ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ
Team Udayavani, Jan 12, 2018, 11:18 AM IST
ಬೀದರ: ದಲಿತ, ಹಿಂದುಳಿದ ವಿದ್ಯಾರ್ಥಿಗಳು ಸಹ ಸ್ಪರ್ಧಾತ್ಮ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮಾಹಿತಿ ಪಡೆದು ಮುಂದೆ ಬರಲಿ ಎಂಬ ಉದ್ದೇಶದಿಂದ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದ ರಂಗ ಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ ಮತ್ತು ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ದೇಶದ ಆಸ್ತಿ ಮತ್ತು ಸಂಪತ್ತು. ನಮ್ಮಲ್ಲಿ ವಿದ್ಯಾರ್ಥಿಗಳು ಪ್ರತಿಭಾವಂತರು ಇರುವುದರಿಂದ ವಿದೇಶದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರ್ಧಾತ್ಮಕತೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಷಯಗಳ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಪಡೆಯಬಹುದು. ಇದರ ಉಪಯೋಗವನ್ನು ನಾವು ಒಳ್ಳೆಯದಾಗಿ ಬಳಸಿಕೊಂಡರೆ ಅನೇಕ ವಿಷಯಗಳಲ್ಲಿ ಪರಿಣತಿ ಹೊಂದಬಹುದು. ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಉಚಿತ ವೈಫೈ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಹೇಳಿದರು.
ಶಾಸಕ ರಹೀಮ್ ಖಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಹಲವಾರು ಕನಸು ಕಟ್ಟಿಕೊಂಡಿರುತ್ತಾರೆ. ಅದಕ್ಕೆ ತಕ್ಕ ಪರಿಶ್ರಮ ಪಡುವುದಾದರೆ ನಿಮ್ಮ ಕನಸು ನನಸಾಗುತ್ತದೆ. ನಮ್ಮ ಸರ್ಕಾರವು ಅನೇಕ ಸೌಲಭ್ಯಗಳನ್ನು ದಲಿತ ಹಿಂದುಳಿದ ವರ್ಗಗಳಿಗೆ ಕಲ್ಪಿಸಿಕೊಟ್ಟಿದೆ ಇದರ ಅವಕಾಶ ಪಡೆದುಕೊಳ್ಳಿ ಎಂದು ಕರೆ ನೀಡಿದರು.
ಶಾಸಕ ರಾಜಶೇಖರ ಪಾಟೀಲ, ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜಯ ಜಾಗೀರದಾರ ಸೇರಿದಂತೆ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಪಾಲ್ಗೊಂಡಿದ್ದರು. ವೈಶಾಲಿ ಪ್ರಾರ್ಥಿಸಿದರು ಗಡ್ಡೆ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.