ಶಾಸಕ ಪಾಟೀಲ್ ವಿರುದ್ದ ಕ್ರಮಕ್ಕೆ ಆಗ್ರಹ
Team Udayavani, Oct 19, 2021, 1:32 PM IST
ರಾಯಚೂರು: ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸುವಂತೆ ನಾಡ ವಿರೋಧಿ ಹೇಳಿಕೆ ನೀಡಿದ ನಗರ ಬಿಜೆಪಿ ಶಾಸಕ ಡಾ| ಶಿವರಾಜ್ ಪಾಟೀಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣೆ ವೇದಿಕೆ (ಸಂಘಟನೆಗಳ ಒಕ್ಕೂಟ) ಸೋಮವಾರ ಪ್ರತಿಭಟನೆ ನಡೆಸಿತು.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಈಚೆಗೆ ನಗರಕ್ಕೆ ಆಗಮಿಸಿದ ಸಚಿವ ಪ್ರಭು ಚವ್ಹಾಣ ಎದುರು ಮಾತನಾಡುವಾಗ ಶಾಸಕರು ಈ ರೀತಿ ಮಾತನಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಕರ್ನಾಟಕಕ್ಕೆ ಅಪಮಾನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.
ಈ ಭಾಗದ ಅಭಿವೃದ್ಧಿ ಸರ್ಕಾರ ಸಾಕಷ್ಟು ಒತ್ತು ನೀಡಿದೆ. ಹಿಂದಿನ ಸಿಎಂ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಕೂಡ ಮಾಡಿದೆ. ಆದರೆ, ಡಾ| ಶಿವರಾಜ್ ಪಾಟೀಲ್ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ನಾಡು ನುಡಿ ರಕ್ಷಣೆಗೆ ಬದ್ಧ ಎಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಂದ ಇಂತಹ ಹೇಳಿಕೆಗಳನ್ನು ಬಂದಿರುವುದು ಖಂಡನೀಯ ಎಂದರು.
ಇದನ್ನೂ ಓದಿ: ಫೆಬ್ರವರಿಯಲ್ಲಿ ವಿನಯ್ ರಾಜ್‌ಕುಮಾರ್ ರ ‘ಅಂದೊಂದಿತ್ತು ಕಾಲ’ ಚಿತ್ರ ಬಿಡುಗಡೆ
ರಾಜ್ಯ ಮತ್ತು ಜಿಲ್ಲೆಯ ನೆಲ ಜಲ ಭಾಷೆಯನ್ನು ಮರೆತು ಮಾತನಾಡಿದ್ದಾರೆ. ಅವರ ಹೇಳಿಕೆ ಕಲ್ಯಾಣ ಕರ್ನಾಟಕಕ್ಕಾಗಿ ಹೋರಾಟ ಮಾಡಿದ ನಾಯಕರಿಗೆ ಅಪಮಾನ ಮಾಡಿದಂತಾಗಿದೆ. ಶಾಸಕರ ವಿರುದ್ಧ ನಾಡದ್ರೋಹ ಕಾನೂನಡಿ ಪ್ರಕರಣ ದಾಖಲಿಸಬೇಕು. ಶಾಸಕರನ್ನು ಸರ್ಕಾರ ಕೂಡ ಉಚ್ಛಾಟನೆ ಮಾಡಬೇಕು. ಇಲ್ಲವಾದರೆ ಕನ್ನಡಪರ ಸಂಘಟನೆಗಳಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯಾಧ್ಯಕ್ಷ ಚಳವಳಿ ಛಲಪತಿಗೌಡ, ಕನ್ನಡಿಗರ ರಕ್ಷಣಾ ಸಂಘದ ರಾಜ್ಯಾಧ್ಯಕ್ಷ ಇಮ್ರಾನ್ ಬಡೆಸಾಬ್, ಕಲ್ಯಾಣ ಕರ್ನಾಟಕ ಭಾಗದ ಅಧ್ಯಕ್ಷ ಶಿವು ಮೋನಯ್ಯ ಎಲ್.ಡಿ ನಾಯಕ, ಇಂದಿರಾ, ನರಸಿಂಹ, ಶ್ರೀನಿವಾಸ ಕೊಪ್ಪರ, ಶμ ಸೇರಿದಂತೆ ಅನೇಕರಿದ್ದರು.
ಸ್ವಾಭಿಮಾನಿ ಕರವೇ ಹೋರಾಟ
ಶಾಸಕರ ಜಿಲ್ಲೆ ವಿಭಜನೆ ಹೇಳಿಕೆ ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಈ ಕುರಿತು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಶಾಸಕ ಡಾ|ಶಿವರಾಜ್ ಪಾಟೀಲ್ ಅವರ ಸದಸ್ಯತ್ವ ರದ್ದುಗೊಳಿಸಬೇಕು. ಅಖಂಡ ಕರ್ನಾಟಕಕ್ಕೆ ಧಕ್ಕೆ ತರುವಂತ ಹೇಳಿಕೆ ನೀಡಿರುವುದು ಖಂಡನೀಯ. ಕನ್ನಡ ನೆಲ ಜಲ ರಕ್ಷಣೆಗೆ ಜೀವನವನ್ನೇ ಮುಡಿಪಾಗಿಟ್ಟ ನಾಯಕರಿಗೆ ಅಪಮಾನವಾಗುವಂತ ಹೇಳಿಕೆ ನೀಡಿರುವುದು ಅಕ್ಷಮ್ಯ ಎಂದು ದೂರಿದರು. ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಕೆ.ಬಸವರಾಜ, ಯುವ ಘಟಕದ ಅಧ್ಯಕ್ಷ ಪ್ರವೀಣ, ಉಪಾಧ್ಯಕ್ಷ ಆಂಜನೇಯ ಸೇರಿದಂತೆ ಅನೇಕರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.