ಕನಕದಾಸ ಜಯಂತ್ಯುತ್ಸವಕ್ಕೆ ಸಿದ್ದತೆ
Team Udayavani, Nov 18, 2018, 11:49 AM IST
ಬೀದರ: ನ.26ರಂದ ಭಕ್ತ ಶ್ರೇಷ್ಠ ಕನಕದಾಸ ಜಯಂತ್ಯುತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಎಚ್. ಆರ್. ಮಹಾದೇವ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕನಕದಾಸರ ಜಯಂತ್ಯುತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಚೇರಿಗಳಲ್ಲಿ ಪೂಜೆ ಕಾರ್ಯಕ್ರಮದ ಬಳಿಕ ಎಲ್ಲ ಅಧಿಕಾರಿಗಳು ನೇರವಾಗಿ ಬೊಮ್ಮಗೊಂಡೇಶ್ವರ ವೃತ್ತಕ್ಕೆ ಆಗಮಿಸಬೇಕು. ಸಮಾಜದ ಬಾಂಧವರು ಹೆಚ್ಚು ಸಂಖ್ಯೆಯಲ್ಲಿ ಸೇರಿ ವಿಜೃಂಭಣೆಯಿಂದ ಜಯಂತಿ ಆಚರಣೆಗೆ ಸಹಕಾರಿಸಬೇಕು ಎಂದರು. ಮೆರವಣಿಗೆಯಲ್ಲಿ 2 ಕಲಾ ತಂಡಗಳು ಹಾಗೂ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದಾಸರ ಪದಗಳ ಹಾಡಿಗೆ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಜಯಂತಿ ಆಚರಣೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸಮಾಜದ ಮುಖಂಡರು ಕೋರಿದರು. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯ ಬೆಳಗ್ಗೆ 9 ಗಂಟೆಗೆ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಕ್ರಮ ವಹಿಸುವಂತೆ ಎಲ್ಲ
ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸುತೋ¤ಲೆ ಮೂಲಕ ತಿಳಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ನಗರದ ಬರೀದ್ ಶಾಹಿ ವೃತ್ತದಲ್ಲಿ ಇಲ್ಲವೇ ನಗರದ ಪ್ರಮುಖ ಸ್ಥಳವೊಂದರಲ್ಲಿ ಕನಕದಾಸರ ಮೂರ್ತಿಯನ್ನು ಪ್ರತಿಷ್ಠಾಪಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಮುಖಂಡ ಸಂತೋಷ ಜೋಳದಾಪಕೆ ಸಭೆಗೆ ತಿಳಿಸಿದರು. ತಮ್ಮ ಬೇಡಿಕೆಯನ್ನು ಸರ್ಕಾರಕ್ಕೆ ತಿಳಿಸಲಾಗುವುದು. ಈ ಬಗ್ಗೆ ಸೂಕ್ತ ಮಾರ್ಗದರ್ಶನ ಮಾಡಲು ಮತ್ತು ಇದಕ್ಕೆ ಅನುಮತಿ ನೀಡಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೇ ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಕಾರಿಗಳು ತಿಳಿಸಿದರು.
ಎಲ್ಲ ಸರ್ಕಾರಿ ಹಾಗೂ ಅರೆಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳಲ್ಲಿ ಬೆಳಗ್ಗೆ 10ಕ್ಕೆ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ 11:30ಕ್ಕೆ ಪೂಜೆ ನಡೆಯಲಿದೆ. ನಂತರ ಬೊಮ್ಮಗೊಂಡೇಶ್ವರ ಸರ್ಕಲ್‌ನಿಂದ 11:30ಕ್ಕೆ ಮೆರವಣಿಗೆಗೆ ಚಾಲನೆ ನೀಡಲಾಗುವುದು. ವೇದಿಕೆ ಕಾರ್ಯಕ್ರಮ ಜಿಲ್ಲಾ ರಂಗಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ರಾಜಶೇಖರ ವಟಗೆ ಸಭೆಗೆ ಮಾಹಿತಿ ನೀಡಿದರು.
ನಿಬಂಧ ಸ್ಪರ್ಧೆ: ಕನಕದಾಸರ ಜೀವನಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ಸಮಾಜದ ಮುಖಂಡರಾದ ಅಮೃತರಾವ್ ಚಿಮಕೋಡ, ಮಲ್ಲಿಕಾರ್ಜುನ ಬಿರಾದಾರ, ಮಾಳಪ್ಪ ಅಡಸಾರೆ, ವಿಜಯಕುಮಾರ್ ಸೋನಾರೆ, ಲಕ್ಷ್ಮಣ ಮೇತ್ರೆ, ತುಕಾರಾಮ ಚಿಮಕೋಡೆ, ಕೆ.ಡಿ. ಗಣೇಶ ಹಾಗೂ
ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.