Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ
Team Udayavani, May 1, 2024, 5:59 PM IST
ಬೀದರ್: ರಾಜ್ಯ ಜನರು ಒಂದಾದರೊಂದು ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದು, ಕಾಂಗ್ರೆಸ್‌ಗೆ ಬೆಂಬಲವಾಗಿ ನಿಂತಿದ್ದಾರೆ. ಹಾಗಾಗಿ ಬೀದರ್ ಸೇರಿ ರಾಜ್ಯದ ಎಲ್ಲ 28 ಲೋಕಸಭೆ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರ ಘೋಷಿಸಿದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ನೂರು ದಿನಗಳಲ್ಲೇ ಜಾರಿಗೊಳಿಸಿ, ನುಡಿದಂತೆ ನಡೆದಿದ್ದೇವೆ. ಲೋಕಸಭೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆಗಳನ್ನು ನೀಡಿದ್ದು, ಅವುಗಳನ್ನು ಈಡೇರಿಸುತ್ತೇವೆ ಎಂಬ ನಂಬಿಕೆ ಜನರಲ್ಲಿದೆ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೇಂದ್ರದಲ್ಲಿ ಅಕ್ಕಿ ದಾಸ್ತಾನು ಇದ್ದರೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದುರುದ್ದೇಶದಿಂದ ರಾಜ್ಯ ಸರ್ಕಾರಕ್ಕೆ ಅಕ್ಕಿ ವಿತರಣೆಗೆ ಅಡ್ಡಿಪಡಿಸಿತ್ತು. ಬಡವರ ಹಸಿವು ನೀಗಿಸುವುದು ಸಂವಿಧಾನ ಬದ್ಧ ಹಕ್ಕು. ಆದರೆ ಕೇಂದ್ರ ಅಕ್ಕಿ ನೀಡಲಿಲ್ಲ. ಹಾಗಾಗಿ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಲು ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ ಎಂದು ಹೇಳಿದರು.
ಮಾದಿಗರಿಗೆ ಒಳ ಮೀಸಲಾತಿ ನೀಡುತ್ತೇವೆ ಎಂದು ಹೇಳುವ ಮೋದಿಯವರು ಹತ್ತು ವರ್ಷ ಏಕೆ ನೀಡಲಿಲ್ಲ? ಇದೊಂದು ಚುನಾವಣಾ ಗಿಮಿಕ್ ಎಂದ ಮುನಿಯಪ್ಪ, ನುಡಿದಂತೆ ನಡೆಯುವ ಸರ್ಕಾರ ಕಾಂಗ್ರೇಸ್ ಒಂದೆ. ಗ್ಯಾರಂಟಿಗಳನ್ನು ಸಮರ್ಥವಾಗಿ ಜಾರಿಗೆ ತಂದು ಜನಪರ ಜೀವಪರವಾಗಿ ಸರ್ಕಾರ ನಡೆಸುತಿದ್ದೇವೆ. ಸಾಲಮನ್ನಾ, ಬಿಪಿಎಲ್ ಕಾರ್ಡ್ ಇರುವ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ಹಣ ನೀಡುವುದು, ಉದ್ಯೋಗ ಭರ್ತಿ ಸೇರಿದಂತೆ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಿಕೊಡುವ ಪ್ರಯತ್ನ ಮಾಡುತಿದ್ದೇವೆ ಎಂದು ಮುನಿಯಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಂಎಲ್‌ಸಿ ಅರವಿಂದಕುಮಾರ ಅರಳಿ, ಪ್ರಮುಖರಾದ ಬಸವರಾಜ ಬುಳ್ಳಾ, ವಿಜಯಕುಮಾರ ರಾಮಕೃಷ್ಣ, ವಿದ್ಯಾಸಾಗರ ಶಿಂಧೆ, ಸಂಜೀವಕುಮಾರ ಡಿ.ಕೆ, ದತ್ತಾತ್ರಿ ಮೂಲಗೆ ಮತ್ತಿತರರಿದ್ದರು.
ಇದನ್ನೂ ಓದಿ: BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.