ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ: ಏಳು ಮಂದಿ ಸದಸ್ಯರ ಅಪಹರಣ!
Team Udayavani, Jan 31, 2021, 8:59 AM IST
ಬಸವಕಲ್ಯಾಣ (ಬೀದರ್): ತಾಲೂಕಿನ ಚಂಡಕಾಪೂರ ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮತದಾನಕ್ಕಾಗಿ ಬರುತ್ತಿದ್ದ ಸದಸ್ಯರ ಮೇಲೆ ಅಧ್ಯಕ್ಷ ಆಕಾಂಕ್ಷಿಯೊಬ್ಬರ ಕುಟುಂಬದವರು ಹಲ್ಲೆ ನಡೆಸಿ, 7 ಜನ ಸದಸ್ಯರನ್ನು ಅಪಹರಿಸಿಕೊಂಡು ಹೋಗಿರುವ ಘಟನೆ ನಡೆದಿದ್ದು, ಈ ಕುರಿತಂತೆ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾ.ಪಂ ಸದಸ್ಯೆ ಪುತಳಾಬಾಯಿ ಕುಟುಂಬದವರು ಸದಸ್ಯರನ್ನು ಅಪಹರಿಸಿದ್ದು, ಈ ವೇಳೆ ಮಹಿಳಾ ಸದಸ್ಯರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸದಸ್ಯೆ ಮಹಾದೇವಿ ಸ್ವಾಮಿ ಎನ್ನುವರು 6 ಜನರ ವಿರುದ್ಧ ನೀಡಿರುವ ದೂರು ದಾಖಲಿಸಿದ್ದಾರೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಪುತಳಾಬಾಯಿ ಕುಟುಂಬದವರು ಒಬ್ಬ ಸದಸ್ಯರಿಗೆ ತಲಾ 2 ಲಕ್ಷ ರೂ. ಆಮಿಷವೊಡ್ಡಿದ್ದರು ಎನ್ನಲಾಗಿದ್ದು, ಇದನ್ನು ನಿರಾಕರಿಸಿ 10 ಜನ ಸದಸ್ಯರು ಕಲಬುರಗಿ ತುಳಜಾಪುರ ಮತ್ತಿತ್ತರ ಕಡೆಗೆ ಯಾತ್ರೆ ಹೋಗಿದ್ದಾರೆ. ಶನಿವಾರ ಚಡಂಕಾಪೂರ ಗ್ರಾಮದ ಕಡೆ ವಾಪಸ್ ಬರುತ್ತಿದ್ದಾಗ ತಡೋಳಾ ಬಳಿ 20ಕ್ಕೂ ಹೆಚ್ಚು ಜನ ವಾಹನಗಳಿಗೆ ಅಡ್ಡಗಟ್ಟಿ 7 ಜನ ಸದಸ್ಯರಿಗೆ ಒತ್ತಾಯದಿಂದ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕಂಬಳವನ್ನು ಅಂತಾರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಬೇಕು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ
ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮೀಣ ಠಾಣೆ ಪೊಲೀಸರ ತಂಡ, ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಿದೆ.
ಚಂಡಕಾಪೂರ ಗ್ರಾ.ಪಂ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಗೆ ಅಗತ್ಯ ಸದಸ್ಯರ ಸಂಖ್ಯೆ ಲಭ್ಯವಿಲ್ಲದ ಕಾರಣ ಚುನಾವಣೆ ಪ್ರಕ್ರಿಯೆ ಮುಂದೂಡಲಾಗಿದೆ. ಒಟ್ಟು 20 ಜನ ಸದಸ್ಯ ಬಲದ ಗ್ರಾಪಂಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಶನಿವಾರ ದಿನಾಂಕ ನಿಗದಿಯಾಗಿತ್ತು. ಆದರೆ, ಚುನಾವಣೆ ಪ್ರಕ್ರಿಯೆ ವೇಳೆ 9 ಜನ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು. ಹೀಗಾಗಿ ಕೋರಂ ಕೊರತೆ ಕಾರಣ ಚುನಾವಣೆ ಪ್ರಕ್ರಿಯೆ ಮುಂದೂಡಲಾಯಿತು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.