ಹುಮನಾಬಾದ್‌ನಲ್ಲಿ ನೀರಿಗಾಗಿ ಹಾಹಾಕಾರ
8 ದಿನಗಳಿಂದ ನೀರು ಪೂರೈಕೆ ಸ್ಥಗಿತ
Team Udayavani, Sep 13, 2020, 5:58 PM IST
ಸಾಂದರ್ಭಿಕ ಚಿತ್ರ
ಹುಮನಾಬಾದ: ಕಳೆದ ಎಂಟು ದಿನಗಳಿಂದಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆ ಆಗದ್ದರಿಂದ ಸಾರ್ವಜನಿಕರು ಹನಿ ನೀರಿಗೂ ಪರದಾಡುವಂತಾಗಿದೆ.
ಸ್ಥಳೀಯ ಪುರಸಭೆ ಸಮರ್ಪಕ ನೀರು ಪೂರೈಕೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೆ ನೀರು ಪೂರೈಕೆ ಸ್ಥಗಿತಗೊಳಿಸಿದ್ದರಿಂದ ಜನ ನೀರಿಗಾಗಿ ಅಲೆದಾಡುವಂತಾಗಿದೆ. ಮನೆಯಿಂದ ಕಚೇರಿಗೆ ವಾಹನದಲ್ಲಿ ಸುತ್ತಾಡುವ ಪುರಸಭೆ ಅಧಿಕಾರಿಗಳು ಒಂದು ದಿನ ಕೂಡ ಪಟ್ಟಣದಲ್ಲಿನ ಜನರಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ಹತ್ತು ದಿನಗಳ ಕಾಲ ಕುಡಿಯುವ ನೀರು ಬರದಿದ್ದರೆ ಜನರು ಹೇಗೆ ಜೀವನ ನಡೆಸುತ್ತಾರೆ ಎಂದು ಯೋಚಿಸುವ ಗೋಜಿಗೂ ಹೋಗಿಲ್ಲ. ಪಟ್ಟಣದ ಒಂದೇ ಒಂದು ವಾರ್ಡ್, ಬಡಾವಣೆಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯ: ಕಳೆದ ಆರು ತಿಂಗಳ ಹಿಂದೆ ಕಾರಂಜಾ ಜಲಾಶಯದಿಂದ ಪಟ್ಟಣಕ್ಕೆ ನೀರು ಪೂರೈಕೆ ಮಾಡುತ್ತಿದ್ದ ಜಾಕ್‌ವೆಲ್ ಮೋಟಾರ್ ಹಾಗೂ ಟಿಸಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ದುರಸ್ತಿಗೆ ಕಳುಹಿಸಲಾಗಿತ್ತು. ಆರು ತಿಂಗಳಾದರೂ ರಿಪೇರಿ ಆಗಿಲ್ಲ. ಒಂದು ಮೋಟಾರ್ ದುರಸ್ತಿಗೀಡಾದರೆ ಕೂಡಲೇ ಪರ್ಯಾಯ ಮೋಟರ್ ವ್ಯವಸ್ಥೆ ಮಾಡಬೇಕು ಎಂಬ ನಿಟ್ಟಿನಲ್ಲಿ ಎರಡು ಮೋಟಾರ್ ಮತ್ತು ಎರಡು ಟಿಸಿ ವ್ಯವಸ್ಥೆ ಮಾಡಲಾಗಿತ್ತು. ಕೂಡಲೇ ದುರಸ್ತಿ ಮಾಡಿದ್ದರೆ ಪಟ್ಟಣದಲ್ಲಿ ನೀರಿನ ಸಮಸ್ಯೆ ಆಗುತ್ತಿರಲಿಲ್ಲ. ಆದರೆ ದುರಸ್ತಿ ಮಾಡಿಸುವಲ್ಲಿ ಪುರಸಭೆ ಮುಖ್ಯಾಧಿಕಾರಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ತಾಲೂಕಿನ ಹುಡಗಿ ಪಂಪ್ ಹೌಸನಲ್ಲಿ ಮೋಟಾರ್ ಹಾಗೂ ಟಿಸಿ ದುರಸ್ತಿಗೆ ಕಳುಹಿಸಿದ್ದು ಇಂದಿಗೂ ಮರಳಿ ಬಂದಿಲ್ಲ. ಅದೇ ರೀತಿ ಕಾರಂಜಾ ಜಲಾಶಯದಲ್ಲಿನ ಮೋಟಾರ್ ಹಾಗೂ ಟಿಸಿ ರಿಪೇರಿಗೆ ಕಳುಹಿಸಿದ್ದು, ಇಂದಿಗೂ ಮರಳಿ ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ಪುರಸಭೆ ಸಿಬ್ಬಂದಿ ಹೇಳುತ್ತಾರೆ.
ಪ್ರತಿ ತಿಂಗಳು ಸಮಸ್ಯೆ: ಕಳೆದ ಅನೇಕ ತಿಂಗಳಿಂದ ಪ್ರತಿ ತಿಂಗಳು ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಆಗುತ್ತಿದೆ. ಯಾವ ಕಾರಣಕ್ಕೆ ಪದೇಪದೇ ಮೋಟಾರ್, ಟಿಸಿ ದುರಸ್ತಿಗೆ ಬರುತ್ತಿವೆ ಎಂದು ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಪ್ರಶ್ನಿಸುತ್ತಿದ್ದಾರೆ. ಆಯಾ ವಾರ್ಡ್‌ಗಳ ಜನರು ಸಮಸ್ಯೆಯನ್ನು ಸದಸ್ಯರಿಗೆ ಹೇಳಿಕೊಂಡರೆ, ಅವರು ಪುರಸಭೆ ಅಧಿಕಾರಿ ಯಾವುದೇ ಕೆಲಸ ಮಾಡುತ್ತಿಲ್ಲಎಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ ಹಳೆ ಪ್ರದೇಶದಲ್ಲಿನ ಕೊಳವೆಬಾವಿಗಳಲ್ಲಿ ಹಾಗೂ ತೆರೆದ ಬಾವಿಗಳಲ್ಲಿ ಉಪ್ಪು ನೀರು ಇದ್ದು, ಕುಡಿಯಲು ಯೋಗ್ಯವಾಗಿಲ್ಲ. ಪುರಸಭೆ ಕುಡಿಯುವ ನೀರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಿಕೊಂಡು ಸಮಸ್ಯೆ ಆಗದಂತೆ ಕ್ರಮ ವಹಿಸಬೇಕಿದೆ. ಸ್ಥಳೀಯ ಶಾಸಕರು ಕೂಡ ನೀರಿನ ಸಮಸ್ಯೆಯತ್ತ ಮತ್ತು ಅಧಿಕಾರಿಗಳ ಕರ್ತವ್ಯದ ಕಡೆ ಗಮನಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮೋಟಾರ್ ದುರಸ್ತಿಗೆ ಬಂದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ರಿಪೇರಿಗೆ ಕಳುಹಿಸಿದ ಮೋಟಾರ್ ಹಾಗೂ ಟಿಸಿ ಇಂದಿಗೂ ಬಂದಿಲ್ಲ. ಪಟ್ಟಣದ ವಿವಿಧೆಡೆ ಕೊಳವೆ ಬಾವಿಗಳಿದ್ದು, ಜನರು ನೀರು ಬಳಸುವಂತೆ ತಿಳಿಸಲಾಗಿದೆ.- ಶಂಭುಲಿಂಗ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ
ಕುಡಿಯುವ ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಪುರಸಭೆ ಸದಸ್ಯರು ಕೂಡ ಗಮನಕ್ಕೆ ತಂದಿದ್ದಾರೆ. ಪದೇಪದೇ ನೀರಿನಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪುರಸಭೆ ಆಡಳಿತಾ ಧಿಕಾರಿ ಬಸವಕಲ್ಯಾಣ ಸಹಾಯಕ ಆಯುಕ್ತರಿಗೆ ಪಟ್ಟಣಕ್ಕೆ ಆಗಮಿಸಿ ಜನರ ಸಮಸ್ಯೆಗೆ ಸ್ಪಂದಿಸುವಂತೆ ತಿಳಿಸಿದ್ದೇನೆ. –ರಾಜಶೇಖರ ಪಾಟೀಲ, ಶಾಸಕರು ಹುಮನಾಬಾದ
-ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.