ʼಕನ್ನಡ ಭವನ’ಕ್ಕೆ ಸಿಗುತ್ತಾ ಅನುದಾನ?
Team Udayavani, Jun 4, 2022, 2:59 PM IST
ಬೀದರ: ಅಗತ್ಯ ಅನುದಾನದ ಮತ್ತು ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಸಾಂಸ್ಕೃತಿಕ ನಗರಿ ಬೀದರನಲ್ಲಿ ತಲೆ ಎತ್ತಬೇಕಿದ್ದ ಸಾಹಿತ್ಯಾಸಕ್ತರ ಸ್ವಾಭಿಮಾನದ ಹೆಗ್ಗುರುತು “ಕನ್ನಡ ಭವನ’ ನಿರ್ಮಾಣ ನನೆಗುದಿಗೆ ಬಿದ್ದಿದೆ.
ಶನಿವಾರ ಬೀದರ ಪ್ರವಾಸ ಕೈಗೊಂಡಿರುವ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವ ಸುನೀಲಕುಮಾರ, ಅರ್ಧಕ್ಕೆ ನಿಂತಿರುವ ಕಾಮಗಾರಿಗೆ ನೆರವು ಘೋಷಿಸುತ್ತಾರೆ ಎಂಬ ಆಶಾಭಾವ ಮೂಡಿದೆ. ಧರಿನಾಡಿನಲ್ಲಿ ಕನ್ನಡ ಭವನಕ್ಕಾಗಿ ಎರಡು ದಶಗಳಿಂದ ಸಂಘರ್ಷ ನಡೆಸಿದ ಕಸಾಪ, ಈಗ ಅರ್ಧಕ್ಕೆ ನಿಂತಿರುವ ಕಟ್ಟಡಕ್ಕೆ ಅನುದಾನಕ್ಕಾಗಿ ಜೋಳಿಗೆ ಹಿಡಿಯಬೇಕಾದ ಪರಿಸ್ಥಿತಿ ಬಂದಿದೆ.
ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ ಕಳೆದ ವರ್ಷ 2 ಕೊಟಿ ರೂ. ಮಂಜೂರು ಮಾಡಲಾಗಿತ್ತು. ಆದರೆ, ಕೋವಿಡ್‌ನಿಂದ ಆರ್ಥಿಕ ನೆಪವೊಡ್ಡಿ ಕೇವಲ 1 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಇನ್ನೊಂದೆಡೆ ಸಂಸದರು ಮತ್ತು ಬೀದರ ಶಾಸಕರು ತಮ್ಮ ನಿಧಿಯಿಂದ ಘೋಷಿಸಿದ್ದ ತಲಾ 10 ಲಕ್ಷ ರೂ. ಬಿಡುಗಡೆಗೆ ನಿರ್ಲಕ್ಷ ತೋರುತ್ತಿದ್ದಾರೆ. ಹಾಗಾಗಿ ಶೇ.80ರಷ್ಟು ಪೂರ್ಣಗೊಂಡಿರುವ ಕಟ್ಟಡದ ಕಾಮಗಾರಿ ಈಗ ಹಣ ಇಲ್ಲದೇ ಕಳೆದ 5 ತಿಂಗಳಿಂದ ಸ್ಥಗಿತಗೊಂಡಿದೆ. ನಗರದ ಗುರುದ್ವಾರ ಪರಿಸರದ ಸರ್ವೇ ನಂ.60ರಲ್ಲಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಸುಸಜ್ಜಿತ ಭವನ ನಿರ್ಮಾಣಕ್ಕೆ ಕಳೆದ ನ.22ರಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಮೂರು ಪ್ರತ್ಯೇಕ ಕಟ್ಟಡಗಳನ್ನು ಒಳಗೊಂಡಿರುವ ಯೋಜನೆಯಡಿ ಗ್ರಂಥಾಲಯ, ಆರ್ಟ್ ಗ್ಯಾಲರಿ, ವಸತಿ ಗೃಹ, ಕಸಾಪ ಕಚೇರಿ, ಸಭಾಂಗಣವುಳ್ಳ ಒಂದು ಕಟ್ಟಡ, 600 ಜನ ಸಾಮರ್ಥ್ಯದ ಸಭಾ ಭವನ ಮತ್ತು ಬಯಲು ರಂಗ ಮಂದಿರದ ಎರಡು ಕಟ್ಟಡಗಳು ಹೊಂದಿವೆ. ಸದ್ಯ ಯೋಜನೆಯಡಿ ಆಡಳಿತ ಕಚೇರಿ ನಿರ್ಮಾಣ ಮಾತ್ರ ಕೈಗೆತ್ತಿಕೊಳ್ಳಲಾಗಿದೆ. ತಾತ್ಕಾಲಿಕ ಹಾಲ್‌ನ್ನು ಸಹ ಒಳಗೊಂಡಿದ್ದ ಆಡಳಿತ ಕಚೇರಿಯನ್ನು ಒಂದೆರಡು ತಿಂಗಳಲ್ಲಿ ಪೂರ್ಣಗೊಳಿಸಿ, ಅಲ್ಲಿಂದ ಕನ್ನಡದ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗಬೇಕೆಂಬ ಕಸಾಪ ಕನಸಿಗೆ ಅನುದಾನ ಕೊರತೆ ತಣ್ಣೀರೆರಚಿದಂತಾಗಿದೆ.
2ನೇ ಕಂತಿನ ಹಣಕ್ಕಾಗಿ ಪ್ರಾಧಿಕಾರಕ್ಕೆ ನಿರಂತರ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಪ್ರಾಧಿಕಾರದ ಬಳಿ ಹಣ ಇಲ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೇ ಪಡೆಯುವಂತೆ ಕೈ ಚಲ್ಲಿದೆ. ಕನ್ನಡ ಭವನಕ್ಕೆ ಒಂದಾದ ಮೇಲೊಂದು ಅಡೆತಡೆ ಎದುರಾಗುತ್ತಿರುವುದು ಕನ್ನಡಿಗರನ್ನು ಕೆರಳಿಸುತ್ತಿದ್ದು, ಚುನಾಯಿತ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಚಿವ ಸುನೀಲಕುಮಾರ ಅವರು ಇತ್ತ ಗಮನ ಹರಿಸಿ, ಬಾಕಿ ಅನುದಾನವನ್ನು ಪ್ರಕಟಿಸಿ ಆದಷ್ಟು ಬೇಗ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ನೆರವಾಗುತ್ತಾರಾ ಎಂಬುದು ಕಾದು ನೋಡಬೇಕಿದೆ.
ಹಲವು ವರ್ಷಗಳ ಸಂಘರ್ಷ, ಅಡೆತಡೆಗಳನ್ನು ಪರಿಹರಿಸಿ 8 ಕೋಟಿ ರೂ. ವೆಚ್ಚದ ಕನ್ನಡ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆದರೆ, ಗಡಿ ಪ್ರಾಧಿಕಾರ ಮಂಜೂರು ಮಾಡಿದ 2 ಕೋಟಿ ರೂ. ಪೈಕಿ 1 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿರುವ ಕಾರಣ ಆರಂಭಿಕವಾಗಿ ಕೈಗೆತ್ತಿಕೊಂಡಿರುವ ಆಡಳಿತ ಕಚೇರಿ ಕೆಲಸವೂ ಸಹ ಸ್ಥಗಿತಗೊಂಡಿದೆ. ಈ ಬಗ್ಗೆ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಬೀದರಗೆ ಆಗಮಿಸಲಿರುವ ಸಂಸ್ಕೃತಿ ಇಲಾಖೆಯ ಸಚಿವ ಸುನೀಲಕುಮಾರ ಅವರು ಅನುದಾನದ ಘೋಷಣೆ ಮಾಡುವ ವಿಶ್ವಾಸ ಇದೆ. –ಸುರೇಶ ಚನಶೆಟ್ಟಿ, ಅಧ್ಯಕ್ಷರು, ಜಿಲ್ಲಾ ಕಸಾಪ, ಬೀದರ
-ಶಶಿಕಾಂತ ಬಂಬುಳಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.