ರ ಅವರು ಕಲಬುರಗಿ ಜಿಲ್ಲೆಯ ಕೊರೊನಾ ಸೈನಿಕರಾದ ನಾಗರಾಜ, ಹರ್ಷಲ್‌ ನಾಗರೆ, ರಾಜು ಜೇವರ್ಗಿ ಅವರಿಗೆ ಈ ಟಾಸ್ಕ್ನ್ನು ಪೂರ್ಣಗೊಳಿಸುವಂತೆ ತಿಳಿಸಿದರು. ಇದಕ್ಕೆ ಕೊರೊನಾ ಸೈನಿಕರು ಸ್ಪಂದಿಸಿದ್ದಾರೆ. ಅನುಕೂಲ ಪಡೆದವರು ಕೊರೊನಾ ಸೈನಿಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.