ಕನ್ನಡ ಭವನ ಚನಶೆಟ್ಟಿ ಪರಿಶ್ರಮದ ಫಲ: ಪಾರ್ವತಿ

ಚನಶೆಟ್ಟಿ ನೇತೃತ್ವದ ತಂಡ ಈ ಕೆಲಸ ಮಾಡುವ ಸಂಪೂರ್ಣ ವಿಶ್ವಾಸವಿದೆ.

Team Udayavani, Apr 3, 2021, 6:37 PM IST

Chana-shet

ಬೀದರ: ಜಿಲ್ಲಾ ಕೇಂದ್ರ ಬೀದರನಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಾಣಕ್ಕೆ ಚಾಲನೆ ದೊರೆತಿರುವುದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಅವರ ಪರಿಶ್ರಮದ ಫಲವಾಗಿದೆ ಎಂದು ಕಥೆಗಾರ್ತಿ ಪಾರ್ವತಿ ಸೋನಾರೆ ನುಡಿದರು. ಪರಿಷತ್‌ ಜಿಲ್ಲಾ ಘಟಕದ ಚುನಾವಣೆ ಪ್ರಯುಕ್ತ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕನ್ನಡ ಭವನದ ಬಳಿ ಕಸಾಪ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುರೇಶ ಚನಶೆಟ್ಟಿ ಪರ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದ ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಭವನಗಳು ನಿರ್ಮಾಣಗೊಂಡು ದಶಕಗಳೇ ಕಳೆದಿವೆ. ಬೀದರನಲ್ಲಿ ಮಾತ್ರ ಕನ್ನಡ ಭವನ ಕನಸಾಗಿಯೇ ಉಳಿದುಕೊಂಡಿತ್ತು. ಚನಶೆಟ್ಟಿ ಗಡಿ ಕನ್ನಡಿಗರ ಬಹುದಿನಗಳ ಬೇಡಿಕೆ ಈಡೇರಿಸುವ ಕೆಲಸ ಮಾಡಿದ್ದಾರೆ. ಬರುವ ದಿನಗಳಲ್ಲಿ ನಗರದಲ್ಲಿ ರಾಜ್ಯದಲ್ಲೇ ಮಾದರಿ ಕನ್ನಡ ಭವನ ನಿರ್ಮಾಣವಾಗಲಿದೆ ಎಂದು ತಿಳಿಸಿದರು.ಕನ್ನಡಪರ ಚಟುವಟಿಕೆ ನಡೆಸಿಕೊಂಡು ಹೋಗಲು ಜಿಲ್ಲಾ ಕೇಂದ್ರ ಅಷ್ಟೇ ಅಲ್ಲ; ಜಿಲ್ಲೆಯ ಎಂಟೂ ತಾಲೂಕು ಕೇಂದ್ರಗಳಲ್ಲೂ ಕನ್ನಡ ಭವನಗಳು ನಿರ್ಮಾಣಗೊಳ್ಳಬೇಕಿದೆ.

ಚನಶೆಟ್ಟಿ ನೇತೃತ್ವದ ತಂಡ ಈ ಕೆಲಸ ಮಾಡುವ ಸಂಪೂರ್ಣ ವಿಶ್ವಾಸವಿದೆ. ಚುನಾವಣೆಯಲ್ಲಿ ಬೆಂಬಲಿಸುವ ಮೂಲಕ ಮತದಾರರು ತಂಡದ ಕೈ ಬಲಪಡಿಸಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಸಾಹಿತಿ ರಜಿಯಾ ಬಳಬಟ್ಟಿ ಮನವಿ ಮಾಡಿದರು. ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಕಸ್ತೂರಿ ಪಟಪಳ್ಳಿ ಮಾತನಾಡಿ, ಸುರೇಶ ಅವರು ಕನ್ನಡ ಸಾಹಿತಿಗಳಿಗೆ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ನೆಲೆ ಹಾಗೂ ಬೆಲೆ ತಂದು ಕೊಡುವ ಕೆಲಸ ನಿರಂತರ ಮಾಡುತ್ತಿದ್ದಾರೆ ಎಂದರು.

ಲೇಖಕಿ ವಿದ್ಯಾವತಿ ಬಲ್ಲೂರ ಮಾತನಾಡಿ, ಜಿಲ್ಲೆಯ ಮಹಿಳಾ ಸಾಹಿತಿಗಳಿಗೆ ಚನಶೆಟ್ಟಿ ಸೂಕ್ತ ವೇದಿಕೆ ಒದಗಿಸಿಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಕನ್ನಡ ಹಾಗೂ ಕನ್ನಡಿಗರ ಒಳಿತಿಗಾಗಿ ಅವರ ಗೆಲುವು ಅನಿವಾರ್ಯ ಎಂದರು. ಈ ವೇಳೆ ಪರಿಷತ್‌ ಜಿಲ್ಲಾ ಕಾರ್ಯದರ್ಶಿ ಡಾ| ಬಸವರಾಜ ಬಲ್ಲೂರ, ಖಜಾಂಚಿ ಟಿ.ಎಂ. ಮಚ್ಚೆ, ತಾಲೂಕಾಧ್ಯಕ್ಷ ಎಂ.ಎಸ್‌. ಮನೋಹರ, ವೀರಶೆಟ್ಟಿ ಚನಶೆಟ್ಟಿ, ಗಂಗಾಂಬಿಕೆ ಬಿರಾದಾರ, ಧರ್ಮವೀರ ಬಿರಾದಾರ ಇದ್ದರು. ಸಕಲೇಶ್ವರಿ ಚನಶೆಟ್ಟಿ ಸ್ವಾಗತಿಸಿದರು. ಸಾಕ್ಷಿ ಬಿರಾದಾರ ನಿರೂಪಿಸಿದರು. ಸಂಗೀತಾ ಶೆಟಕಾರ ವಂದಿಸಿದರು.

ಟಾಪ್ ನ್ಯೂಸ್

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.