ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಖಂಡ್ರೆ ನೇಮಕ: ಸಂಭ್ರಮ
Team Udayavani, Jul 5, 2018, 11:11 AM IST
ಭಾಲ್ಕಿ: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಈಶ್ವರ ಖಂಡ್ರೆ ನೇಮಕವಾದ ಹಿನ್ನೆಲೆಯಲ್ಲಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ದಿನೇಶ ಗುಂಡೂರಾವ ಮತ್ತು ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ಹಾಗೂ ಶಾಸಕ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಯುವ ಕಾಂಗ್ರೆಸ್ ಮುಖಂಡರು ಶಾಸಕರ ಗೃಹ ಕಚೇರಿಯಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು. ನಂತರ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯಿಂದ ಗಾಂಧಿ ವೃತ್ತದ ವರೆಗೆ ಜಯ ಘೋಷ ಮಾಡುತ್ತ ಮೇರವಣಿಗೆ ನಡೆಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಾದೇವ ಸ್ವಾಮಿ, ಪುರಸಭೆ ಅಧ್ಯಕ್ಷ ವಿಶಾಲ ಪುರಿ, ಕಾಂಗ್ರೆಸ್ ಮುಖಂಡರಾದ ಪ್ರವೀಣ ಹಣಮಶೆಟ್ಟೆ, ಸಂಗಮೇಶ ವಾಲೆ, ಸಂಜು ಮುದ್ದಾ, ಕಪೀಲ ಕಲ್ಯಾಣೆ, ಸಂಜೀವ ಲೋಖಂಡೆ, ಜೈಪಾಲ ಬೋರಾಳೆ, ಸಂತೋಷ ಬಿಜಿಪಾಟೀಲ, ಪ್ರಶಾಂತ ಕೋಟಗೀರಾ, ಮಾರುತಿ ಭಂಗಾರೆ, ಗೌರಿಶಂಕರ ಸ್ವಾಮಿ, ರಾಜು ಪಾಟೀಲ ಖಾನಾಪುರ, ರವಿ ಬಿರಾದಾರ ಜ್ಯಾಂತಿ, ಬನ್ಸಿಲಾಲ್, ಕಿರಣ ಬಿರಾದಾರ, ಗಿರೀಶ ಬಿರಾದಾರ, ಪಂಚಶೀಲ ಪಾಟೀಲ, ಬಾಲಾಜಿ ಮರೂರಕರ, ಶಿವು ಮಡಿವಾಳ ಇದ್ದರು.
ಭಾಲ್ಕಿ: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ನೇಮಕವಾದ ಸುದ್ದಿ ತಿಳಿಯುತ್ತಿದ್ದಂತೆ ತಾಲೂಕಿನ ಉಚ್ಚಾ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಸಂಭ್ರಮ ಆಚರಿಸಿದರು. ಕಾಂಗ್ರೆಸ್ ಧ್ವಜ ಹಿಡಿದು ಪಟಾಕಿ ಸಿಡಿಸಿ ಸಿಹಿ ಹಂಚಿದರು.
ಕಾಂಗ್ರೆಸ್ ಯುವ ಮುಖಂಡ ಮಹೇಶ ಸಜ್ಜನಶೆಟ್ಟಿ, ಪ್ರಕಾಶ ಮಳಚಾಪುರೆ, ರಾಜಕುಮಾರ ಹುಣಜೆ, ಸಚಿನಸ್ವಾಮಿ ಚಿದ್ರೆ, ರತ್ನಾಕಾಂತ ಮಾಲಿಪಾಟೀಲ, ಸುಭಾಷ ನಿಜಲಿಂಗೆ, ಗಜಾನನ ಮಳಚಾಪುರೆ, ದಿಲೀಪ ಆಳ್ಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
MUST WATCH
ಹೊಸ ಸೇರ್ಪಡೆ
ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.