ಬೀದರನಲ್ಲಿ ಲಕ್ಷ ಹೆಕ್ಟೇರ್‌ ಬೆಳೆ ಹಾನಿ

Team Udayavani, Sep 21, 2020, 5:57 PM IST

bofara-tdy-2

ಭಾಲ್ಕಿ: ತಾಲೂಕಿನ ಬ್ಯಾಲಹಳ್ಳಿ (ಕೆ) ಗ್ರಾಮದ ಹೊರ ವಲಯದಲ್ಲಿನ ಕಾರಂಜಾ ಜಲಾಶಯಕ್ಕೆ ರವಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕಈಶ್ವರ ಖಂಡ್ರೆ ಭೇಟಿ ನೀಡಿ ಜಲಾಶಯದಲ್ಲಿನ ನೀರಿನ ಮಟ್ಟ ವೀಕ್ಷಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಮಳೆಯಿಂದ ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಹೆಕ್ಟೇರ್‌ ಬೆಳೆ ಹಾನಿ ಆಗಿದ್ದು, ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಸ್ತೆ, ಸೇತುವೆಗಳು ಹಾಳಾಗಿವೆ. ಸಾಕಷ್ಟು ಕಡೆಗಳಲ್ಲಿ ಮನೆಗಳು ಕುಸಿತ ಕಂಡಿವೆ. ಮಳೆಯಿಂದ ಬಹುತೇಕ ಹೊಲಗಳು ಜಲಾವೃತಗೊಂಡಿವೆ. ಸೋಯಾಬಿನ್‌, ಉದ್ದು, ತೊಗರಿ ಬೆಳೆ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಸಮಾರೋಪಾದಿಯಲ್ಲಿ ಪ್ರವಾಹ ನಿರ್ವಹಿಸಲು ಜಿಲ್ಲೆಗೆ ತಕ್ಷಣ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂ ಪರಿಹಾರ ನೀಡುವಂತೆ ವಿಧಾನ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು.

ಜಿಲ್ಲೆಯ ರೈತರ ಜೀವನಾಡಿಯಾದ ಈ ಜಲಾಶಯದಲ್ಲಿ 7.69 ಟಿಎಂಸಿ ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಇದ್ದು, ಜಿಲ್ಲೆಯಲ್ಲಿ ಈ ಬಾರಿ ವ್ಯಾಪಕವಾಗಿ ಮಳೆಯಾದ ಪರಿಣಾಮ ಇದು ವರೆಗೂ 4 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳಹರಿವು ಹೆಚ್ಚಿದ್ದು, ಮುಂದಿನ ಕೆಲ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಲಾಶಯ ತುಂಬುವ ಸಾಧ್ಯತೆ ಇದೆ. ಇದರಿಂದ ಜಿಲ್ಲೆಯಲ್ಲಿನ ಕುಡಿವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಮಂತ್ರಿಯಿದ್ದ ಸಂದರ್ಭದಲ್ಲಿಅತಿವಾಳ ಹಾಗೂ ಕಾರಂಜಾ ಏತ ನೀರಾವರಿ  ಯೋಜನೆ, 131 ಕಿಮೀ. ಬಲದಂಡೆ, 31 ಕಿಮೀ. ಎಡದಂಡೆ ಕಾಲುವೆ ಆಧುನೀಕರಣಕ್ಕೆ ಯೋಜನೆ ರೂಪಿಸಿ, ಅನುದಾನ ಬಿಡುಗಡೆಗೊಳಿಸಿದ್ದೇನೆ. ಇದೀಗ ಸಿಸಿ ಲೈನಿಂಗ್‌ ಕಾಮಗಾರಿ ಪೂರ್ಣಗೊಂಡಿದೆ. ತಾಲೂಕಿನ 29 ಸಾವಿರ ಹೆಕ್ಟೇರ್‌ ಭೂಮಿಗೆ ನೀರು ಹರಿಯಲಿದ್ದು, ರೈತರಿಗೆ ವರದಾನ ಆಗಲಿದೆ ಎಂದು ಹೇಳಿದರು.

4 ವರ್ಷಗಳ ಬಳಿಕ ಕಾರಂಜಾ ಭರ್ತಿ ಆಗುತ್ತಿದ್ದು, ಕೃಷ್ಣಾ ಕಣಿವೆಯಿಂದ ಪ್ರತಿ ವರ್ಷ ಕಾರಂಜಾ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಸಿಎಂ ಗಮನಕ್ಕೂ ತಂದಿದ್ದು, ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌., ಬಸವಕಲ್ಯಾಣ ಸಹಾಯಕ ಆಯುಕ್ತ ಭುವನೇಶ ಪಾಟೀಲ, ತಹಶೀಲ್ದಾರ್‌ ಅಣ್ಣರಾವ್‌ ಪಾಟೀಲ, ಉಪ ತಹಶೀಲ್ದಾರ್‌ ದಿಲ್‌ರಾಜ ಪಸರಗಿ, ರಾಜಶೇಖರ ಪಾಟೀಲ, ಶಶಿಧರ ಕೋಸಂಬೆ ಇತರರು ಇದ್ದರು.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.