ಯಾದಗಿರಿ-ಬೀದರನಲ್ಲಿ ಕನ್ನಡದ ಕಂಪು
Team Udayavani, Oct 29, 2021, 11:12 AM IST
ಯಾದಗಿರಿ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ “ಕನ್ನಡಕ್ಕಾಗಿ ನಾವು’ ಅಭಿಯಾನದ ಭಾಗವಾಗಿ ಇಲ್ಲಿನ ಜಿಲ್ಲಾಡಳಿತ ಭವನದ ಅಡಿಟೊರಿಯಂನಲ್ಲಿ ಗುರುವಾರ ಆಯೋಜಿಸಿದ್ದ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಕನ್ನಡ ಗಾಯನ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್ ಚಾಲನೆ ನೀಡಿದರು. ಜಿಲ್ಲೆಯ ಕನ್ನಡಪರ ಹೋರಾಟಗಾರರು, ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕನ್ನಡ ಪ್ರೇಮ ಮೆರೆದರು. ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ’, ನಿಸಾರ್ ಅಹಮ್ಮದ್ ಅವರ “ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖರವರ ಸಾಹಿತ್ಯ “ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡುವ ಮೂಲಕ ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕನ್ನಡಿಗರೆಲ್ಲರೂ ಒಟ್ಟಾಗಿ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ನಿತ್ಯ ವ್ಯವಹರಿಸುವ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್ ಅವರು ಬೋಧಿಸಿದರು. ಜಿಪಂ ಸಿಇಒ ಶಿಲ್ಪಾ ಶರ್ಮಾ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗುಂಡಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ, ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸದಸ್ಯ ಶರಣು ಬಿ ಗದ್ದುಗೆ, ಭೀಮರಾಯ ಲಿಂಗೇರಿ, ಪ್ರಕಾಶ ಅಂಗಡಿ, ಆನಂದ ಮಧುಸೂದನ ಸೌದಿ, ಡಿಡಿಪಿಐ ಶಾಂತಗೌಡ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೊಟ್ರೇಶ್ ಮರಬನಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.