ಖಂಡ್ರೆ ಮನೆಗೆ ಮುತ್ತಿಗೆ ಯತ್ನ
Team Udayavani, Jan 9, 2018, 12:22 PM IST
ಭಾಲ್ಕಿ: ಬೀದರ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸಹಕಾರ ಕ್ಷೇತ್ರದ ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ ರೂ.2200 ಮುಂಗಡ ಹಣವನ್ನು ತಕ್ಷಣ ಪಾವತಿಸಬೇಕು. ಬೀದರ ಸಹಕಾರ ಸಕ್ಕರೆ ಕಾರ್ಖಾನೆಗೆ ರೂ.10 ಕೋಟಿ ಸಾಲದ ಖಾತ್ರಿ ಕೊಟ್ಟರೂ ಬ್ಯಾಂಕ್ ಸಾಲ ಕೊಡುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ತಕ್ಷಣ ಸರ್ಕಾರ ಮಧ್ಯಪ್ರವೇಶಿಸಿ ಬಿಎಸ್‌ಎಸ್‌ಕೆಯನ್ನ ಸುಸ್ಥಿರಗೊಳಿಸಲು ಸಹಕರಿಸಬೇಕು.
ತೋಗರಿ ಖರೀದಿ ಕೇಂದ್ರವನ್ನು ಮಾರ್ಚ್‌ವರೆಗೆ ತೆರೆದಿಟ್ಟು ರೈತರು ಬೆಳೆದ ಸಂಪೂರ್ಣ ತೊಗರಿಯನ್ನು ಸರ್ಕಾರ ಬೆಂಬಲ ಬೆಲೆಗೆ ಖರೀದಿಸಬೇಕು. ಫ.ಥ. ಸಾಲದ ಬಡ್ಡಿ ಮನ್ನಾವನ್ನು ಮಾರ್ಚ್‌ವರೆಗೆ ಮುಂದುವರಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.
ಮಧ್ಯಾಹ್ನ 1:30ಕ್ಕೆ ರೈತರು ಸಚಿವರ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಸಚಿವರು ದೂರವಾಣಿ ಮೂಲಕ ರೈತ
ಮುಖಂಡರೊಂದಿಗೆ ಮಾತನಾಡಿ, ಸೂಕ್ತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ರಾಜ್ಯ ಉಪಾಧ್ಯಕ್ಷ ಶಾಕಿಮ್, ರಾಜ್ಯ ಸಂಘದ ಕಾರ್ಯದರ್ಶಿ ಪಾಂಡ್ರೆ, ತಾಲೂಕು ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಕಾರ್ಯದರ್ಶಿ ಬಾಬುರಾವ್ ಜೋಳದಾಪಕಾ, ಪ್ರಮುಖರಾದ ವೈಜಿನಾಥ ನೌಬಾದೆ, ಶಂಕ್ರೇಪ್ಪ ಪಾರಾ, ವಿಶ್ವನಾಥ ಚೀಲಶೆಟ್ಟೆ, ಶೇಷರಾವ್ ಕಣಜಿ, ಕೊಂಡಿಬಾ ಪಾಂಡ್ರೆ, ಸ್ರೀಮಂತ ಬಿರಾದಾರ್, ಮನೋಹರರಾವ್ ಹೊರಂಡಿ, ಶರಣಪ್ಪ ಕಂದಗೂಳ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾದೇವಿ ಕಾರಬಾರಿ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.