ಲಾಡವಂತಿ ಗ್ರಾಮದಲ್ಲಿ ಕಾಯಕೋತ್ಸವ ಚಾಲನೆ
ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದಾಗ ಇದು ತೀರ ಕಡಿಮೆಯಾಗಿದೆ.
Team Udayavani, Jan 16, 2021, 3:57 PM IST
ಬಸವಕಲ್ಯಾಣ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸದಲ್ಲಿ ಭಾಗವಹಿಸಬೇಕೆಂಬ ನಿಟ್ಟಿನಲ್ಲಿ ಹಮ್ಮಿಕೊಂಡ ಮಹಿಳಾ ಕಾಯಕೋತ್ಸವ ಅಭಿಯಾನಕ್ಕೆ ಲಾಡವಂತಿ ಗ್ರಾಮದಲ್ಲಿ ತಾಪಂ ಇಒ ಬೀರೇಂದ್ರಸಿಂಗ್ ಠಾಕೂರ್ ಚಾಲನೆ ನೀಡಿದರು. ಮಿರಖಲ್, ರಾಜೇಶ್ವರ, ಬಟಗೇರಾ ಸೇರಿದಂತೆ ವಿವಿಧ ಗ್ರಾಪಂ ವ್ಯಾಪ್ತಿಯ ಮನೆ-ಮನೆಗೆ ತೆರಳಿ ಅಭಿಯಾನದ ಉದ್ದೇಶ ಮತ್ತು ಮಹತ್ವದ ಬಗ್ಗೆ ತಿಳಿಸಿದರು.
ನಂತರ ಮಾತನಾಡಿದ ಅವರು, ಯೋಜನೆಯಡಿ ಪುರುಷ ಹಾಗೂ ಮಹಿಳೆಯರಿಗೆ ಸಮಾನ ಕೂಲಿ ಇದ್ದರೂ, ರಾಜ್ಯದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಸುಮಾರು ಶೇ .49 ಮಾತ್ರ ಇದೆ. ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದಾಗ ಇದು ತೀರ ಕಡಿಮೆಯಾಗಿದೆ. ಹೀಗಾಗಿ ಮಹಿಳೆ ಗವಹಿಸುವಿಕೆ ಹೆಚ್ಚಿಸಲು ಜ.15ರಿಂದ ಮಾ.15ರವರೆಗೆ ಮಹಿಳಾ ಕಾಯಕೋತ್ಸ ಹಮ್ಮಿಕೊಳ್ಳಲಾಗಿದೆ ಎಂದರು.
ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಕನಿಷ್ಟ ಶೇ.5 ಹೆಚ್ಚಿಸುವುದು ಹಾಗೂ ಮಹಿಳಾ ಪ್ರಧಾನ ಕುಟುಂಬ ಗುರುತಿಸುವುದು, ಕಾಮಗಾರಿ ಸ್ಥಳಗಳನ್ನು ಮಹಿಳೆ ಮತ್ತು ಮಕ್ಕಳ ಸ್ನೇಹಿಯನ್ನಾಗಿ ಮಾಡುವುದೇ ಅಭಿಯಾನದ ಉದ್ದೇಶವಾಗಿದೆ ಎಂದು ಮಹಿಳೆಯರಲ್ಲಿ ಜಾಗೃತಿ ಮೂಡಿಸಿದರು. ಈ ವೇಳೆ ತಾಪಂ ಎಡಿ ಸಂತೋಷ ಚವ್ಹಾಣ, ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಟಿ.ಸಿ. ಶಿವರಾಜ ಪಾಟೀಲ, ಬಿಎಫ್‌ಟಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.